Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಪಾಕಿಸ್ತಾನದ 700 ಡ್ರೋನ್, ಕೆಲವು ಜೆಟ್ ಗಳು ಧ್ವಂಸ ; ಭಾರತದ ಎಲ್ಲ ಪೈಲಟ್ ಗಳು ಸುರಕ್ಷಿತ : ಡಿಜಿಎಂಒ

ನವದೆಹಲಿ: ನಾಲ್ಕು ದಿನಗಳಿಂದ ನಡೆದ ಭಾರತ- ಪಾಕಿಸ್ತಾನ ನಡುವಿನ ಸೇನಾ ಸಂಘರ್ಷದಲ್ಲಿ ಪಾಕಿಸ್ತಾನದ ಶೆಲ್, ಡ್ರೋನ್ ದಾಳಿಗಳಿಂದ ಯಾವುದೇ ಹಾನಿಯಾಗಿಲ್ಲ ಎಂದು ಏರ್ ಮಾರ್ಷಲ್ ಅವಧೇಶಕುಮಾರ್ ಭಾರ್ತಿ ಭಾನುವಾರ ದೃಢಪಡಿಸಿದ್ದಾರೆ.

ಸೇನೆಯ ಡಿಜಿಎಂಒ (DGMO) ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇ 7 ರಂದು ಪಾಕಿಸ್ತಾನಿ ಸೇನೆ ನಡೆಸಿದ ಶೆಲ್ ದಾಳಿಯಿಂದ ನಮ್ಮ ನೆಲದಲ್ಲಿ ಯಾವುದೇ ಹಾನಿಯಾಗದಂತೆ ಭಾರತದ ವಾಯು ರಕ್ಷಣಾ ವ್ಯವಸ್ಥೆ ಸಜ್ಜಾಗಿತ್ತು. ಮೇ 8 ಮತ್ತು 9 ರಂದು ರಾತ್ರಿ 10:30 ಗಂಟೆಗೂ ಮುನ್ನಾ ಭಾರತದ ಹಲವಾರು ನಗರಗಳಲ್ಲಿ ಡ್ರೋನ್‌ಗಳು, ಮಾನವ ರಹಿತ ವೈಮಾನಿಕ ವಿಮಾನಗಳು (UAVS) ಮತ್ತು ಮಾನವರಹಿತ ಯುದ್ಧ ವೈಮಾನಿಕ ವಾಹನ (UCAVS) ಮೂಲಕ ಪಾಕಿಸ್ತಾನ ಸೇನೆಯು ದಾಳಿಗೆ ಯತ್ನಿಸಿತು. ಮೇ 7 ರಂದು ಮಾನವ ರಹಿತ ವೈಮಾನಿಕ ವಿಮಾನ (UAV) ಗಳನ್ನು ನಿಯೋಜಿಸಿದ್ದ ಪಾಕಿಸ್ತಾನ ನಂತರದ ದಿನಗಳಲ್ಲಿ ಅವುಗಳ ಸಂಖ್ಯೆಯನ್ನು ಕಡಿಮೆ ಮಾಡಿತ್ತು. ನಾಗರಿಕರಿಗೆ ಕಿರುಕುಳ ನೀಡಲು ಸೇನೆಯು ಹೆಲಿಕಾಪ್ಟರ್ ಮೂಲಕ ದಾಳಿ ನಡೆಸಿತ್ತು ಎಂದು ಮಾಹಿತಿ ನೀಡಿದರು.
ಪಾಕಿಸ್ತಾನದ 700 ಡ್ರೋನ್ ಗಳ ಧ್ವಂಸ…
ಭಾರತದ ವಾಯುನೆಲೆ, ನಾಗರಿಕರನ್ನು ಗುರಿಯಾಗಿಸಿ ನಿರಂತರ ದಾಳಿ ನಡೆಸಿದರೂ ಭಾರತ ಪಾಕಿಸ್ತಾನದ ಟ್ರೋನ್‌ಗಳನ್ನು ಹೊಡೆದುರುಳಿಸುವಲ್ಲಿ ಅಥವಾ ಹಿಮ್ಮೆಟ್ಟಿಸುವಲ್ಲಿ ಯಶಸ್ವಿಯಾಯಿತು. ಮೇ 8 ರ ಸಂಜೆ ಪಾಕಿಸ್ತಾನ ಸೇನೆಯು ಭಾರತೀಯ ವಾಯುನೆಲೆಗಳನ್ನು ಗುರಿಯಾಗಿಸಿಕೊಂಡು ಯುದ್ಧ ವಿಮಾನಗಳು ಮತ್ತು ಅನೇಕ ಡ್ರೋನ್ ದಾಳಿ ನಡೆಸಿತು. ಆದರೆ ಪೆಚೋರಾ, ಗರುಡಾ ಸ್ನೈಪರ್ಸ್ ಮತ್ತು ಐಎಎಫ್‌ (IAF) ಸಮರ್‌ನಂತಹ ಭಾರತದ ವಾಯು ರಕ್ಷಣಾ ವ್ಯವಸ್ಥೆಗಳಿಂದ 700 ಡ್ರೋನ್ ಗಳನ್ನು ಹೊಡೆದುರುಳಿಸಲಾಯಿತು ಎಂದು ತಿಳಿಸಿದರು.
ಡಿಜಿಎಂಒ (DGMO) ಲೆಫ್ಟಿನೆಂಟ್ ಜನರಲ್ ರಾಜೀವ ಘಾಯ್, ಶತ್ರುರಾಷ್ಟ್ರದ ಯಾವುದೇ ರಕ್ಷಣಾ ವ್ಯವಸ್ಥೆಯನ್ನು ಗುರಿಯಾಗಿಸುವ ಸಾಮರ್ಥ್ಯವನ್ನು ಭಾರತ ಹೊಂದಿದೆ. ಆದರೆ ಸಂಯಮದಿಂದ ಕಾರ್ಯನಿರ್ವಹಿಸುತ್ತದೆ ಎಂದು ಪುನರುಚ್ಚರಿಸಿದರು.
ಕೆಲವು ಪಾಕ್ ವಿಮಾನಗಳ ಧ್ವಂಸ…
ಶತ್ರು ವಿಮಾನಗಳು ಭಾರತೀಯ ವಾಯು ಪ್ರದೇಶಕ್ಕೆ ಬಾರದಂತೆ ಹೊಡೆದುರುಳಿಸಲಾಗಿದೆ. ಆದರೆ, ಎಷ್ಟು ವಿಮಾನಗಳನ್ನು ಹೊಡೆದುರುಳಿಸಲಾಗಿದೆ ಎಂಬುದರ ಬಗ್ಗೆ ನಿಖರವಾದ ಸಂಖ್ಯೆ ಗೊತ್ತಿಲ್ಲ. ಈ ಸಂಬಂಧ ತಾಂತ್ರಿಕ ವಿವರಗಳನ್ನು ಪಡೆಯುತ್ತಿದ್ದೇವೆ ಎಂದು ಏರ್ ಮಾರ್ಷಲ್ ತಿಳಿಸಿದರು.
ಆಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿ ಭಾರತದ ಎಲ್ಲಾ ಪೈಲಟ್ ಗಳು ಸುರಕ್ಷಿತವಾಗಿ ಮರಳಿದ್ದಾರೆ ಎಂದು ರಾಜೀವ ಘಾಯ್ ತಿಳಿಸಿದರು. ಕಾರ್ಯಾಚರಣೆ ವೇಳೆ ಭಾರತಕ್ಕೆ ಆದ ನಷ್ಟ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಯುದ್ಧದ ಸನ್ನಿವೇಶದಲ್ಲಿ ನಷ್ಟ ಅನಿವಾರ್ಯ ಎಂಬುದನ್ನು ಒಪ್ಪಿಕೊಂಡರು. ಯುದ್ಧದ ಸಂದರ್ಭದಲ್ಲಿ ನಷ್ಟಗಳು ಯುದ್ಧದ ಒಂದು ಭಾಗವಾಗಿರುತ್ತದೆ. ಇನ್ನೂ ಕಾರ್ಯಾಚರಣೆಯ ಸನ್ನಿವೇಶದಲ್ಲಿರುವುದರಿಂದ ಎಷ್ಟು ನಷ್ಟವಾಗಿದೆ ಎಂಬುದನ್ನು ಬಹಿರಂಗಪಡಿಸಲು ಆಗುವುದಿಲ್ಲ ಎಂದು ತಿಳಿಸಿದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿಭೋಜಶಾಲಾ–ಕಮಾಲ್ ಮೌಲಾ ಪ್ರಕರಣ: ಶುಕ್ರವಾರದ ನಮಾಜ್‌ಗೆ ಮುಸ್ಲಿಮರಿಗೆ ಪ್ರತ್ಯೇಕ ಸ್ಥಳ ಕಲ್ಪಿಸಲು ಸುಪ್ರೀಂ ಕೋರ್ಟ್ ನಿರ್ದೇಶನ2022ರಲ್ಲಿ ಉಕ್ರೇನ್ ಮೇಲೆ ಅಣ್ವಸ್ತ್ರ ದಾಳಿ ನಡೆಸದಂತೆ ರಷ್ಯಾವನ್ನು ತಡೆದದ್ದು ಮೋದಿ : ಪೋಲೆಂಡ್ ಸಚಿವರ ಹೇಳಿಕೆಚೊಚ್ಚಲ ಬಾಹ್ಯಾಕಾಶ ಯಾನ ಕೈಗೊಂಡ ಭಾರತೀಯ ಮೂಲದ ಗಗನಯಾತ್ರಿ ಅನಿಲ ಮೆನನ್ಸಾವೂ ಬೇರ್ಪಡಿಸಲಿಲ್ಲ ಇವರಿಬ್ಬರ ಬಂಧವನ್ನು…; ಯಜಮಾನನ ಶವಯಾತ್ರೆಯಲ್ಲೇ ಪ್ರಾಣ ಬಿಟ್ಟ ನಿಷ್ಠಾವಂತ ನಾಯಿ ʼದುಗ್ಗುʼ