Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

8 ಮರಿಗಳಿಗೆ ಜನ್ಮ ನೀಡಿದ ತೋಳ

ಕನಕಗಿರಿ : ಇಲ್ಲಿಗೆ ಸಮೀಪದ ಬಂಕಾಪುರ ಗ್ರಾಮದ ಪರಿಸರದ ನಿಯೋಜಿತ ತೋಳಧಾಮದಲ್ಲಿ ತೋಳವೊಂದು ಎಂಟು ಮರಿಗಳಿಗೆ ಜನ್ಮ ನೀಡಿದೆ. ಎಂಟು ಮರಿಗಳು ಓಡಾಡುತ್ತಿರುವುದು ಅರಣ್ಯ ಇಲಾಖೆ ಇರಿಸಿರುವ ಕ್ಯಾಮೆರಾದಲ್ಲಿ ಸೆರೆಯಾಗಿವೆ.

ಗಂಗಾವತಿ ಪ್ರಾದೇಶಿಕ ವಲಯ ವ್ಯಾಪ್ತಿಯಲ್ಲಿ ಸುಮಾರು 332 ಹೆಕ್ಟೇ‌ರ್ ಪ್ರದೇಶದಲ್ಲಿರುವ ಬಂಕಾಪುರ ತೋಳಧಾಮವು ಕುರುಚಲು ಅರಣ್ಯ ಪ್ರದೇಶ ಹೊಂದಿದೆ. ಗುಡ್ಡಗಳು ಸ್ವಾಭಾವಿಕ ಗುಹೆಗಳನ್ನೂ ಹೊಂದಿದ್ದು ತೋಳ, ಚಿರತೆ, ನವಿಲು, ಕತ್ತೆಕಿರುಬ, ನರಿ, ಮೊಲ, ಮುಳ್ಳುಹಂದಿ ಮೊದಲಾದ ಹಲವು ವನ್ಯಜೀವಿಗಳ ತಾಣವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇಂಡಿಯನ್ ಗ್ರೇ ಊಲ್ಸ್ ಎಂಬ ಪ್ರಭೇದದ ತೋಳಗಳು ಈ ಸಂರಕ್ಷಿತ ಪ್ರದೇಶದಲ್ಲಿವೆ. ಎಲ್ಲಾ ಮರಿಗಳನ್ನೂ ಉಳಿಸಲು ಅರಣ್ಯಾಧಿಕಾರಿಗಳು ಕ್ರಮವಹಿಸಿದ್ದಾರೆ. ಈ ಪ್ರದೇಶವನ್ನು ತೋಳ ವನ್ಯಧಾಮ ಎಂದು 15ನೇ ವನ್ಯಜೀವಿ ಮಂಡಳಿಯ ಸಭೆಯಲ್ಲಿ ಘೋಷಿಸಲಾಗಿದ್ದು, ಸಂಪುಟ ಉಪಸಮಿತಿ ಸಭೆಯಲ್ಲಿ ಪರಿಸರ ಸೂಕ್ಷ್ಮ ಪ್ರದೇಶ ಘೋಷಣೆಗೂ ನಿರ್ಣಯಿಸಲಾಗಿದೆ. ಮರಿಗಳು ಸೇರಿ ಸುಮಾರು 35-40 ತೋಳಗಳಿವೆ. ಇವುಗಳ ಸುರಕ್ಷತೆಗೆ ಕ್ರಮ ವಹಿಸಲಾಗಿದೆ ಎಂದು ಜೀವಿಶಾಸ್ತ್ರ ಇಲಾಖೆ ತಿಳಿಸಿದೆ.

ಪ್ರವಾಸಿ ತಾಣವಾಗಿ ಅಭಿವೃದ್ಧಿ: ಗಂಗಾವತಿ ನಗರದಿಂದ 15 ಕಿ.ಮೀ ದೂರದಲ್ಲಿರುವ ಈ ವನ್ಯಜೀವಿ ಧಾಮದಲ್ಲಿ ಸಫಾರಿ ವ್ಯವಸ್ಥೆ ಕಲ್ಪಿಸಿ ಪ್ರವಾಸಿ ತಾಣವಾಗಿ ಅಭಿವೃದ್ಧಿಪಡಿಸುವ ಉದ್ದೇಶವಿದೆ. ಈ ನಿಟ್ಟಿನಲ್ಲಿ ಅಧ್ಯಯನ ನಡೆಸಿ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ರಾಜ್ಯ ಅರಣ್ಯ ಇಲಾಖೆ ಕೈಗೊಂಡಿರುವ ಸುರಕ್ಷತಾ ಕ್ರಮಗಳ ಫಲವಾಗಿ ಬಂಕಾಪೂರ ತೋಳಧಾಮದಲ್ಲಿ ಅಳಿವಿನಂಚಿನಲ್ಲಿರುವ ತೋಳಗಳು ಸ್ವಚ್ಛಂದವಾಗಿ ವಿಹರಿಸುತ್ತಿವೆ. ಅಲ್ಲಿ ತೋಳ ವನ್ಯಧಾಮದಲ್ಲಿ ಸಫಾರಿ ಆರಂಭಿಸುವ ಚಿಂತನೆಯಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿಭೋಜಶಾಲಾ–ಕಮಾಲ್ ಮೌಲಾ ಪ್ರಕರಣ: ಶುಕ್ರವಾರದ ನಮಾಜ್‌ಗೆ ಮುಸ್ಲಿಮರಿಗೆ ಪ್ರತ್ಯೇಕ ಸ್ಥಳ ಕಲ್ಪಿಸಲು ಸುಪ್ರೀಂ ಕೋರ್ಟ್ ನಿರ್ದೇಶನ2022ರಲ್ಲಿ ಉಕ್ರೇನ್ ಮೇಲೆ ಅಣ್ವಸ್ತ್ರ ದಾಳಿ ನಡೆಸದಂತೆ ರಷ್ಯಾವನ್ನು ತಡೆದದ್ದು ಮೋದಿ : ಪೋಲೆಂಡ್ ಸಚಿವರ ಹೇಳಿಕೆಚೊಚ್ಚಲ ಬಾಹ್ಯಾಕಾಶ ಯಾನ ಕೈಗೊಂಡ ಭಾರತೀಯ ಮೂಲದ ಗಗನಯಾತ್ರಿ ಅನಿಲ ಮೆನನ್ಸಾವೂ ಬೇರ್ಪಡಿಸಲಿಲ್ಲ ಇವರಿಬ್ಬರ ಬಂಧವನ್ನು…; ಯಜಮಾನನ ಶವಯಾತ್ರೆಯಲ್ಲೇ ಪ್ರಾಣ ಬಿಟ್ಟ ನಿಷ್ಠಾವಂತ ನಾಯಿ ʼದುಗ್ಗುʼ