Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಥಾಣೆಯಲ್ಲಿ ಸೇತುವೆ ನಿರ್ಮಾಣಕ್ಕೆ ಬಳಸುವ ಗಿರ್ಡರ್ ಲಾಂಚರ್ ಕುಸಿದು 16 ಮಂದಿ ಸಾವು

ಮುಂಬೈ:
ಥಾಣೆಯಲ್ಲಿ ಸಮೃದ್ಧಿ ಎಕ್ಸ್‌ಪ್ರೆಸ್ ಹೆದ್ದಾರಿಯ ಮೂರನೇ ಹಂತದ ನಿರ್ಮಾಣದಲ್ಲಿ ಬಳಸಲಾದ ಗಿರ್ಡರ್ ಲಾಂಚರ್ ಯಂತ್ರವು ಕುಸಿದು ಬಿದ್ದು ಕನಿಷ್ಠ 16 ಜನರು ಸಾವಿಗೀಡಾಗಿದ್ದಾರೆ ಮತ್ತು 4 ಮಂದಿ ಗಾಯಗೊಂಡಿದ್ದಾರೆ. ಮಂಗಳವಾರ ನಸುಕಿನ ಜಾವ ಈ ಅಪಘಾತ ಸಂಭವಿಸಿದೆ.
ಥಾಣೆಯ ಸರ್ಲಾಂಬೆ ಗ್ರಾಮದ ಬಳಿ ಸೇತುವೆ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ಅಪಘಾತ ಸಂಭವಿಸಿದೆ.

ಮೃತರ ಹೊರತಾಗಿ ಇನ್ನೂ ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ಗಿರ್ಡರ್ ಯಂತ್ರಕ್ಕೆ ಸಂಪರ್ಕ ಕಲ್ಪಿಸುವ ಕ್ರೇನ್ ಮತ್ತು ಸ್ಲ್ಯಾಬ್ ಸುಮಾರು 100 ಅಡಿ ಎತ್ತರದಿಂದ ಬಿದ್ದು ಭಾರಿ ಅವಘಡ ಸಂಭವಿಸಿದೆ. ಗಾಯಾಳುಗಳೊಂದಿಗೆ ಮೃತ ದೇಹಗಳನ್ನು ಸ್ಥಳೀಯ ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಪೊಲೀಸ್ ಸಿಬ್ಬಂದಿ, ಎನ್‌ಡಿಆರ್‌ಎಫ್ ಸಿಬ್ಬಂದಿ ಮತ್ತು ಅಗ್ನಿಶಾಮಕ ಅಧಿಕಾರಿಗಳು ರಕ್ಷಣಾ ಮತ್ತು ಪರಿಹಾರ ಕಾರ್ಯದಲ್ಲಿ ತೊಡಗಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗುವ ಆತಂಕವಿದೆ.
ಹೆದ್ದಾರಿ ಮತ್ತು ಹೈ-ಸ್ಪೀಡ್ ರೈಲು ಸೇತುವೆ ನಿರ್ಮಾಣ ಯೋಜನೆಗಳಲ್ಲಿ ಪ್ರಿಕಾಸ್ಟ್ ಬಾಕ್ಸ್ ಗಿರ್ಡರ್‌ಗಳನ್ನು ಸ್ಥಾಪಿಸಲು ಯಂತ್ರವನ್ನು ಬಳಸಲಾಗುತ್ತದೆ.
ಇದು ಹಿಂದೂ ಹೃದಯಸಾಮ್ರಾಟ್ ಬಾಳಾಸಾಹೇಬ್ ಠಾಕ್ರೆ ಮಹಾರಾಷ್ಟ್ರ ಸಮೃದ್ಧಿ ಮಹಾಮಾರ್ಗ ಎಂದು ಹೆಸರಿಸಲಾಗಿದ್ದು, ಮುಂಬೈ ಮತ್ತು ನಾಗ್ಪುರವನ್ನು ಸಂಪರ್ಕಿಸುವ 701-ಕಿಮೀ ಉದ್ದದ ಎಕ್ಸ್‌ಪ್ರೆಸ್‌ವೇ ಆಗಿದೆ.
ಪ್ರಧಾನಿ ನರೇಂದ್ರ ಮೋದಿ ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ.ಗಳು ಹಾಗೂ ಘಟನೆಯಲ್ಲಿ ಗಾಯಗೊಂಡವರಿಗೆ 50 ಸಾವಿರ ರೂ.ರೂ.ಗಳ ಪರಿಹಾರವನ್ನು ಘೋಷಿಸಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿಭೋಜಶಾಲಾ–ಕಮಾಲ್ ಮೌಲಾ ಪ್ರಕರಣ: ಶುಕ್ರವಾರದ ನಮಾಜ್‌ಗೆ ಮುಸ್ಲಿಮರಿಗೆ ಪ್ರತ್ಯೇಕ ಸ್ಥಳ ಕಲ್ಪಿಸಲು ಸುಪ್ರೀಂ ಕೋರ್ಟ್ ನಿರ್ದೇಶನ2022ರಲ್ಲಿ ಉಕ್ರೇನ್ ಮೇಲೆ ಅಣ್ವಸ್ತ್ರ ದಾಳಿ ನಡೆಸದಂತೆ ರಷ್ಯಾವನ್ನು ತಡೆದದ್ದು ಮೋದಿ : ಪೋಲೆಂಡ್ ಸಚಿವರ ಹೇಳಿಕೆಚೊಚ್ಚಲ ಬಾಹ್ಯಾಕಾಶ ಯಾನ ಕೈಗೊಂಡ ಭಾರತೀಯ ಮೂಲದ ಗಗನಯಾತ್ರಿ ಅನಿಲ ಮೆನನ್ಸಾವೂ ಬೇರ್ಪಡಿಸಲಿಲ್ಲ ಇವರಿಬ್ಬರ ಬಂಧವನ್ನು…; ಯಜಮಾನನ ಶವಯಾತ್ರೆಯಲ್ಲೇ ಪ್ರಾಣ ಬಿಟ್ಟ ನಿಷ್ಠಾವಂತ ನಾಯಿ ʼದುಗ್ಗುʼ