Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಭಾರತದ 20 ನಗರಗಳ ಮೇಲೆ ಪಾಕಿಸ್ತಾನದಿಂದ ಡ್ರೋನ್ ದಾಳಿ ;ಎಲ್ಲವನ್ನೂ ಹೊಡೆದುರುಳಿಸಿದ ಸೇನೆ

ಜಮ್ಮು: ಪಾಕಿಸ್ತಾನ’ ಮತ್ತೆ ಜಮ್ಮು ಸೇರಿದಂತೆ ವಿವಿಧೆಡೆ ದಾಳಿ ನಡೆಸಿದೆ. ಶುಕ್ರವಾರ ಸಂಜೆ ದಕ್ಷಿಣ ಕಾಶ್ಮೀರದ ಶ್ರೀನಗರ ವಿಮಾನ ನಿಲ್ದಾಣ ಮತ್ತು ಆವಂತಿಪೋರಾ ವಾಯುನೆಲೆಯನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನ ನಡೆಸಿದ ಡ್ರೋನ್ ದಾಳಿಯನ್ನು ಭದ್ರತಾ ಪಡೆಗಳು ವಿಫಲಗೊಳಿಸಿವೆ.

ಜಮ್ಮು ಮತ್ತು ಕಾಶ್ಮೀರ, ಪಂಜಾಬ್, ರಾಜಸ್ಥಾನ ಮತ್ತು ಗುಜರಾತ್‌ನಾದ್ಯಂತ 20 ನಗರಗಳನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನದ ಡ್ರೋನ್‌ಗಳು ಸತತ ಎರಡನೇ ದಿನವೂ ದಾಳಿ ನಡೆಸಿವೆ. ಅವಂತಿಪೋರಾದ ವಾಯುನೆಲೆಯ ಮೇಲೆ ಗುರಿಯಿಟ್ಟು ನಡೆಸಲಾದ ದಾಳಿಯನ್ನು ಭಾರತ ವಿಫಲಗೊಳಿಸಿದೆ.ಅಲ್ಲದೆ, ಜಮ್ಮು ಮತ್ತು ಕಾಶ್ಮೀರದ ಉತ್ತರದ ಭಾಗದ ಬಾರಾಮುಲ್ಲಾದಿಂದ ದಕ್ಷಿಣದ ಭುಜ್‌ವರೆಗಿನ ಅಂತಾರಾಷ್ಟ್ರೀಯ ಗಡಿ ಮತ್ತು ಪಾಕಿಸ್ತಾನದ ನಿಯಂತ್ರಣ ರೇಖೆಯ ಉದ್ದಕ್ಕೂ 26 ಸ್ಥಳಗಳಲ್ಲಿ ಡ್ರೋನ್‌ಗಳನ್ನು ನೋಡಲಾಗಿದೆ. ಇವುಗಳಲ್ಲಿ ಶಂಕಿತ ಶಸ್ತ್ರಸಜ್ಜಿತ ಡ್ರೋನ್‌ಗಳು ಸೇರಿವೆ . ನಾಗರಿಕ ಮತ್ತು ಮಿಲಿಟರಿ ಸ್ಥಳಗಳನ್ನು ಗುರಿಯಾಗಿಸಿಕೊಂಡು ಈ ದಾಳಿ ನಡೆಸಲಾಗಿದೆ ಎಂದು ಸೇನೆ ಹೇಳಿಕೆಯೊಂದು ತಿಳಿಸಿದೆ.

ಬಾರಾಮುಲ್ಲಾ, ಶ್ರೀನಗರ, ಅವಂತಿಪೋರಾ, ನಗ್ರೋಟಾ, ಜಮ್ಮು, ಫಿರೋಜ್‌ಪುರ, ಪಠಾಣ್‌ಕೋಟ್, ಫಾಜಿಲ್ಕಾ, ಲಾಲ್‌ಗಢ್ ಜಟ್ಟಾ, ಜೈಸಲ್ಮೇರ್, ಬಾರ್ಮರ್, ಭುಜ್, ಕ್ವಾರ್ಬೆಟ್ ಮತ್ತು ಲಖಿ ನಾಲಾ ಸ್ಥಳಗಳಲ್ಲಿ ಪಾಕಿಸ್ತಾನದ ಡ್ರೋನ್‌ ದಾಳಿ ನಡೆದಿದೆ. ಅಲ್ಲದೆ, ಸಾಂಬಾ, ಪಠಾಣ್ ಕೋಟ್ ಮತ್ತು ಜಮ್ಮುವಿನಲ್ಲಿ ಡ್ರೋನ್ ಕಾಣಿಸಿಕೊಂಡ ಬಗ್ಗೆ ವರದಿಯಾಗಿದೆ. ಶ್ರೀನಗರ ವಿಮಾನ ನಿಲ್ದಾಣವು ಡ್ರೋನ್ ದಾಳಿಗೆ ಒಳಗಾಗಿದ್ದು, ಈಗ ಅದನ್ನು ಪುನರಾರಂಭಿಸಲಾಗಿದೆ ಎಂದು ವರದಿಗಳು ತಿಳಿಸಿವೆ.
ಪಂಜಾಬಿನ ಫಿರೋಜ್ ಪುರದಲ್ಲಿ ಮನೆಯೊಂದರ ಮೇಲೆ ಪಾಕಿಸ್ತಾನದ ಡ್ರೋನ್ ಒಂದು ಅಪ್ಪಳಿಸಿದ್ದು,ಮೂವರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಜಮ್ಮು ಮತ್ತು ಕಾಶ್ಮೀರ ಪಂಜಾಬ್, ರಾಜಸ್ಥಾನ ರಾಜ್ಯಗಳನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನ ದಾಳಿ ನಡೆಸುತ್ತಿದೆ. S-400 ಭಾರತದ ವಾಯು ರಕ್ಷಣಾ ವ್ಯವಸ್ಥೆಯಿಂದ ಎಲ್ಲಾ ಡ್ರೋನ್ ಗಳನ್ನು ಹೊಡೆದುರುಳಿಸಲಾಗಿದೆ.
ಗುರುವಾರ ರಾತ್ರಿ ಪಾಕ್ ಸೇನೆಯು ಎಲ್‌ಒಸಿ ಉದ್ದಕ್ಕೂ ಭಾರೀ ಕ್ಯಾಲಿಬರ್ ಶಸ್ತ್ರಾಸ್ತ್ರಗಳೊಂದಿಗೆ ಶೆಲ್ ದಾಳಿ ನಡೆಸಿತು. ಲೇಹ್‌ನಿಂದ ಸರ್ ಕ್ರೀಕ್‌ವರೆಗಿನ ಅಂತಾರಾಷ್ಟ್ರೀಯ ಗಡಿ ಮತ್ತು ನಿಯಂತ್ರಣ ರೇಖೆಯ ಉದ್ದಕ್ಕೂ 36 ಸ್ಥಳಗಳಲ್ಲಿ 300-400 ಡ್ರೋನ್‌ಗಳನ್ನು ಬಳಸಿಕೊಂಡು ದಾಳಿ ನಡೆಸಿತ್ತು. ಎಲ್ಲವನ್ನೂ ಹೊಡೆದುರುಳಿಸಿದ್ದೇವೆ ಎಂದು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.
ಜಮ್ಮು ಮತ್ತು ಅದರ ಸುತ್ತಮುತ್ತಲಿನ ಪ್ರತಿಯೊಬ್ಬರು ಮುಂದಿನ ಕೆಲವು ಗಂಟೆಗಳ ಕಾಲ ದಯವಿಟ್ಟುಮನೆಯಲ್ಲಿರಿ ಅಥವಾ ನಿಮಗೆ ಆರಾಮದಾಯಕ ಸ್ಥಳದಲ್ಲಿಯೇ ಇರಿ. ವದಂತಿಗಳನ್ನು ನಿರಾಕರಿಸಿ, ಆಧಾರರಹಿತ ಅಥವಾ ದೃಢೀಕರಿಸದ ಸುದ್ದಿಗಳನ್ನು ನಂಬಬೇಡಿ ಎಂದು ಮನವಿ ಮಾಡಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿಭೋಜಶಾಲಾ–ಕಮಾಲ್ ಮೌಲಾ ಪ್ರಕರಣ: ಶುಕ್ರವಾರದ ನಮಾಜ್‌ಗೆ ಮುಸ್ಲಿಮರಿಗೆ ಪ್ರತ್ಯೇಕ ಸ್ಥಳ ಕಲ್ಪಿಸಲು ಸುಪ್ರೀಂ ಕೋರ್ಟ್ ನಿರ್ದೇಶನ2022ರಲ್ಲಿ ಉಕ್ರೇನ್ ಮೇಲೆ ಅಣ್ವಸ್ತ್ರ ದಾಳಿ ನಡೆಸದಂತೆ ರಷ್ಯಾವನ್ನು ತಡೆದದ್ದು ಮೋದಿ : ಪೋಲೆಂಡ್ ಸಚಿವರ ಹೇಳಿಕೆಚೊಚ್ಚಲ ಬಾಹ್ಯಾಕಾಶ ಯಾನ ಕೈಗೊಂಡ ಭಾರತೀಯ ಮೂಲದ ಗಗನಯಾತ್ರಿ ಅನಿಲ ಮೆನನ್ಸಾವೂ ಬೇರ್ಪಡಿಸಲಿಲ್ಲ ಇವರಿಬ್ಬರ ಬಂಧವನ್ನು…; ಯಜಮಾನನ ಶವಯಾತ್ರೆಯಲ್ಲೇ ಪ್ರಾಣ ಬಿಟ್ಟ ನಿಷ್ಠಾವಂತ ನಾಯಿ ʼದುಗ್ಗುʼ