Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಒಂದೇ ಹೆರಿಗೆಯಲ್ಲಿ ನಾಲ್ವರು ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ…!

ಮಂಗಳೂರು : ನಗರದ ಕಂಕನಾಡಿಯ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಮಹಿಳೆಯೊಬ್ಬರು ನಾಲ್ಕು ಮಕ್ಕಳಿಗೆ ಜನ್ಮ ನೀಡಿದ್ದಾರೆ. ವೈದ್ಯರ ತಂಡ ಶಸ್ತ್ರಚಿಕಿತ್ಸೆ ಮೂಲಕ ಹೆರಿಗೆ ಮಾಡಿಸಿದ್ದು, ತಾಯಿ ಮಕ್ಕಳು ಆರೋಗ್ಯವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ತೆಲಂಗಾಣ ರಾಜ್ಯದ ತೇಜ ಎಂಬುವವರ ಪತ್ನಿ ಬಾನೋತ್ ದುರ್ಗಾ ಅವರು ನಾಲ್ವರು ಶಿಶುಗಳಿಗೆ ಜನ್ಮ ನೀಡಿದ ಮಹಾತಾಯಿಯಾಗಿದ್ದಾರೆ. ದುರ್ಗಾ ಅವರು ಎರಡು ಗಂಡು, ಎರಡು ಹೆಣ್ಣು ಶಿಶುಗಳಿಗೆ ಜನ್ಮ ನೀಡಿದ್ದಾರೆ. ಈ ಶಿಶುಗಳು ಕ್ರಮವಾಗಿ 1.1 ಕೆಜಿ, 1.2 ಕೆಜಿ, 800 ಗ್ರಾಂ, 900 ಗ್ರಾಂ ತೂಕ ಹೊಂದಿದೆ. 30 ವಾರಗಳಿಗೆ ಹೆರಿಗೆಯಾಗಿದೆ. ಹೀಗಾಗಿ ಅವಧಿಗೆ ಮುನ್ನ ಜನನವಾಗಿದ್ದರಿಂದ ಸದ್ಯ ಶಿಶುಗಳನ್ನು ಎನ್‌ಐಸಿಯುವಿನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ.

 
ಒಂದೇ ಹೆರಿಗೆಯಲ್ಲಿ ನಾಲ್ಕು ಶಿಶುಗಳ ಜನನ ಬಹಳ ಅಪರೂಪವಾಗಿದ್ದು, ಇದು 7,00,000 ಗರ್ಭಧಾರಣೆಗಳಲ್ಲಿ ಒಂದರಲ್ಲಿ ಮಾತ್ರ ಸಂಭವಿಸುತ್ತವೆ ಎಂದು ವೈದ್ಯರು ಹೇಳಿದ್ದಾರೆ. ಸ್ತ್ರೀರೋಗ ತಜ್ಞೆ, ಡಾ.ಜೋಯ್ಲೀನ್ ಡಿಅಲ್ಮೇಡಾ ಗರ್ಭಿಣಿಯ ಪ್ರಸವಪೂರ್ವ ಆರೈಕೆ ಮಾಡಿದ್ದಾರೆ. ಆಸ್ಪತ್ರೆಯ ಹೆರಿಗೆ ಮತ್ತು ಮಕ್ಕಳ ವಿಭಾಗದ ವೈದ್ಯಕೀಯ ತಂಡ ಮುತುವರ್ಜಿಯಿಂದ ಕಾರ್ಯನಿರ್ವಹಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಇತಿಹಾಸದಲ್ಲಿ ಇದೊಂದು ಅಪರೂಪದ ಹೆರಿಗೆ ಪ್ರಕರಣ ಎಂದು ಹೇಳಲಾಗಿದೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಪಾಲರ ಪತ್ನಿಯ ಆರೋಗ್ಯದಲ್ಲಿ ಏರುಪೇರು :  ದಿಢೀರ್ ಇಂದೋರ್ ಗೆ ತೆರಳಿದ ಗೆಹಲೋಟ್ -ಸಿಎಂ ರಾಜೀನಾಮೆ ಪತ್ರ ಯಾರಿಗೆ ಸಲ್ಲಿಸುತ್ತಾರೆ ?ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರು