Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿ ಮೂಲದ ಯುವಕ ಮುರುಡೇಶ್ವರದಲ್ಲಿ ಆತ್ಮಹತ್ಯೆ

ಭಟ್ಕಳ: ಮುರುಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರ ಬೆಳಕಿಗೆ ಬಂದಿದೆ. ಗುಮ್ಮನಹಲ್ಲು, ಮಾವಳ್ಳಿ–02, ಮುರುಡೇಶ್ವರ ನಿವಾಸಿ ರಾಘು ತಂದೆ ಮಂಜುನಾಥ ನಾಯ್ಕ ಅವರು ನೀಡಿದ ದೂರಿನಂತೆ, ಪ್ರಾರ್ಥನಾ ಹೋಟೆಲ್ ಹಿಂಬದಿಯ ರೈಲ್ವೆ ಟ್ರ್ಯಾಕ್ ಪಕ್ಕದ ಖುಲ್ಲಾ ಜಾಗದಲ್ಲಿ ಮೊಬೈಲ್‌ನಲ್ಲಿ ಮಾತನಾಡುತ್ತಾ ವಾಕ್ ಮಾಡುತ್ತಿದ್ದ ವೇಳೆ ಮರಕ್ಕೆ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಯುವಕನನ್ನು ಗಮನಿಸಿದ್ದಾರೆ.

ಮೃತ ಯುವಕನನ್ನು ಪ್ರಸಾದ ಚಂದ್ರಕಾಂತ ಕೋಳಿ (28) ಎಂದು ಗುರುತಿಸಲಾಗಿದ್ದು, ಬೆಳಗಾವಿ ಜಿಲ್ಲೆಯ ಸೋಮವಾರಪೇಟೆ–ಗೋಕಾಕ್ ಪ್ರದೇಶ ಮೂಲದವನು ಎಂದು ತಿಳಿದುಬಂದಿದೆ. ಪ್ರಾಥಮಿಕ ಮಾಹಿತಿ ಪ್ರಕಾರ, ಯಾವುದೋ ವೈಯಕ್ತಿಕ ಕಾರಣದಿಂದ ಮನನೊಂದಿದ್ದ ಯುವಕ, ರೈಲ್ವೆ ಸ್ಟೇಷನ್ ಸಮೀಪದ ಜಾಗದಲ್ಲಿರುವ ಮರಕ್ಕೆ ನೈಲಾನ್ ಹಗ್ಗ ಕಟ್ಟಿ ಕುತ್ತಿಗೆಗೆ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಘಟನೆಯ ಮಾಹಿತಿ ದೊರಕುತ್ತಿದ್ದಂತೆಯೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ, ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಇದೇ ಯುವಕ ಕೆಲ ದಿನಗಳ ಹಿಂದೆ ಕಂಠಪೂರ್ತಿ ಮದ್ಯಪಾನ ಮಾಡಿದ ಸ್ಥಿತಿಯಲ್ಲಿ ಕಡಲತೀರಕ್ಕೆ ತೆರಳಿ ಅರಬ್ಬಿ ಸಮುದ್ರದಲ್ಲಿ ಕೊಚ್ಚಿ ಹೋಗುವ ಹಂತಕ್ಕೆ ತಲುಪಿದ್ದನು. ಆಗ ಮುರುಡೇಶ್ವರದ ಓಷಿಯನ್ ಅಡ್ವೆಂಚರ್ ಸಿಬ್ಬಂದಿಯ ಸಮಯಪ್ರಜ್ಞೆಯಿಂದ ಆತನ ಪ್ರಾಣ ಉಳಿದಿತ್ತು ಎಂಬುದು ಗಮನಾರ್ಹ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಪಾಲರ ಪತ್ನಿಯ ಆರೋಗ್ಯದಲ್ಲಿ ಏರುಪೇರು :  ದಿಢೀರ್ ಇಂದೋರ್ ಗೆ ತೆರಳಿದ ಗೆಹಲೋಟ್ -ಸಿಎಂ ರಾಜೀನಾಮೆ ಪತ್ರ ಯಾರಿಗೆ ಸಲ್ಲಿಸುತ್ತಾರೆ ?ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರು