Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕೊಳವೆ ಬಾವಿಗೆ ಬಿದ್ದಿದ್ದ ಮೂರು ವರ್ಷದ ಮಗು ಜೀವಂತ, ಆದರೆ

ಜೈಪುರ: ರಾಜಸ್ಥಾನದಲ್ಲಿ ಡಿಸೆಂಬರ್ 23ರಂದು ಕೊಳವೆ ಬಾವಿಗೆ ಬಿದ್ದಿದ್ದ ಮೂರು ವರ್ಷದ ಬಾಲಕಿಯನ್ನು ಕೊನೆಗೂ ಸತತ 10 ದಿನಗಳ ಕಾರ್ಯಾಚರಣೆಯಲ್ಲಿ ಜೀವಂತವಾಗಿ ಹೊರ ತೆರೆಯಲಾಗಿದೆ.

10 ದಿನಗಳ ಹಿಂದೆ ರಾಜಸ್ಥಾನದ ಕೋಟ್‌ಪುಟ್ಲಿಯಲ್ಲಿ ಬೋರ್‌ವೆಲ್‌ ಒಳಗೆ ಬಿದ್ದ ಮೂರು ವರ್ಷದ ಮಗುವನ್ನು ಐದಕ್ಕೂ ಹೆಚ್ಚು ನಡೆದ ಪ್ರಯತ್ನಗಳು ವಿಫಲವಾದ ನಂತರವೂ ಅಂತಿಮವಾಗಿ ರಕ್ಷಿಸಲಾಯಿತು.. ಆದರೆ ಆಸ್ಪತ್ರೆಗೆ ಸೇರಿಸಿದ ಗಂಟೆಗಳ ನಂತರ ಅವಳು ಮೃತಪಟ್ಟಿದ್ದಾಳೆ ಎಂದು ಪ್ರಕಟಿಸಲಾಯಿತು.
ತಕ್ಷಣವೇ ಮಗುವನ್ನು ವೈದ್ಯಕೀಯ ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಆದರೆ ಆಸ್ಪತ್ರೆಗೆ ಕೊಂಡೊಯ್ದರೂ ಆಕೆ ಬದುಕಿ ಉಳಿಯಲಿಲ್ಲ.

ಅಂದು ರಾಜಸ್ಥಾನದ ಕೋಟಪುಟ್ಲಿ-ಬಹರೋಡ್‌ ಜಿಲ್ಲೆಯ ಕಿರಾತ್‌ಪುರ ಎಂಬಲ್ಲಿ ಚೇತನಾ ಎಂಬ ಮೂರು ವರ್ಷದ ಬಾಲಕಿ ಸುಮಾರು 150 ಅಡಿ ಆಳದ ಕೊಳವೆ ಬಾವಿಗೆ ಬಾಲಕಿ ಆಕಸ್ಮಿಕವಾಗಿ ಬಿದ್ದಿದ್ದಳು.

ಸದ್ಯ ಬಾಲಕಿಯ ಆರೋಗ್ಯ ಪರಿಸ್ಥಿತಿ ಹದಗೆಟ್ಟಿದ್ದು ಜಿಲ್ಲಾಸ್ಪತ್ರೆಯ ಸೂಪರ್ ಸ್ಪೆಷಾಲಿಟಿ ಘಟಕದ ಐಸಿಯುಗೆ ದಾಖಲಿಸಲಾಗಿದೆ. ಪ್ರಾಣಾಪಾಯದಿಂದ ಪಾರಾಗಿದ್ದಾಳೆ ಎಂದು ಜಿಲ್ಲಾಧಿಕಾರಿ ಕಲ್ಪನಾ ಅಗರವಾಲ್ ತಿಳಿಸಿದ್ದಾರೆ.

ತಜ್ಞರ ಮಾರ್ಗದರ್ಶನ ಪಡೆದು ಎನ್‌ಡಿಆರ್‌ಎಫ್‌ ತಂಡ ರಕ್ಷಣಾ ಕಾರ್ಯಾಚರಣೆ ನಡೆಸಿತ್ತು. ಎನ್‌ಡಿಆರ್‌ಎಫ್ ಸಿಬ್ಬಂದಿಯ ಶ್ರಮಕ್ಕೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.

ಕೊಳವೆ ಬಾವಿಗೆ ಸಮಾನಂತರವಾಗಿ ಅಗೆಯಲಾಗಿತ್ತು. ಈ ನಡುವೆ ಸುರಿದ ಮಳೆಯು ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಗಿ ಪರಿಣಮಿಸಿತ್ತು. ಬಂಡೆಯನ್ನು ಒಡೆಯುವುದು ಸವಾಲಾಗಿತ್ತು. ಇದು ರಾಜ್ಯದಲ್ಲಿ ಎದುರಾದ ಅತ್ಯಂತ ಕಠಿಣ ರಕ್ಷಣಾ ಕಾರ್ಯಾಚರಣೆಗಳಲ್ಲಿ ಒಂದಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆ ವಿವರ :
ಕಳೆದ ಸೋಮವಾರ(ಡಿ.23) ರಾಜಸ್ಥಾನದ ಕೊಟ್‌ಪುಟ್ಲಿಯಲ್ಲಿ ತಂದೆಯ ಜೊತೆ ತೋಟಕ್ಕೆ ಹೋಗಿದ್ದ ವೇಳೆ ಆಯತಪ್ಪಿ 150 ಅಡಿ ಆಳದ ಕೊಳವೆ ಬಾವಿಗೆ ಬಿದ್ದಿದ್ದ ಬಾಲಕಿಯನ್ನು ಹತ್ತು ದಿನದ ಕಾರ್ಯಾಚರಣೆ ಬಳಿಕ ಸುರಕ್ಷಿತವಾಗಿ ರಕ್ಷಣೆ ಮಾಡಲಾಗಿದೆ.
ಕಳೆದ ಹತ್ತು ದಿನಗಳಿಂದ ರಕ್ಷಣಾ ತಂಡ ಬಾಲಕಿಯ ರಕ್ಷಣಾ ಕಾರ್ಯಾಚರಣೆ ನಡೆಸಿದ್ದು ಹತ್ತನೇ ದಿನವಾದ ಇಂದು ಬಾಲಕಿಯನ್ನು ಕೊಳವೆ ಬಾವಿಯಿಂದ ಮೇಲಕ್ಕೆ ತೆಗೆದು ಹತ್ತಿರದ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು ಈ ವೇಳೆ ಪರಿಶೀಲಿಸಿದ ವೈದ್ಯರು ಬಾಲಕಿಯ ಸ್ಥಿತಿ ಸ್ಥಿರವಾಗಿದೆ ಎಂದು ಹೇಳಿದ್ದಾರೆ. ಸದ್ಯ ತೀವ್ರ ನಿಗಾ ಘಟಕದಲ್ಲಿ ಬಾಲಕಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಮೂರೂ ವರ್ಷದ ಬಾಲಕಿ ಚೇತನಾ ಕಳೆದ ಸೋಮವಾರ(ಡಿ.23) ತನ್ನ ತಂದೆಯ ಜೊತೆಯಲ್ಲಿ ಜಮೀನಿಗೆ ಹೋಗಿದ್ದ ವೇಳೆ ಸುಮಾರು 700 ಅಡಿ ಆಳದ ತೆರೆದ ಕೊಳವೆ ಬಾವಿಗೆ ಬಿದ್ದಿದ್ದಾಳೆ. ಬಾಲಕಿ ಕೊಳವೆ ಬಾವಿಗೆ ಬಿದ್ದಿರುವ ವಿಚಾರ ಬೆಳಕಿಗೆ ಬರುತ್ತಿದ್ದಂತೆ ಬಾಲಕಿಯ ರಕ್ಷಣಾ ಕಾರ್ಯಾಚರಣೆ ನಡೆಸಲು ಜಿಲ್ಲಾಡಳಿತ ಮುಂದಾಗಿದೆ. ಸ್ಥಳಕ್ಕೆ ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ಸೇರಿದಂತೆ ಅಧಿಕಾರಿಗಳು ಮತ್ತು ರಕ್ಷಣಾ ತಂಡಗಳು ದೌಡಾಯಿಸಿ ಕಳೆದ ಹತ್ತು ದಿನಗಳಿಂದ ಬಾಲಕಿಯನ್ನು ಸುರಕ್ಷಿತವಾಗಿ ಹೊರತರಲು ಅವಿರತ ಶ್ರಮ ನಡೆಸಿದೆ. ಬಾಲಕಿಯ ಪೋಷಕರು, ಗ್ರಾಮಸ್ಥರು ಸೇರಿದಂತೆ ಹಲವು ಮಂದಿ ಬಾಲಕಿ ಬದುಕಿ ಬರಲಿ ಎಂದು ದೇವರಲ್ಲಿ ವಿಶೇಷ ಪೂಜೆಯನ್ನು ನಡೆಸಿದ್ದರು ಕೊನೆಗೂ ಪೋಷಕರ, ಗ್ರಾಮಸ್ಥರ ಮೊರೆಗೆ ದೇವರು ಕರುಣೆ ತೋರಿದ್ದಾರೆ.
ಆಸ್ಪತ್ರೆ ವೈದ್ಯರು ಮಗು ಬದುಕುಳಿದಿರುವ ವಿಚಾರ ತಿಳಿಸುತ್ತಿದ್ದಂತೆ ಆಸ್ಪತ್ರೆ ಬಳಿ ನೆರೆದಿದ್ದ ಜನರು ಇದು ಪವಾಡವೇ ಸರಿ ಎಂದು ಹೇಳಿದ್ದಾರೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಪಾಲರ ಪತ್ನಿಯ ಆರೋಗ್ಯದಲ್ಲಿ ಏರುಪೇರು :  ದಿಢೀರ್ ಇಂದೋರ್ ಗೆ ತೆರಳಿದ ಗೆಹಲೋಟ್ -ಸಿಎಂ ರಾಜೀನಾಮೆ ಪತ್ರ ಯಾರಿಗೆ ಸಲ್ಲಿಸುತ್ತಾರೆ ?ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರು