Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ವಿಶ್ವಕಪ್ ಗೆದ್ದ ಭಾರತಕ್ಕೆ ಘೋಷಣೆಯಾಯ್ತು ದೊಡ್ಡ ಮೊತ್ತ !

 

ನವದೆಹಲಿ :                                                             19 ವರ್ಷದೊಳಗಿನ ಮಹಿಳೆಯರ ಟ್ವೆಂಟಿ-20 ವಿಶ್ವಕಪ್ ಫೈನಲ್‌ನಲ್ಲಿ ಶಫಾಲಿ ವರ್ಮಾ ನಾಯಕತ್ವದ ಭಾರತ ತಂಡ ಇಂಗ್ಲೆಂಡ್‌ ವಿರುದ್ಧ ಗೆಲುವು ಸಾಧಿಸುವ ಮೂಲಕ ಇತಿಹಾಸ ರಚಿಸಿದೆ. ಈ ಸುದ್ದಿ ಬೆನ್ನಲ್ಲೇ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಮಹಿಳೆಯರ ತಂಡಕ್ಕೆ ದೊಡ್ಡ ಮೊತ್ತದ ಘೋಷಣೆ ಮಾಡಿದ್ದಾರೆ.

ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರು ವಿಶ್ವಕಪ್ ಗೆದ್ದಿರುವ 19 ವರ್ಷದೊಳಗಿನ ಮಹಿಳೆಯರ ತಂಡ ಮತ್ತು ಸಹಾಯಕ ಸಿಬ್ಬಂದಿಗೆ ₹5 ಕೋಟಿ ಬಹುಮಾನ ನೀಡುವುದಾಗಿ ಘೋಷಿಸಿದ್ದಾರೆ.

ಇದೇ ಮೊದಲ ಆಯೋಜನೆಗೊಂಡಿರುವ ಐಸಿಸಿ ಅಂಡರ್-19 ಮಹಿಳಾ ಟ್ವೆಂಟಿ-20 ವಿಶ್ವಕಪ್ ಟೂರ್ನಿಯಲ್ಲಿ ಭಾರತ ಪ್ರಶಸ್ತಿ ಎತ್ತಿ ಹಿಡಿದಿದೆ. ಇದು ಭಾರತೀಯ ಮಹಿಳಾ ಕ್ರಿಕೆಟ್ ಪಾಲಿಗೆ ಹೊಸ ಆಶಾಕಿರಣವಾಗಿದೆ. ಬರುವ ದಿನಗಳಲ್ಲಿ ಮಹಿಳಾ ಕ್ರಿಕೆಟ್ ಗೆ ಇದು ಸ್ಪೂರ್ತಿಯಾಗಿದ್ದು ಈ ನಿಟ್ಟಿನಲ್ಲಿ ಇದೀಗ ಭಾರತೀಯ ಕ್ರಿಕೆಟ್ ಮಂಡಳಿ ದೊಡ್ಡ ಮೊತ್ತವನ್ನು ನೀಡುವುದಾಗಿ ಘೋಷಿಸಿದೆ.

ಇಂಗ್ಲೆಂಡ್‌ ವಿರುದ್ಧ ಟಾಸ್‌ ಗೆದ್ದ ಭಾರತ, ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ 17.1 ಓವರ್‌ಗಳಲ್ಲಿ 68 ರನ್ ಗಳಿಸಿ ಆಲೌಟ್ ಆಯಿತು.

69 ರನ್‌ಗಳ ಸಾಧಾರಣ ಮೊತ್ತ ಬೆನ್ನತ್ತಿದ ಭಾರತ 14 ಓವರ್‌ಗಳಲ್ಲಿ 3 ವಿಕೆಟ್‌ ಕಳೆದುಕೊಂಡು ಗೆಲುವು ಸಾಧಿಸಿತು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿಭೋಜಶಾಲಾ–ಕಮಾಲ್ ಮೌಲಾ ಪ್ರಕರಣ: ಶುಕ್ರವಾರದ ನಮಾಜ್‌ಗೆ ಮುಸ್ಲಿಮರಿಗೆ ಪ್ರತ್ಯೇಕ ಸ್ಥಳ ಕಲ್ಪಿಸಲು ಸುಪ್ರೀಂ ಕೋರ್ಟ್ ನಿರ್ದೇಶನ2022ರಲ್ಲಿ ಉಕ್ರೇನ್ ಮೇಲೆ ಅಣ್ವಸ್ತ್ರ ದಾಳಿ ನಡೆಸದಂತೆ ರಷ್ಯಾವನ್ನು ತಡೆದದ್ದು ಮೋದಿ : ಪೋಲೆಂಡ್ ಸಚಿವರ ಹೇಳಿಕೆಚೊಚ್ಚಲ ಬಾಹ್ಯಾಕಾಶ ಯಾನ ಕೈಗೊಂಡ ಭಾರತೀಯ ಮೂಲದ ಗಗನಯಾತ್ರಿ ಅನಿಲ ಮೆನನ್ಸಾವೂ ಬೇರ್ಪಡಿಸಲಿಲ್ಲ ಇವರಿಬ್ಬರ ಬಂಧವನ್ನು…; ಯಜಮಾನನ ಶವಯಾತ್ರೆಯಲ್ಲೇ ಪ್ರಾಣ ಬಿಟ್ಟ ನಿಷ್ಠಾವಂತ ನಾಯಿ ʼದುಗ್ಗುʼ