ಬೆಳಗಾವಿ: ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್ ಡಿ ಆರ್ ಎಫ್) ಸಿಪಿಐ ಶ್ರೀಶೈಲ ಚೌಗಲೆ (37 )ಆತ್ಮಹತ್ಯೆ ಮಾಡಿಕೊಂಡ ಘಟನೆ ಚನ್ನಮ್ಮ ನಗರದಲ್ಲಿ ಬೆಳಕಿಗೆ ಬಂದಿದೆ.
ಅವರ ಮನೆಯಲ್ಲಿ ಈ ಘಟನೆ ನಡೆದಿದೆ. ಮನೆಯ ಕೋಣೆಯ ಬಾಗಿಲು ಹಾಕಿಕೊಂಡಿದ್ದ ಸಂದರ್ಭದಲ್ಲಿ ಅನುಮಾನಗೊಂಡ ಅವರ ಪತ್ನಿ , ತಕ್ಷಣ ಎಸ್ ಡಿ ಆರ್ ಎಫ್ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಸಿಬ್ಬಂದಿ ಆಗಮಿಸಿ ಕೊಠಡಿಯ ಬಾಗಿಲು ಮುರಿದು ಅವರನ್ನು ಹೊರತೆಗೆದು ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಷ್ಟರಲ್ಲೇ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಆತ್ಮಹತ್ಯೆಗೆ ಕಾರಣ ಗೊತ್ತಾಗಿಲ್ಲ. ಉದ್ಯಮಬಾಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
