Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಉದ್ಯಮಿಯ ಭೀಕರ ಕೊಲೆ

ಕಾರವಾರ : ಮಹಾರಾಷ್ಟ್ರದ ಪುಣೆ ಮೂಲದ ಉದ್ಯಮಿಯೊಬ್ಬರನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಉದ್ಯಮಿ ವಿನಾಯಕ ನಾಯ್ಕ (52) ಕೊಲೆಯಾದ ವ್ಯಕ್ತಿಯಾಗಿದ್ದು, ಹಣಕೊಣ ಗ್ರಾಮದ ಮನೆಯಲ್ಲಿ ನಸುಕಿನ ಜಾವ ರಕ್ತದೋಕುಳಿ ಹರಿದಿದೆ. ಅಪರಿಚಿತರು ಏಕಾಏಕಿ ಬಂದು ವಿನಾಯಕ ದಂಪತಿ ಮೇಲೆ ಮಚ್ಚು ಬೀಸಿದ್ದಾರೆ. ಮಚ್ಚಿನ ಏಟಿಗೆ ಪತಿ ಸ್ಥಳದಲ್ಲೇ ಸಾವನ್ನಪ್ಪಿದರೆ, ಪತ್ನಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಉದ್ಯಮಿ ವಿನಾಯಕ ನಾಯ್ಕ ತಮ್ಮ ಪತ್ನಿಯೊಂದಿಗೆ ಕಳೆದ ವಾರ ಗ್ರಾಮ ದೇವರ ಜಾತ್ರೆಗೆಂದು ಹಣಕೊಣ ಗ್ರಾಮಕ್ಕೆ ಬಂದಿದ್ದರು. ಭಾನುವಾರ (ಇಂದು) ಬೆಳಗ್ಗೆ ಪುಣೆಗೆ ಹೋಗುವುದಾಗಿ ಸ್ನೇಹಿತರಿಗೆ ತಿಳಿಸಿದ್ದರು. ಅಷ್ಟರಲ್ಲೇ ಕೊಲೆ ನಡೆದಿರುವುದು ಭಾರಿ ಅನುಮಾನ ಹುಟ್ಟಿಸಿದೆ.

 



ಊರಿಗೆ ಬಂದಾಗ ಘಟನೆ : ಉದ್ಯಮಿ ವಿನಾಯಕ ನಾಯ್ಕ ಯಾನೆ ರಾಜು ನಾಯ್ಕ ದುಷ್ಕರ್ಮಿಗಳ ಗುಂಪು ತಲ್ವಾರ್‌ನಿಂದ ಹಲ್ಲೆ ನಡೆಸಿ ಹತ್ಯೆ ಮಾಡಿದೆ. ಪುಣೆಯಲ್ಲಿ ಎಲೆಕ್ಟ್ರಾನಿಕ್ ವಸ್ತುಗಳ ಆಮದು, ರಫ್ತು ವಹಿವಾಟು ನಡೆಸುತ್ತಿರುವ ಉದ್ಯಮಿ ತನ್ನ ಊರಾದ ಹಣಕೋಣಕ್ಕೆ ಬಂದಿದ್ದರು. ಭಾನುವಾರ ಪುಣೆಗೆ ಹೊರಡಲು ಸಿದ್ದರಾಗಿದ್ದರು. ನಸುಕಿನ ಜಾವ 5.30ರ ಸುಮಾರಿಗೆ ಅವರ ಹತ್ಯೆ ಮಾಡಲಾಗಿದೆ.
ನಾಲ್ಕರಿಂದ ಐದು ಜನರಿದ್ದ ಗುಂಪೊಂದು ಮನೆಗೆ ನುಗ್ಗಿ ಕೃತ್ಯ ನಡೆಸಿದೆ. ಆರೋಪಿಗಳ ಬಂಧನಕ್ಕೆ ವಿಶೇಷ ತಂಡ ರಚಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೊಲೆ ಯಾರೂ ಮಾಡಿದರು ಮತ್ತು ಯಾಕೆ ಮಾಡಿದ್ರು? ಎಂಬುದು ಇನ್ನಷ್ಟೇ ತಿಳಿಯಬೇಕಿದೆ. ಚಿತ್ತಾಕುಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ನಡೆದಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿಭೋಜಶಾಲಾ–ಕಮಾಲ್ ಮೌಲಾ ಪ್ರಕರಣ: ಶುಕ್ರವಾರದ ನಮಾಜ್‌ಗೆ ಮುಸ್ಲಿಮರಿಗೆ ಪ್ರತ್ಯೇಕ ಸ್ಥಳ ಕಲ್ಪಿಸಲು ಸುಪ್ರೀಂ ಕೋರ್ಟ್ ನಿರ್ದೇಶನ2022ರಲ್ಲಿ ಉಕ್ರೇನ್ ಮೇಲೆ ಅಣ್ವಸ್ತ್ರ ದಾಳಿ ನಡೆಸದಂತೆ ರಷ್ಯಾವನ್ನು ತಡೆದದ್ದು ಮೋದಿ : ಪೋಲೆಂಡ್ ಸಚಿವರ ಹೇಳಿಕೆಚೊಚ್ಚಲ ಬಾಹ್ಯಾಕಾಶ ಯಾನ ಕೈಗೊಂಡ ಭಾರತೀಯ ಮೂಲದ ಗಗನಯಾತ್ರಿ ಅನಿಲ ಮೆನನ್ಸಾವೂ ಬೇರ್ಪಡಿಸಲಿಲ್ಲ ಇವರಿಬ್ಬರ ಬಂಧವನ್ನು…; ಯಜಮಾನನ ಶವಯಾತ್ರೆಯಲ್ಲೇ ಪ್ರಾಣ ಬಿಟ್ಟ ನಿಷ್ಠಾವಂತ ನಾಯಿ ʼದುಗ್ಗುʼ