Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಆಸ್ಪತ್ರೆಯಲ್ಲಿ ಅಗ್ನಿ ಅವಘಡ, 10 ಮಕ್ಕಳ ಸಾವು

ಝಾನ್ಸಿ (ಉತ್ತರ ಪ್ರದೇಶ): ಝಾನ್ಸಿಯ ಮಹಾರಾಣಿ ಲಕ್ಷ್ಮೀಬಾಯಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ನವಜಾತ ಶಿಶುಗಳ ತೀವ್ರನಿಗಾ ಘಟಕದಲ್ಲಿ ಶುಕ್ರವಾರ ಅಗ್ನಿ ಅವಘಡ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಕನಿಷ್ಠ 10 ಮಕ್ಕಳು ಮೃತಪಟ್ಟಿದ್ದಾರೆ ಎಂದು ಪ್ರಾಥಮಿಕ ವರದಿಗಳು ಹೇಳಿವೆ.

ರಾತ್ರಿ 10.45ರ ವೇಳೆಗೆ ಬೆಂಕಿ ಅವಘಡ ಸಂಭವಿಸಿತು. 37 ಮಕ್ಕಳನ್ನು ರಕ್ಷಿಸಲಾಗಿದೆ. ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆ ಇದೆ ಎಂದು ಜಿಲ್ಲಾಧಿಕಾರಿ ಅವಿನಾಶ್ ಕುಮಾರ್ ಹೇಳಿದ್ದಾರೆ.

ಶಾರ್ಟ್ ಸರ್ಕಿಟ್‌ನಿಂದಾಗಿ ಬೆಂಕಿ ಹೊತ್ತಿಕೊಂಡಿರುವ ಸಾಧ್ಯತೆ ಇದೆ. ಈ ಕುರಿತು ತನಿಖೆ ನಡೆಸುವುದಕ್ಕಾಗಿ ಸಮಿತಿ ರಚಿಸಲಾಗಿದೆ ಎಂದೂ ಹೇಳಿದ್ದಾರೆ.

ದುರಂತದಲ್ಲಿ ಮಕ್ಕಳು ಮೃತ ಪಟ್ಟಿರುವ ಕುರಿತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರೂ 'ಎಕ್ಸ್‌'ನಲ್ಲಿ ಪೋಸ್ಟ್ ಮಾಡಿದ್ದಾರೆ. ಸುಟ್ಟು ಕರಕಲಾದ ದೇಹಗಳಿರುವ ವಿಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿವೆ.

ಜೀವ ರಕ್ಷಿಸಿಕೊಳ್ಳಲು ಅಲ್ಲಿದ್ದವರು ಪ್ರಯತ್ನಿಸಿದ ಕಾರಣ, ಆಸ್ಪತ್ರೆಯಲ್ಲಿ ಕಾಲ್ತುಳಿತದಂತಹ ಸನ್ನಿವೇಶ ನಿರ್ಮಾಣವಾಗಿತ್ತು. ವಾರ್ಡ್‌ನಲ್ಲಿ ದಟ್ಟ ಹೊಗೆ ತುಂಬಿತ್ತು. ವೈದ್ಯರು ಹಾಗೂ ಆಸ್ಪತ್ರೆ ಸಿಬ್ಬಂದಿ, ಕಿಟಕಿ ಗಾಜುಗಳನ್ನು ಒಡೆದು ರೋಗಿಗಳನ್ನು ಪಾರು ಮಾಡಲು ಪ್ರಯತ್ನಿಸಿದರು.

ರೋಗಿಗಳು ಹಾಗೂ ಅವರ ಆರೈಕೆ ಮಾಡುವವರು ಆತಂಕಕ್ಕೆ ಒಳಗಾಗಿರುವುದು, ಪೊಲೀಸರು ಅವರ ರಕ್ಷಣೆಗೆ ಪ್ರಯತ್ನಿಸುತ್ತಿದ್ದರು ಎನ್ನಲಾದ ದೃಶ್ಯಗಳಿರುವ ವಿಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.

ಜಿಲ್ಲಾಡಳಿತ ಹಾಗೂ ಅಗ್ನಿ ಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದು, ರಕ್ಷಣಾ ಕಾರ್ಯ ಕೈಗೊಂಡಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕನ್ನಡ ಸಾಹಿತ್ಯ ಪರಿಷತ್ ಸರ್ಜರಿಗೆ ಹಾರ್ಟ್ ಸರ್ಜನ್ ಬೆಳಗಾವಿ ಮಣ್ಣಿನ ಮಗಳು ಡಾ.ವಿಜಯಲಕ್ಷ್ಮೀ ಬಾಳೆಕುಂದ್ರಿ ಸಜ್ಜು ಚುನಾವಣೆ ಸ್ಪರ್ಧೆಗೆ ನಿರ್ಧಾರ | ಗೆದ್ದರೆ ಪ್ರಥಮ ಅಧ್ಯಕ್ಷೆ, ತೋಂಟದಾರ್ಯ ಮಠದ ಜಗದ್ಗುರುಗಳು ಬೆಂಬಲಸುಪ್ರೀಂ ಕೋರ್ಟಿನಲ್ಲಿರುವ ಗಡಿ ವಿವಾದ ಪ್ರಕರಣದ ತ್ವರಿತ ವಿಚಾರಣೆಗೆ ಮಹಾರಾಷ್ಟ್ರ ಸರಕಾರ ಅರ್ಜಿ ಸಲ್ಲಿಸಿರುವ ಕುರಿತು ಪ್ರತಿಕ್ರಿಯಿಸಿದ ಅಶೋಕ ಚಂದರಗಿಅಯೋಧ್ಯೆ ರಾಮಮಂದಿರದ ಮೊದಲ ಸಿಇಒ ಆಗಿ ನಿವೃತ್ತ ಏರ್‌ ಮಾರ್ಷಲ್‌ ಜೀತೇಂದ್ರ ಮಿಶ್ರ ನೇಮಕಸುಪ್ರೀಂ ಕೋರ್ಟಿನಲ್ಲಿರುವ ಗಡಿ ವಿವಾದ ಪ್ರಕರಣದ ತ್ವರಿತ ವಿಚಾರಣೆಗೆ ಮಹಾರಾಷ್ಟ್ರ ಸರಕಾರ ಅರ್ಜಿ ಸಲ್ಲಿಸಿರುವ ಕುರಿತು ಪ್ರತಿಕ್ರಿಯಿಸಿದ ಅಶೋಕ ಚಂದರಗಿ8 ಜನ ಮೊಬೈಲ್ ಕಳ್ಳರನ್ನು ಬಂಧಿಸಿದ ಕಟಕೋಳ ಪೊಲೀಸರು200 ವರ್ಷಗಳ ಬಳಿಕ ಕುಟುಂಬದಲ್ಲಿ ಹೆಣ್ಣು ಮಗುವಿನ ಜನನ : ರಥದಲ್ಲಿ ಕುಳ್ಳಿರಿಸಿ ಮೆರವಣಿಗೆ ಮೂಲಕ ಮನೆಗೆ ಕರೆತಂದ ಕುಟುಂಬ !ನಕಲಿ ದಾಖಲೆ ಸೃಷ್ಟಿಸಿ ಜಮೀನು ಮಾರಾಟ ಮಾಡಿದ್ದ ಅಜ್ಜಿಯ ಬಂಧನಪುತ್ರಿಯರ ಶಿಕ್ಷಣಕ್ಕಾಗಿ ಸೀರೆಯುಟ್ಟು ಬರಿಗಾಲಿನಲ್ಲಿ ಓಡಿ ʼಮ್ಯಾರಥಾನ್‌ʼನಲ್ಲಿ ಮೊದಲ ಸ್ಥಾನ ಪಡೆದ 47 ವರ್ಷದ ತಾಯಿ !ರಷ್ಯಾ ಅತಿಹೆಚ್ಚು ತೈಲ ಉತ್ಪಾದನೆ ಮಾಡುತ್ತಿದ್ರೂ ಈಗ ಅದಕ್ಕೇ ದಾಖಲೆ ಪ್ರಮಾಣದಲ್ಲಿ ಪೆಟ್ರೋಲ್ ಪೂರೈಸುತ್ತಿರುವ ಭಾರತ ! ಕಾರಣ ?ವೈಶ್ಯ ಸಮಾಜದ ಏಕತೆ, ಪ್ರಗತಿಗೆ ಸೆ.6ರಂದು ಬೆಳಗಾವಿಯಲ್ಲಿ ವೈಶ್ಯ ಸಮ್ಮೇಳನ