Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿಯಲ್ಲಿ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನ ನಿರ್ಮಾಣಕ್ಕೆ ಟಿಟಿಡಿ ಅನುಮೋದನೆ

ಬೆಳಗಾವಿಯಲ್ಲಿ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನ ನಿರ್ಮಾಣಕ್ಕೆ ಟಿಟಿಡಿ ಅನುಮೋದನೆ

ಬೆಳಗಾವಿ: ಬೆಳಗಾವಿಯಲ್ಲಿ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನ ನಿರ್ಮಾಣಕ್ಕೆ ಟಿಟಿಡಿ ಆಡಳಿತ ಮಂಡಳಿ ಅನುಮೋದನೆ ನೀಡಿದೆ ಎಂದು ಟಿಟಿಡಿ ಸದಸ್ಯ ಎಸ್.ನರೇಶ್‌ಕುಮಾರ್ ಎಂದು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಬೆಳಗಾವಿಯ ಕೋಳಿಕೊಪ್ಪದಲ್ಲಿ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನ ನಿರ್ಮಾಣಕ್ಕೆ ಟಿಟಿಡಿ ಆಡಳಿತ ಮಂಡಳಿ ಅನುಮೋದನೆ ನೀಡಿದ್ದು, ಈ ಮೂಲಕ ಉತ್ತರ ಕರ್ನಾಟಕ, ಗೋವಾ ಹಾಗೂ ಮಹಾರಾಷ್ಟ್ರ ರಾಜ್ಯದ ಭಕ್ತಾದಿಗಳಿಗೆ ಅನುಕೂಲ ಮಾಡಿಕೊಡುವ ಉದ್ದೇಶ ಹೊಂದಿದೆ
ಎಂದು ತಿಳಿಸಿದರು.

16/09/2025 ರಂದು ನಡೆದ ಟಿಟಿಡಿ ಆಡಳಿತ ಮಂಡಳಿ ಸಭೆಯಲ್ಲಿ ಈ ಬಗ್ಗೆ ವಿಸ್ತುತವಾಗಿ ಚರ್ಚಿಸಲಾಯಿತು.

ಬೆಂಗಳೂರು ಹಾಗೂ ದೇಶದ ಇತರೆ ಭಾಗಗಳಲ್ಲಿ ಇರುವಂತೆ ಬೆಳಗಾವಿಯಲ್ಲೂ ದೇವಸ್ಥಾನ ನಿರ್ಮಿಸುವುದರಿಂದ ಆಭಾಗದ ಭಕ್ತಾದಿಗಳಿಗೆ ಅನುಕೂಲವಾಗಲಿದೆ. ಪ್ರತಿ
ಬಾರಿಯೂ ತಿರುಪತಿ-ತಿರುಮಲಕ್ಕೆ ಭೇಟಿ ನೀಡುವ ಬದಲಾಗಿ, ಸ್ಥಳೀಯವಾಗಿಯೇ ಶ್ರೀ ವೆಂಕಟೇಶ್ವರ ಸ್ವಾಮಿಯ ದರ್ಶನ ಭಾಗ್ಯ ಲಭಿಸಲಿದೆ. ಬೆಳಗಾವಿ ಸುವರ್ಣಸೌಧದ ಹತ್ತಿರ ಈ ದೇವಸ್ಥಾನ ನಿರ್ಮಾಣವಾಗಲಿದೆ. ಶ್ರೀವಾಣಿ ಟ್ರಸ್ಟ್‌ ಮುಖಾಂತರ ಈ ದೇವಸ್ಥಾನ ನಿರ್ಮಿಸಲಾಗುವುದು. ಮುಂದಿನ ದಿನಗಳಲ್ಲಿ ಟಿಟಿಡಿ ಅಧ್ಯಕ್ಷ ಬಿ ಆರ್ ನಾಯ್ಡು ಅವರು ಬೆಳಗಾವಿಗೆ ಭೇಟಿ ನೀಡಿ ಮುಂದಿನ ಕಾರ್ಯಗಳನ್ನು ಪರಿಶೀಲಿಸಲಿದ್ದಾರೆ ಎಂದರು.

ಸಾಲಕಟ್ಲ ಬ್ರಹೋತ್ಸವ: ತಿರುಮಲದ
ಪಾವಿತ್ರ್ಯತೆಯನ್ನು ಕಾಪಾಡುವುದು ಮತ್ತು ಸಾಮಾನ್ಯ ಭಕ್ತರಿಗೆ ಸುಲಭ ದರ್ಶನ ಒದಗಿಸುವುದು ಆಂಧ್ರಪ್ರದೇಶದ ಗೌರವಾನ್ವಿತ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರ ಮುಖ್ಯ ಆದ್ಯತೆಯಾಗಿದೆ. ಬ್ರಹ್ಮತ್ಸವದ ಸಮಯದಲ್ಲಿ ಈ ನಿಟ್ಟಿನಲ್ಲಿ ನಾವು ವಿಶೇಷ ಗಮನ ಹರಿಸುತ್ತಿದ್ದೇವೆ. ಈ ವರ್ಷದ ವಾರ್ಷಿಕ ಸಾಲಕಟ್ಲ ಬ್ರಹೋತ್ಸವವು ಸೆಪ್ಟೆಂಬರ್ 24 ರಿಂದ ಅಕ್ಟೋಬರ್ 2, 2025 ರವರೆಗೆ ನಡೆಯಲಿದೆ ಎಂದರು.

ಸೆಪ್ಟೆಂಬರ್ 24ರಿಂದ ಅಕ್ಟೋಬರ್ 2ರವರೆಗೆ ತಿರುಮಲ ವಾರ್ಷಿಕ ಬ್ರಹ್ಮೋತ್ಸವ ನಡೆಯಲಿದ್ದು, ಸಕಲ ಸಿದ್ಧತೆ ನಡೆಯುತ್ತಿದೆ. ಕಳೆದ ಬಾರಿ ತಿರುಪತಿಯಲ್ಲಿ ಕಾಲ್ತುಳಿತ ಸಂಭವಿಸಿತ್ತು. ಹೀಗಾಗಿ ಈ ಬಾರಿ ಎಚ್ಚರ ವಹಿಸಲು ಸೂಚಿಸಲಾಗಿದೆ. ಬ್ರಹ್ಮೋತ್ಸವದ ಸಮಯದಲ್ಲಿ ವಿಶೇಷ ಗಮನಹರಿಸಲಿದ್ದು, ತಿರುಮಲದ ಪಾವಿತ್ರ‍್ಯತೆಯನ್ನು ಕಾಪಾಡುವುದು ಮತ್ತು ಸಾಮಾನ್ಯ ಭಕ್ತರಿಗೆ ಸುಲಭ ದರ್ಶನ ಸಿಗುವಂತೆ ಅವಕಾಶ ಮಾಡಿಕೊಡುತ್ತೇವೆ ಎಂದಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕನ್ನಡ ಸಾಹಿತ್ಯ ಪರಿಷತ್ ಸರ್ಜರಿಗೆ ಹಾರ್ಟ್ ಸರ್ಜನ್ ಬೆಳಗಾವಿ ಮಣ್ಣಿನ ಮಗಳು ಡಾ.ವಿಜಯಲಕ್ಷ್ಮೀ ಬಾಳೆಕುಂದ್ರಿ ಸಜ್ಜು ಚುನಾವಣೆ ಸ್ಪರ್ಧೆಗೆ ನಿರ್ಧಾರ | ಗೆದ್ದರೆ ಪ್ರಥಮ ಅಧ್ಯಕ್ಷೆ, ತೋಂಟದಾರ್ಯ ಮಠದ ಜಗದ್ಗುರುಗಳು ಬೆಂಬಲಸುಪ್ರೀಂ ಕೋರ್ಟಿನಲ್ಲಿರುವ ಗಡಿ ವಿವಾದ ಪ್ರಕರಣದ ತ್ವರಿತ ವಿಚಾರಣೆಗೆ ಮಹಾರಾಷ್ಟ್ರ ಸರಕಾರ ಅರ್ಜಿ ಸಲ್ಲಿಸಿರುವ ಕುರಿತು ಪ್ರತಿಕ್ರಿಯಿಸಿದ ಅಶೋಕ ಚಂದರಗಿಅಯೋಧ್ಯೆ ರಾಮಮಂದಿರದ ಮೊದಲ ಸಿಇಒ ಆಗಿ ನಿವೃತ್ತ ಏರ್‌ ಮಾರ್ಷಲ್‌ ಜೀತೇಂದ್ರ ಮಿಶ್ರ ನೇಮಕಸುಪ್ರೀಂ ಕೋರ್ಟಿನಲ್ಲಿರುವ ಗಡಿ ವಿವಾದ ಪ್ರಕರಣದ ತ್ವರಿತ ವಿಚಾರಣೆಗೆ ಮಹಾರಾಷ್ಟ್ರ ಸರಕಾರ ಅರ್ಜಿ ಸಲ್ಲಿಸಿರುವ ಕುರಿತು ಪ್ರತಿಕ್ರಿಯಿಸಿದ ಅಶೋಕ ಚಂದರಗಿ8 ಜನ ಮೊಬೈಲ್ ಕಳ್ಳರನ್ನು ಬಂಧಿಸಿದ ಕಟಕೋಳ ಪೊಲೀಸರು200 ವರ್ಷಗಳ ಬಳಿಕ ಕುಟುಂಬದಲ್ಲಿ ಹೆಣ್ಣು ಮಗುವಿನ ಜನನ : ರಥದಲ್ಲಿ ಕುಳ್ಳಿರಿಸಿ ಮೆರವಣಿಗೆ ಮೂಲಕ ಮನೆಗೆ ಕರೆತಂದ ಕುಟುಂಬ !ನಕಲಿ ದಾಖಲೆ ಸೃಷ್ಟಿಸಿ ಜಮೀನು ಮಾರಾಟ ಮಾಡಿದ್ದ ಅಜ್ಜಿಯ ಬಂಧನಪುತ್ರಿಯರ ಶಿಕ್ಷಣಕ್ಕಾಗಿ ಸೀರೆಯುಟ್ಟು ಬರಿಗಾಲಿನಲ್ಲಿ ಓಡಿ ʼಮ್ಯಾರಥಾನ್‌ʼನಲ್ಲಿ ಮೊದಲ ಸ್ಥಾನ ಪಡೆದ 47 ವರ್ಷದ ತಾಯಿ !ರಷ್ಯಾ ಅತಿಹೆಚ್ಚು ತೈಲ ಉತ್ಪಾದನೆ ಮಾಡುತ್ತಿದ್ರೂ ಈಗ ಅದಕ್ಕೇ ದಾಖಲೆ ಪ್ರಮಾಣದಲ್ಲಿ ಪೆಟ್ರೋಲ್ ಪೂರೈಸುತ್ತಿರುವ ಭಾರತ ! ಕಾರಣ ?ವೈಶ್ಯ ಸಮಾಜದ ಏಕತೆ, ಪ್ರಗತಿಗೆ ಸೆ.6ರಂದು ಬೆಳಗಾವಿಯಲ್ಲಿ ವೈಶ್ಯ ಸಮ್ಮೇಳನ