Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ 5 ದಿನ ಭಾರಿ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಜೋರಾಗಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಕರಾವಳಿ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌, ದಕ್ಷಿಣ ಹಾಗೂ ಉತ್ತರ ಒಳನಾಡು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಿದೆ.
ಮೇ 22ರಂದು ಉತ್ತರ ಕನ್ನಡ ಜಿಲ್ಲೆಗೆ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಉಡುಪಿ ಹಾಗೂ ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.
ಮೇ 23ರಂದು ಉತ್ತರ ಕನ್ನಡ ಜಿಲ್ಲೆಗೆ ಆರೆಂಜ್‌ ಅಲರ್ಟ್‌ ಹಾಗೂ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ. ದಕ್ಷಿನ ಒಳನಾಡಿನ ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ನೀಡಲಾಗಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಹಾಗೂ ದಕ್ಷಿಣ ಒಳನಾಡಿನ ತುಮಕೂರು, ವಿಜಯನಗರ, ಶಿವಮೊಗ್ಗ, ಚಿಕ್ಕಮಗಳೂರು, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ.

ಮೇ 24ರಂದು ಕರಾವಳಿ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ನೀಡಲಾಗಿದೆ, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಬಾಗಲಕೋಟೆ, ಬೀದರ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಹಾಗೂ ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಮೇ 25ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಿಗೆಆರೆಂಜ್‌ ಅಲರ್ಟ್‌ ನೀಡಲಾಗಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಕಲಬುರಗಿ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೀದ‌ರ್, ಗದಗ, ಕೊಪ್ಪಳ, ವಿಜಯಪುರ ಹಾಗೂ ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ದಾವಣಗೆರೆ, ಬೆಂಗಳೂರು ಗ್ರಾಮೀಣ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮಂಡ್ಯ, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಪಾಲರ ಪತ್ನಿಯ ಆರೋಗ್ಯದಲ್ಲಿ ಏರುಪೇರು :  ದಿಢೀರ್ ಇಂದೋರ್ ಗೆ ತೆರಳಿದ ಗೆಹಲೋಟ್ -ಸಿಎಂ ರಾಜೀನಾಮೆ ಪತ್ರ ಯಾರಿಗೆ ಸಲ್ಲಿಸುತ್ತಾರೆ ?ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರು