Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕುಸಿದು ಬಿದ್ದ ಕಾಳಿ ನದಿ ಸೇತುವೆ-ನದಿಗೆ ಬಿದ್ದ ಲಾರಿ

ಕಾರವಾರ : ಬುಧವಾರ ಬೆಳಗಿನ ಜಾವ ಎರಡು ಗಂಟೆ ಸುಮಾರಿಗೆ ಕಾಳಿ ನದಿ ಸೇತುವೆ ಕುಸಿದು ಬಿದ್ದಿದೆ. ಇದರ ಪರಿಣಾಮ ಸೇತುವೆ ಮೇಲೆ ಸಂಚರಿಸುತ್ತಿದ್ದ ಲಾರಿ ನದಿಗೆ ನದಿ ಪಾಲಾಗಿದೆ. ನದಿಗೆ ಬಿದ್ದ ಲಾರಿ ಚಾಲಕನನ್ನು ಸ್ಥಳೀಯ ಮೀನುಗಾರರ ಸಹಾಯದಿಂದ ರಕ್ಷಣೆ ಮಾಡಲಾಗಿದೆ.ಇನ್ನೊಂದು ಬದಿಯ ಹೊಸ ಸೇತುವೆ ಆರಂಭದಲ್ಲೂ ಕುಸಿತದ ಸಾಧ್ಯತೆ ಕಂಡು ಬಂದಿರುವ ಕಾರಣ ಸದ್ಯ ರಾತ್ರಿ ಹೆದ್ದಾರಿ 66ರಲ್ಲಿ ಇರುವ ಕಾರವಾರ ಮತ್ತು ಗೋವಾ ನಡುವಿನ ಸಂಚಾರ ಸ್ಥಗಿತಗೊಳಿಸಿರುವುದಾಗಿ ಮಾಹಿತಿ ಬಂದಿದೆ. ನದಿಗೆ ಬಿದ್ದ ಲಾರಿಯಲ್ಲಿದ್ದ ಚಾಲಕನನ್ನು ಮೀನುಗಾರರ ಸಹಾಯದಿಂದ ಸುರಕ್ಷಿತವಾಗಿ ರಕ್ಷಣೆ ಮಾಡಲಾಗಿದೆ. ನಂತರ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಾಲಕ ಆರೋಗ್ಯದಿಂದ ಇದ್ದಾರೆ. ಇದು ಕಾಳಿನದಿಗೆ ಕಟ್ಟಿರುವ ಹಳೆಯ ಸೇತುವೆಯಾಗಿದೆ. ಮೂರು ಕಡೆ ಕುಸಿದಿದೆ. ಇದರಿಂದ ಸಂಚಾರದ ಮೇಲು ಅಡಚಣೆ ಉಂಟಾಗಲಿದ್ದು ಕಾರವಾರ ಮತ್ತು ಗೋವಾ ಮಾರ್ಗದ ಎರಡು ಭಾಗದ ಸಂಚಾರವನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ.

ಘಟನೆ ವಿವರ : ಕಾರವಾರ ನಗರದ ಕೋಡಿಭಾಗ್ ನಲ್ಲಿ ಕಾಳಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ 41 ವರ್ಷಗಳ ಹಳೆ ಸೇತುವೆ ಮಧ್ಯ ರಾತ್ರಿ 1 ಗಂಟೆ ಸುಮಾರಿಗೆ ಒಮ್ಮಿಂದ ಒಮ್ಮೆಲೆ ಕುಸಿದು ಬಿದ್ದ ಘಟನೆ ನಡೆದಿದೆ.

ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರದ ಕೋಡಿಭಾಗ್ ಬಳಿ ಕಾರವಾರ ಹಾಗೂ ಗೋವಾ ನಡುವಿನ ರಾಷ್ಟ್ರೀಯ ಹೆದ್ದಾರಿ ಬಳಿ ನಿರ್ಮಿಸಿದ್ದ ಸೇತುವೆ ಕುಸಿದಿದೆ.
ಈ ವೇಳೆ ಸೇತುವೆ ಮೇಲೆ ಲಾರಿ ಚಾಲನೆ ಮಾಡ್ತಿದ್ದ ತಮಿಳುನಾಡು ಮೂಲದ ಲಾರಿ ಚಾಲಕ ಬಾಲ್ ಮುರುಗನ್(37) ಸಮೇತ ಖಾಲಿ ಟ್ರಕ್ ನದಿಗೆ ಬಿದ್ದಿದೆ. ಕಾಳಿ ನದಿಯಲ್ಲಿ ಬಿದ್ದ ಲಾರಿಯ ಮುಂಭಾಗದ ಗ್ಲಾಸ್ ಒಡೆದು ಕ್ಯಾಬಿನ್ ಮೇಲೆ ನಿಂತು ಚಾಲಕ ಬಾಲ ಮುರುಗನ್ ರಕ್ಷಣೆಗೆ ಕೂಗಿದ್ದರು. ಸದ್ಯ ಬೀಟ್ ಪೊಲೀಸರ ಮುಂಜಾಗೃತೆಯಿಂದ ಲಾರಿ ಚಾಲಕನ ಪ್ರಾಣ ಉಳಿದಿದೆ.

ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಧಾವಿಸಿದ ಎಸ್​ಪಪಿ ನಾರಾಯಣ ಹಾಗೂ ಪೊಲೀಸರ ತಂಡ ನದಿಗೆ ಇಳಿದು ಚಾಲಕನನ್ನು ರಕ್ಷಿಸಿದ್ದಾರೆ. ಸ್ಥಳೀಯ ಮೀನುಗಾರರು ಹಾಗೂ ಪೊಲೀಸ್ ಸಿಬ್ಬಂದಿ ಸೇರಿ ಬೋಟ್ ಮೂಲಕ ಲಾರಿ ಚಾಲಕನನ್ನ ರಕ್ಷಿಸಿದ್ದಾರೆ. ಗೋವಾದಿಂದ ಹುಬ್ಬಳ್ಳಿ ಕಡೆ ಮಧ್ಯರಾತ್ರಿ ತೆರಳುತಿದ್ದ ತಮಿಳುನಾಡು ಮೂಲದ ಟ್ರಕ್ ಸೇತುವೆ ಮೇಲೆ ತೆರಳುತಿದ್ದಂತೆ ಮೊದಲ ಭಾಗ ಕುಸಿದಿದೆ ನಂತರ ಮೂರು ಕಡೆ ಕುಸಿದಿದೆ. ಸದ್ಯ ಟ್ರಕ್ ಚಾಲಕನ ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ನದಿಗೆ ನಿರ್ಮಿಸಿರುವ ಇನ್ನೊಂದು ಸೇತುವೆಯಲ್ಲಿ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ಸೇತುವೆ ಕುಸಿತದಲ್ಲಿ ಇನ್ನಷ್ಟು ವಾಹನ ಬಿದ್ದಿರುವ ಶಂಕೆ ಹಿನ್ನೆಲೆ ನದಿಯಲ್ಲಿ ಕಾರ್ಯಾಚರಣೆ ಮುಂದುವರೆದಿದೆ. ಸ್ಥಳದಲ್ಲಿ ಪೊಲೀಸರು ಮೊಕ್ಕಾಂ ಹೂಡಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 66ರ ನಿರ್ಮಾಣದ ವೇಳೆ ಒಂದೇ ಒಂದು ಹೊಸ ಸೇತುವೆ ನಿರ್ಮಾಣ ಮಾಡಲಾಗಿತ್ತು. ಇನ್ನೊಂದು ಮಾರ್ಗಕ್ಕೆ ಹಳೆ ಸೇತುವೆಯನ್ನೇ ಬಳಸಲಾಗುತ್ತಿತ್ತು. ಐಆರ್​ಬಿ ಹೊಸ ಸೇತುವೆ ನಿರ್ಮಾಣ ಮಾಡಿರಲಿಲ್ಲ. 41 ವರ್ಷ ಹಳೆಯ ಸೇತುವೆಯನ್ನೇ ಬಳಸಲಾಗಿತ್ತು. ಆದರೆ ಮಧ್ಯ ರಾತ್ರಿ ಏಕಾಏಕಿ ಸೇತುವೆ ಕುಸಿದಿದೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರುನಾಳೆ ಸಿದ್ದರಾಮಯ್ಯ ರಾಜೀನಾಮೆ ?