Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಅಹಮದಾಬಾದ್‌ನಲ್ಲಿ ವಿಮಾನ ದುರಂತ

ಅಹಮದಾಬಾದ್: ಅಹಮದಾಬಾದ್  ವಿಮಾನ ನಿಲ್ದಾಣದಲ್ಲಿ ವಿಮಾನವೊಂದು ಟೇಕ್ ಆಫ್ ವೇಳೆ ಅಪಘಾತಕ್ಕೀಡಾಗಿದೆ.

ಘಟನಾ ಸ್ಥಳದಲ್ಲಿ ದಟ್ಟ ಹೊಗೆ ಆವರಿಸಿರುವ ದೃಶ್ಯಗಳು ಮಾಧ್ಯಮಗಳಲ್ಲಿ ಹರಿದಾಡುತ್ತಿವೆ.

ವಿಮಾನದಲ್ಲಿ ಎಷ್ಟು ಪ್ರಯಾಣಿಕರು ಇದ್ದರು, ದುರಂತದಲ್ಲಿ ಸಂಭವಿಸಿರುವ ಸಾವು-ನೋವಿನ ಬಗ್ಗೆ ಅಧಿಕೃತ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್‌ ಅವರು ವಿಚಾರ ತಿಳಿಯುತ್ತಿದ್ದಂತೆ ನಿಲ್ದಾಣಕ್ಕೆ ಧಾವಿಸಿದ್ದಾರೆ.

ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ಪಟೇಲ್‌ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ ಎಂದು ವರದಿಯಾಗಿದೆ.
ಕೇಂದ್ರ ಸರ್ಕಾರವು, ರಕ್ಷಣಾ ಕಾರ್ಯಾಚರಣೆಗೆ ಅಗತ್ಯ ನೆರವಿನ ಭರವಸೆ ನೀಡಿದೆ.

ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ಟೇಕ್ ಆಫ್ ಆದ ಕೆಲವೇ ಹೊತ್ತಿನಲ್ಲಿ ಏ‌ರ್ ಇಂಡಿಯಾ ವಿಮಾನ AI171 ಪತನವಾಗಿದೆ.

242 ಪ್ರಯಾಣಿಕರಿದ್ದ ಈ ವಿಮಾನವು ಅಹಮದಾಬಾದ್‌ನಿಂದ ಇಂಗ್ಲೆಂಡ್‌ನ ಲಂಡನ್‌ನ ಗ್ಯಾಟ್‌ವಿಕ್‌ಗೆ ತೆರಳುತ್ತಿತ್ತು ಎಂದು ಮೂಲಗಳು ತಿಳಿಸಿವೆ.

ವಿಮಾನ ಪತನಗೊಂಡಿರುವ ಮೆದಾನಿ ಪ್ರದೇಶದಲ್ಲಿ ದಟ್ಟ ಹೊಗೆ ಆವರಿಸಿರುವ ದೃಶ್ಯಗಳು ಮಾಧ್ಯಮಗಳಲ್ಲಿ ಹರಿದಾಡುತ್ತಿವೆ.

ಗುಜರಾತ್‌ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಅವರು ವಿಮಾನದಲ್ಲಿದ್ದರು ಎನ್ನಲಾಗುತ್ತಿದೆ. ಆದಾಗ್ಯೂ, ಎಷ್ಟು ಪ್ರಯಾಣಿಕರಿದ್ದರು, ದುರಂತದಲ್ಲಿ ಸಂಭವಿಸಿರುವ ಸಾವು-ನೋವಿನ ಬಗ್ಗೆ ಅಧಿಕೃತ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

ಬೋಯಿಂಗ್ ಕಂಪನಿಗೆ ಸೇರಿದ 787 ಗ್ರೀಮ್‌ಲೈನರ್ ವಿಮಾನ ಇದಾಗಿದ್ದು, ಒಟ್ಟು 300 ಪ್ರಯಾಣಿಕರನ್ನು ಹೊತ್ತೊಯ್ಯುವ ಸಾಮರ್ಥ್ಯ ಇದರದ್ದು.

ಘಟನೆಯ ಮಾಹಿತಿ ಲಭ್ಯವಾಗುತ್ತಿದ್ದಂತೆ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯವು ತನಿಖೆಗೆ ಆದೇಶಿಸಿದೆ. ಬೋಯಿಂಗ್ ಕಂಪನಿಯ ತಾಂತ್ರಿಕ ಅಧಿಕಾರಿಗಳೂ ಸ್ಥಳಕ್ಕೆ ಧಾವಿಸುವ ಸಾಧ್ಯತೆಗಳಿವೆ.

 
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿಭೋಜಶಾಲಾ–ಕಮಾಲ್ ಮೌಲಾ ಪ್ರಕರಣ: ಶುಕ್ರವಾರದ ನಮಾಜ್‌ಗೆ ಮುಸ್ಲಿಮರಿಗೆ ಪ್ರತ್ಯೇಕ ಸ್ಥಳ ಕಲ್ಪಿಸಲು ಸುಪ್ರೀಂ ಕೋರ್ಟ್ ನಿರ್ದೇಶನ2022ರಲ್ಲಿ ಉಕ್ರೇನ್ ಮೇಲೆ ಅಣ್ವಸ್ತ್ರ ದಾಳಿ ನಡೆಸದಂತೆ ರಷ್ಯಾವನ್ನು ತಡೆದದ್ದು ಮೋದಿ : ಪೋಲೆಂಡ್ ಸಚಿವರ ಹೇಳಿಕೆಚೊಚ್ಚಲ ಬಾಹ್ಯಾಕಾಶ ಯಾನ ಕೈಗೊಂಡ ಭಾರತೀಯ ಮೂಲದ ಗಗನಯಾತ್ರಿ ಅನಿಲ ಮೆನನ್ಸಾವೂ ಬೇರ್ಪಡಿಸಲಿಲ್ಲ ಇವರಿಬ್ಬರ ಬಂಧವನ್ನು…; ಯಜಮಾನನ ಶವಯಾತ್ರೆಯಲ್ಲೇ ಪ್ರಾಣ ಬಿಟ್ಟ ನಿಷ್ಠಾವಂತ ನಾಯಿ ʼದುಗ್ಗುʼ