Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಖಾಸಗಿ ಸಂಸ್ಥೆಗಳಲ್ಲಿ ಖಾಲಿ ಹುದ್ದೆಗಳಿಗೆ ನೇಮಕಾತಿ ; ನ.7 ರಂದು ಬೆಂಗಳೂರಲ್ಲಿ ನೇರ ಸಂದರ್ಶನ

ಬೆಂಗಳೂರು :  ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ವತಿಯಿಂದ ನವೆಂಬರ್ 07 ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 2.00 ಗಂಟೆಯವರೆಗೆ ಉಪ ಪ್ರಾದೇಶಿಕ ಉದ್ಯೋಗ ವಿನಿಮಯ ಕಚೇರಿ, ಸಿ.ಓ.ಇ. ಕಟ್ಟಡ, ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಆವರಣ, ತುಮಕೂರು ರಸ್ತೆ, ಪೀಣ್ಯ, ಇಲ್ಲಿ ಖಾಸಗಿ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳ ನೇಮಕಾತಿಗಾಗಿ ನೇರ ಸಂದರ್ಶನ ಹಮ್ಮಿಕೊಳ್ಳಲಾಗಿದೆ.

10 ನೇ ತರಗತಿ ಉತ್ತೀರ್ಣ , ಪಿ.ಯು.ಸಿ. ಹಾಗೂ ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರುವ, 35 ವರ್ಷಗಳ ವಯೋಮಿತಿಯೊಳಗಿನ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.

 ಹೆಚ್ಚಿನ ಮಾಹಿತಿಗಾಗಿ ಉಪ ಪ್ರಾದೇಶಿಕ ಉದ್ಯೋಗ ವಿನಿಮಯ ಕಚೇರಿ, ಸಿ.ಓ.ಇ. ಕಟ್ಟಡ, ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಆವರಣ, ತುಮಕೂರು ರಸ್ತೆ, ಪೀಣ್ಯ, ಬೆಂಗಳೂರು ಅಥವಾ ದೂರವಾಣಿ ಸಂಖ್ಯೆ 7975294271 ಅನ್ನು ಸಂಪರ್ಕಿಸಬಹುದು ಎಂದು ಉಪ ಪ್ರಾದೇಶಿಕ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 ವಿಶೇಷ ಶಿಕ್ಷಕರಿಗೆ ರಾಜ್ಯ ಪ್ರಶಸ್ತಿ: ಅರ್ಜಿ ಆಹ್ವಾನ

ಬೆಂಗಳೂರು : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಡಿಸೆಂಬರ್ 3ರಂದು ಆಚರಿಸಲಾಗುವ ವಿಶ್ವ ವಿಕಲಚೇತನರ ದಿನಾಚರಣೆಯ ಅಂಗವಾಗಿ, ವಿಕಲಚೇತನರ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿರುವ ವ್ಯಕ್ತಿ, ಸಂಸ್ಥೆ ಹಾಗೂ ವಿಶೇಷ ಶಾಲೆಗಳಲ್ಲಿ 15 ವರ್ಷಗಳಿಗೂ ಹೆಚ್ಚು ಕಾಲ ಸೇವೆ ಸಲ್ಲಿಸಿರುವ ಅಥವಾ ಸಲ್ಲಿಸುತ್ತಿರುವ ವಿಶೇಷ ಶಿಕ್ಷಕರಿಗೆ ರಾಜ್ಯ ಪ್ರಶಸ್ತಿ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತರು ಇಲಾಖೆಯ ಅಧಿಕೃತ ವೆಬ್‌ಸೈಟ್ www.dwdsc.karnataka.gov.in ಮೂಲಕ ಅರ್ಜಿಯ ನಿಗದಿತ ನಮೂನೆಯನ್ನು ಪಡೆದು, ಕನ್ನಡ ಭಾಷೆಯಲ್ಲಿ ಭರ್ತಿ ಮಾಡಿದ ಅರ್ಜಿಯನ್ನು ದ್ವಿಪ್ರತಿಗಳಲ್ಲಿ ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ, ಸುಧಾರಣಾ ಸಂಸ್ಥೆಗಳ ಸಂಕೀರ್ಣ ಹೊಸೂರು ರಸ್ತೆ, ಬೆಂಗಳೂರು ಇಲ್ಲಿಗೆ ನವೆಂಬರ್ 9 ರೊಳಗಾಗಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ, ಸುಧಾರಣಾ ಸಂಸ್ಥೆಗಳ ಸಂಕೀರ್ಣ, ಹೊಸೂರು ರಸ್ತೆ, ಬೆಂಗಳೂರು ನಗರ ಜಿಲ್ಲೆ–560029 ಅಥವಾ ದೂರವಾಣಿ ಸಂಖ್ಯೆ 080-29752324 ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು : ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ವತಿಯಿಂದ 2026-27 ನೇ ಸಾಲಿನಲ್ಲಿ ಬೆಂಗಳೂರು ನಗರ ಜಿಲ್ಲೆಯಲ್ಲಿ ಅನುಷ್ಠಾನಗೊಳಿಸುತ್ತಿರುವ ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಉದ್ಯಮಶೀಲತಾ ಅಭಿವೃದ್ಧಿ ಯೋಜನೆಯಡಿ ಸ್ವಾವಲಂಬಿ ಸಾರಥಿ (ಸರಕು ವಾಹನ/ಟ್ಯಾಕ್ಸಿ), ಫಾಸ್ಟ್ ಫುಡ್ ಟ್ರಕ್/ಟ್ರೈಲರ್, ಮೊಬೈಲ್ ಕಿಚನ್, ಫುಡ್ ಕಿಯೋಸ್, ಹೈನುಗಾರಿಕೆ ಹಾಗೂ ಇತರೆ ಉದ್ದೇಶಗಳು, ಮೈಕ್ರೋ ಕ್ರೆಡಿಟ್ (ಪ್ರೇರಣಾ) ಯೋಜನೆ, ಗಂಗಾ ಕಲ್ಯಾಣ ಯೋಜನೆ ಹಾಗೂ ಭೂ ಒಡೆತನ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಹ ಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿದಾರರು ಸಫಾಯಿ ಕರ್ಮಚಾರಿ/ಮ್ಯಾನ್ಯುಯಲ್ ಸ್ಕ್ಯಾವೆಂಜರ್ಗಳು ಅಥವಾ ಅವರ ಅವಲಂಬಿತ ಕುಟುಂಬದವರಾಗಿರಬೇಕು ಹಾಗೂ ಕನಿಷ್ಠ 15 ವರ್ಷಗಳಿಂದ ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು. ಅರ್ಜಿದಾರರ ವಯಸ್ಸು 21ರಿಂದ 50 ವರ್ಷಗಳೊಳಗಿರಬೇಕು.

ಅರ್ಹ ಫಲಾಪೇಕ್ಷಿಗಳು ಆನ್ ಲೈನ್ ಮೂಲಕ ಆಯಾ ನಿಗಮದ ವ್ಯಾಪ್ತಿಯಲ್ಲಿ ಬರುವ ಸಮುದಾಯಗಳ ಅರ್ಜಿಗಳನ್ನು ನೇರವಾಗಿ https://sevasindhu.karnataka.gov.in ನಲ್ಲಿ ಅಥವಾ ಗ್ರಾಮಒನ್, ಬೆಂಗಳೂರು ಒನ್ ಹಾಗೂ ಕರ್ನಾಟಕ ಒನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ನ.30 ಕೊನೆಯ ದಿನ.

ಹೆಚ್ಚಿನ ಮಾಹಿತಿಗಾಗಿ ನಿಗಮದ ಜಿಲ್ಲಾ ಕಚೇರಿ ಅಥವಾ ತಾಲ್ಲೂಕು ಅಭಿವೃದ್ಧಿ ಅಧಿಕಾರಿಗಳನ್ನು ನಿಗಮದ ವೆಬ್ ಸೈಟ್ ನಲ್ಲಿ ಸಂಪರ್ಕಿಸಬಹುದು ಎಂದು ಬೆಂಗಳೂರು ನಗರ ಜಿಲ್ಲೆಯ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

 

 

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING: CBSE 10, 12ನೇ ತರಗತಿ ಬೋರ್ಡ್ ಪರೀಕ್ಷೆ 2027ರ ವೇಳಾಪಟ್ಟಿ ಪ್ರಕಟ; ಫೆ. 16ರಿಂದ ಪರೀಕ್ಷೆ ಆರಂಭ!12 ಗಂಟೆ 46 ನಿಮಿಷಗಳಲ್ಲಿ ಮೌಂಟ್ ಕಿಲಿಮಂಜಾರೋ ಏರಿದ ಕವಿತಾ ಚಂದ್ ದಾಖಲೆಮೂವರ ಜೀವ ತೆಗೆದ ಮಿನಿ ಕೂಪರ್ ಅಪಘಾತ ಪ್ರಕರಣ: ಸುಹೇಲ್ ಸೇರಿದಂತೆ ನಾಲ್ವರಿಗೆ ಹೈಕೋರ್ಟ್ ಜಾಮೀನು ಮಂಜೂರು !ಗಗನಕ್ಕೇರಿದ ಅಕ್ಕಿ ಬೆಲೆ ನಿಯಂತ್ರಣಕ್ಕೆ ಕೇಂದ್ರದಿಂದ ಮಹತ್ವದ ಕ್ರಮದೀಪಾವಳಿ ಸ್ಪೆಷನ್: ಅಮರಾವತಿ ಸ್ವೀಟ್ ಶಾಪ್ ನಿಂದ ಕೆಜಿಗೆ 24,000 ರೂ.ಗೆ ಚಿನ್ನದ ಎಲೆಯ ‘ಸ್ವರ್ಣ್ ಶಂಖ್’ ಸ್ವೀಟ್SHOCKING : ಶಾಲೆಯಲ್ಲೇ ಹೃದಯಾಘಾತದಿಂದ ಕುಸಿದು ಬಿದ್ದು 13 ವರ್ಷದ ಬಾಲಕ ಸಾವುಸಲ್ಮಾನ್ ಖಾನ್ ಅಭಿಮಾನಿಗಳಿಗೆ ಗುಡ್ ನ್ಯೂಸ್! ‘ಮಾತೃಭೂಮಿ’ ಸಿನಿಮಾ ರಿಲೀಸ್ ಡೇಟ್ ಫಿಕ್ಸ್.!ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಆಗಿದೆಯೇ? ಮತ್ತೆ ಹೆಸರು ಸೇರಿಸಿಕೊಳ್ಳಲು ಚುನಾವಣಾ ಆಯೋಗದಿಂದ ಅವಕಾಶ!ಶಿವಮೊಗ್ಗ ದಸರಾ ಜಂಬೂಸವಾರಿ ಅವಘಡ ಪ್ರಕರಣ: ಡಿಸಿಎಫ್‌ಗೆ ವರ್ಗಾವಣೆ ಶಿಕ್ಷೆ!BREAKING : ಪಂಜಾಬ್’ನಲ್ಲಿ ಚಲಿಸುತ್ತಿದ್ದ ರೈಲಿನಲ್ಲಿ ಅಗ್ನಿ ಅವಘಡ, ತಪ್ಪಿದ ಭಾರಿ ದುರಂತ |WATCH VIDEO