Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಪವಾಡ ಎನ್ನುವುದು ಇದಕ್ಕೆ ಅಲ್ಲವೇ ?

 

ಗುವಾಹಟಿ :
ಇದು ವೈದ್ಯರ ನಿರ್ಲಕ್ಷ್ಯವೂ ಅಥವಾ ಪವಾಡವೋ? ಅಸ್ಸಾಂ ರಾಜಧಾನಿ ಗುವಾಹಟಿ ಆಸ್ಪತ್ರೆಯಲ್ಲಿ ಮಗುವಿನ ಜನನವಾಗಿದೆ. ಎರಡು ದಿನ ಐಸಿಯೂನಲ್ಲಿ ಮಗುವಿಗೆ ಚಿಕಿತ್ಸೆ ನೀಡಲಾಗಿದೆ. ಆದರೆ ಯಾವುದೇ ಚಲನವಲನ ಆಗಿಲ್ಲ. ಹೀಗಾಗಿ ವೈದ್ಯರು ಮಗು ಮೃತಪಟ್ಟಿದೆ ಎಂದು ಕುಟಂಬಸ್ಥರಿಗೆ ಹಸ್ತಾಂತರಿಸಿದ್ದಾರೆ. ಆಕ್ರಂದನ, ನೋವು, ಕಣ್ಣೀರಿನ ನಡುವೆ ಕುಟುಂಬಸ್ಥರು ಅಂತ್ಯಸಂಸ್ಕಾರಕ್ಕೆ ಸಿದ್ಧತೆ ಮಾಡಿದ್ದರು. ಇನ್ನೇನು ಅಂತ್ಯಸಂಸ್ಕಾರದ ಅಂತಿಮ ಘಟ್ಟ ತಲಪುತ್ತಿದ್ದಂತೆ ಮಗು ಅಳುತ್ತಿರುವ ಶಬ್ದ ಕೇಳಿಸಿದೆ. ತಕ್ಷಣವೇ ಮಗುವನ್ನು ಎತ್ತಿಕೊಂಡ ಕುಟುಂಬಸ್ಥರು ಆಸ್ಪತ್ರೆ ದೌಡಾಯಿಸಿದ್ದಾರೆ. ಸದ್ಯ ಈ ಮಗುವಿಗೆ ಐಸಿಯು ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ನೋವು ಕಾಣಿಸಿಕೊಂಡ ಗರ್ಭಿಣಿಯನ್ನು ಗುವಾಹಟಿಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಒಂದೆಡೆ ರಕ್ತ ಸ್ರಾವ ಸೇರಿದಂತೆ ಇತರ ಸಮಸ್ಯೆಗಳು ಕಾಣಿಸಿಕೊಂಡಿತ್ತು. ಆದರೆ ಸರ್ಕಾರಿ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ಸಿಗಲಿಲ್ಲ. ಹೀಗಾಗಿ ತಕ್ಷಣವೇ ಗರ್ಭಿಣಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಕ್ಟೋಬರ್ 3 ರ ರಾತ್ರಿ 10 ಗಂಟೆಗೆ ಗರ್ಭಿಣಿ ಮಗುವಿಗೆ ಜನ್ಮ ನೀಡಿದ್ದಾರೆ. ಜನ್ಮತಾಳಿದ ಗಂಡು ಮಗುವಿನ ತೂಕ ಕೇವಲ 500 ಗ್ರಾಂ ಆಗಿತ್ತು.

 

ಮಗುವಿನಲ್ಲಿ ಸಣ್ಣದಾದ ಎದೆಬಡಿತ ಹೊರತುಪಡಿಸಿದರೆ ಚಲನವಲನ ಇರಲಿಲ್ಲ. ಜನ್ಮತಾಳಿದ ಮಗು ಅಳಲಿಲ್ಲ. ಪರಿಶೀಲಿಸಿದ ವೈದ್ಯರು ಮಗುವಿನ ತಂದೆ ರತನ್ ದಾಸ್‌ನನ್ನು ಕರೆದು ಯಾವುದೇ ಚಲನವಲನ ಇಲ್ಲದ ಕಾರಣ ನಾವು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಬೇಕಾಗಿದೆ ಎಂದಿದ್ದಾರೆ. ಬಳಿಕ ಬುಧವಾರ ಬೆಳಗ್ಗೆ ಮಗುವಿನಲ್ಲಿ ಯಾವುದೇ ಚಲನವಲನ ಇಲ್ಲದ ಕಾರಣ ಮಗು ಮೃತಪಟ್ಟಿದೆ ಎಂದು ವೈದ್ಯರು ಹೇಳಿದ್ದಾರೆ.

ಮಗುವನ್ನು ವೈದ್ಯರು ರತನ್ ದಾಸ್ ಹಾಗೂ ಕುಟುಂಬಸ್ಥರಿಗೆ ಹಸ್ತಾಂತರಿಸಿದ್ದಾರೆ. ಇದೇ ವೇಳೆ ಆಸ್ಪತ್ರೆ ಸಿಬ್ಬಂದಿ ಮಗುವಿನ ಮರಣ ಪ್ರಮಾಣಪತ್ರವನ್ನು ನೀಡಿದ್ದಾರೆ. ಇತ್ತ ಮಗುವಿನ ತಾಯಿಗೆ ಚಿಕಿತ್ಸೆ ಮುಂದುವರಿಸಲಾಗಿತ್ತು. ನೋವು, ಆಕ್ರಂದನದಿಂದಲೇ ಮನಗೆ ವಾಪಾಸ್ ಆದ ಕುಟುಂಬ ಗಂಡು ಮಗುವಿನ ಅಂತ್ಯಸಂಸ್ಕಾರಕ್ಕೆ ಎಲ್ಲಾ ವ್ಯವಸ್ಥೆ ಮಾಡಲಾಯಿತು.

ಎಲ್ಲಾ ಸಿದ್ದತೆ ಬಲಿಕ ಮಧ್ಯಾಹ್ನ ಅಂತ್ಯಸಂಸ್ಕಾರ ಕ್ರಿಯೆಗಳು ಆರಂಭಗೊಂಡಿತ್ತು. ಇನ್ನೇನು ಕೆಲವೇ ಕ್ಷಣದಲ್ಲಿ ಅಂತಿಮ ಘಟ್ಟದ ಪ್ರಕ್ರಿಯೆ ನಡೆಯಬೇಕು ಅನ್ನುವಷ್ಟರಲ್ಲೇ ಮಗು ಅಳುತ್ತಿರುವ ಶಬ್ದ ಕೇಳಿಸಿದೆ. ಮಗುವಿನ ಕಾಲುಗಳಲ್ಲಿ ಚಲನ ಕಾಣಿಸಿದೆ. ತಕ್ಷಣವೇ ಕುಟುಂಬಸ್ಥರು ಮಗುವನ್ನು ಅಂತ್ಯಸಂಸ್ಕಾರದಿಂದ ರಕ್ಷಿಸಿದ ಕುಟುಂಬ ತಕ್ಷಣವೇ ಆಸ್ಪತ್ರೆ ದಾಖಲಿಸಿದ್ದಾರೆ. ಇದೀಗ ಮಗುವಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಮಗುವಿನ ಆರೋಗ್ಯ ಸ್ಥಿತಿ ಗಂಭೀರವಾಗಿದೆ.

ಇತ್ತ ಮಗುವಿನ ಕುಟುಂಬಸ್ಥರು ಆಸ್ಪತ್ರೆ ಹಾಗೂ ವೈದ್ಯರ ವಿರುದ್ದ ದೂರು ದಾಖಲಿಸಿದ್ದಾರೆ. ಆಸ್ಪತ್ರೆ ನೀಡಿದ ಮರಣ ಪ್ರಮಾಣ ಪತ್ರವನ್ನು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಆಸ್ಪತ್ರೆ ನೀಡಿದ ಬಿಲ್, ವೈದ್ಯರ ಸಮ್ಮರಿ ಸೇರಿದಂತೆ ಎಲ್ಲವನ್ನೂ ಪೊಲೀಸರಿಗೆ ಒಪ್ಪಿಸಿದ್ದಾರೆ. ಇದೀಗ ಆಸ್ಪತ್ರೆಗೆ ಸಂಕಷ್ಟ ಶುರುವಾಗಿದೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಪಾಲರ ಪತ್ನಿಯ ಆರೋಗ್ಯದಲ್ಲಿ ಏರುಪೇರು :  ದಿಢೀರ್ ಇಂದೋರ್ ಗೆ ತೆರಳಿದ ಗೆಹಲೋಟ್ -ಸಿಎಂ ರಾಜೀನಾಮೆ ಪತ್ರ ಯಾರಿಗೆ ಸಲ್ಲಿಸುತ್ತಾರೆ ?ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರು