Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

KPCC ಅಧ್ಯಕ್ಷ ಹುದ್ದೆಗೆ ತೇಲಿ ಬಂತು ಅಚ್ಚರಿ ಹೆಸರು

ಜನಜೀವಾಳ ಸರ್ಚ್ ಲೈಟ್‌  ಬೆಳಗಾವಿ : ಮಹತ್ವದ ಬೆಳವಣಿಗೆಯೊಂದರಲ್ಲಿ ಇದೀಗ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ (ಕೆಪಿಸಿಸಿ)ಅಧ್ಯಕ್ಷ ಹುದ್ದೆಗೆ ಮಹಿಳೆಯ ಹೆಸರು ಪ್ರಬಲವಾಗಿ ಕೇಳಿ ಬಂದಿದೆ. ಬೆಳಗಾವಿ ಜಿಲ್ಲೆಯ ಪ್ರಭಾವಿ ಕಾಂಗ್ರೆಸ್ ನಾಯಕಿ ಹಾಗೂ ಸಚಿವೆಯಾಗಿ ರಾಜ್ಯದೆಲ್ಲಡೆ ವರ್ಚಸ್ಸು ಹೊಂದಿರುವ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಕೆಪಿಸಿಸಿ ಪಟ್ಟ ಸಿಗಬಹುದು ಎಂಬ ಚರ್ಚೆ ಜೋರಾಗಿ ನಡೆದಿದೆ. ಸದ್ಯದಲ್ಲೇ ಕೆಪಿಸಿಸಿಗೆ ಹೊಸ ಅಧ್ಯಕ್ಷರ ನೇಮಕ ಆಗಲಿದೆ. ಇಡೀ ರಾಜ್ಯದ ಕಾಂಗ್ರೆಸ್ ನಾಯಕರು ಈ ನಿಟ್ಟಿನಲ್ಲಿ ಮುಂದಿನ ಅಧ್ಯಕ್ಷರು ಯಾರಾಗುತ್ತಾರೆ ಎಂಬ ಕುತೂಹಲದಿಂದ ಇದ್ದಾರೆ. ಈ ನಡುವೆ ಹಾಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಎಂದಿನಂತೆ ಇದೀಗ ತಂತ್ರಗಾರಿಕೆ ನಡೆಸಿದ್ದು ತಮ್ಮಲ್ಲಿರುವ ದಾಳವನ್ನು ಪ್ರಯೋಗಿಸಿ ಬಿಟ್ಟಿದ್ದಾರೆ ಎನ್ನಲಾಗಿದೆ.

ಕೆಪಿಸಿಸಿ ಅಧ್ಯಕ್ಷ ಹುದ್ದೆಯಿಂದ ತಾನು ಕೆಳಗಿಳಿಯಲು ಸಿದ್ಧ. ಆದರೆ, ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ 136 ಸ್ಥಾನಗಳು ಬರಲು ತನ್ನ ಕೊಡುಗೆ ಅಪಾರವಾಗಿದ್ದು ತಾನು ಅಧ್ಯಕ್ಷನಾಗಿದ್ದಾಗ ಇದು ಸಾಧ್ಯವಾಯಿತು. ಹೀಗಾಗಿ ತಮ್ಮ ಬಣದವರನ್ನೇ ಮುಂದಿನ ಅಧ್ಯಕ್ಷ ಹುದ್ದೆಗೆ ತರಲು ಅವರು ತೆರೆ ಮರೆಯಲ್ಲಿ ಹೈಕಮಾಂಡ್ ಮೇಲೆ ಒತ್ತಡ ಹೇರಿದ್ದಾರೆ ಎನ್ನಲಾಗುತ್ತಿದೆ. ಈ ನಿಟ್ಟಿನಲ್ಲಿ ತಮ್ಮ ಬಣದವರೇ ಆಗಿರುವ ಮಾಜಿ ಸಂಸದ ಹಾಗೂ ಸಹೋದರರು ಆಗಿರುವ ಡಿ.ಕೆ. ಸುರೇಶ್ ಅಥವಾ ತಮ್ಮ ಬಲಗೈ ಬಂಟರಾಗಿರುವ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನೇ ಕೆಪಿಸಿಸಿ ಹುದ್ದೆಗೆ ತರುವ ನಿಟ್ಟಿನಲ್ಲಿ ಅವರು ಕಾರ್ಯತಂತ್ರ ಹೆಣೆದಿದ್ದಾರೆ.



ಲಕ್ಷ್ಮೀ ಹೆಬ್ಬಾಳ್ಕರ್ ಅವರು ಪಕ್ಷಾಧ್ಯಕ್ಷ ಹುದ್ದೆ ಅಲಂಕರಿಸಲು ಅತ್ಯಂತ ಸಮರ್ಥರು. ಎರಡು ಬಾರಿ ಬೆಳಗಾವಿಯಂತಹ ದೊಡ್ಡ ಜಿಲ್ಲೆಯ ಅಧ್ಯಕ್ಷ ಹುದ್ದೆಯನ್ನು ನಿಭಾಯಿಸಿದ ಅಪಾರ ಅನುಭವ ಹೊಂದಿದ್ದಾರೆ. ರಾಜ್ಯ ಮಹಿಳಾ ಕಾಂಗ್ರೆಸ್ ಘಟಕದ ಅಧ್ಯಕ್ಷ ಪದವನ್ನು ಅವರು ನಿಭಾಯಿಸಿದ್ದಾರೆ. ಹೀಗಾಗಿ ಅವರಿಗೆ ಸಾರಥ್ಯ ವಹಿಸಿದರೆ ಅವರು ಅತ್ಯಂತ ಸಮರ್ಥನೀಯವಾದ ರೀತಿಯಲ್ಲಿ ಪಕ್ಷವನ್ನು ಕಟ್ಟಿ ಬೆಳೆಸುವುದರಲ್ಲಿ ಯಾವ ಸಂದೇಹವು ಇಲ್ಲ ಎಂದು ವರಿಷ್ಠರಿಗೆ ಮನವರಿಕೆ ಮಾಡಿ ಅಧ್ಯಕ್ಷ ಹುದ್ದೆಯನ್ನು ಮತ್ತೆ ತಮ್ಮ ಬಣಕ್ಕೆ ತಂದರೂ ಅಚ್ಚರಿಪಡಬೇಕಾಗಿಲ್ಲ.

ಈ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಣ ಮುಂದಿನ ದಿನಗಳಲ್ಲಿ ಯಾವುದೇ ಕಾರಣಕ್ಕೂ ಕೆಪಿಸಿಸಿ ಅಧ್ಯಕ್ಷ ಹುದ್ದೆ ತಮ್ಮ ಬಣದ ಕೈತಪ್ಪಿ, ಡಿ.ಕೆ. ಶಿವಕುಮಾರ್ ಬಣಕ್ಕೆ ಹೋಗಬಾರದು ಎಂದು ಶತಃಪ್ರಯತ್ನ ಮಾಡುತ್ತಿದೆ. ಮೇಲ್ನೋಟಕ್ಕೆ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಒಂದೇ ಎಂಬಂತೆ ಕಂಡರೂ ತೆರೆಯ ಹಿಂದೆ ಮಾತ್ರ ಉಭಯ ಬಣಗಳ ನಡುವೆ ಮೇಲಾಟ ತುಸು ಜೋರಾಗಿದೆ. ಈ ಶೀತಲ ಸಮರದಲ್ಲಿ ಯಾವ ಬಣಕ್ಕೆ ಜಯ ಸಿಗುತ್ತದೆ ಕಾದು ನೋಡಬೇಕಾಗಿದೆ!
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿಭೋಜಶಾಲಾ–ಕಮಾಲ್ ಮೌಲಾ ಪ್ರಕರಣ: ಶುಕ್ರವಾರದ ನಮಾಜ್‌ಗೆ ಮುಸ್ಲಿಮರಿಗೆ ಪ್ರತ್ಯೇಕ ಸ್ಥಳ ಕಲ್ಪಿಸಲು ಸುಪ್ರೀಂ ಕೋರ್ಟ್ ನಿರ್ದೇಶನ2022ರಲ್ಲಿ ಉಕ್ರೇನ್ ಮೇಲೆ ಅಣ್ವಸ್ತ್ರ ದಾಳಿ ನಡೆಸದಂತೆ ರಷ್ಯಾವನ್ನು ತಡೆದದ್ದು ಮೋದಿ : ಪೋಲೆಂಡ್ ಸಚಿವರ ಹೇಳಿಕೆಚೊಚ್ಚಲ ಬಾಹ್ಯಾಕಾಶ ಯಾನ ಕೈಗೊಂಡ ಭಾರತೀಯ ಮೂಲದ ಗಗನಯಾತ್ರಿ ಅನಿಲ ಮೆನನ್ಸಾವೂ ಬೇರ್ಪಡಿಸಲಿಲ್ಲ ಇವರಿಬ್ಬರ ಬಂಧವನ್ನು…; ಯಜಮಾನನ ಶವಯಾತ್ರೆಯಲ್ಲೇ ಪ್ರಾಣ ಬಿಟ್ಟ ನಿಷ್ಠಾವಂತ ನಾಯಿ ʼದುಗ್ಗುʼ