Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ವಿದ್ಯಾರ್ಥಿಗಳಿಗೆ ಆಧಾರ್ ರೀತಿಯ 'ಅಪಾ‌ರ್'

ಬೆಂಗಳೂರು: ರಾಜ್ಯದ ಎಲ್ಲ ಪ್ರಾಥಮಿಕ, ಪ್ರೌಢ ಮತ್ತು ಹೈಯ‌ರ್ ಸೆಕೆಂಡರಿ ವಿದ್ಯಾರ್ಥಿಗಳಿಗೆ 'ಆಧಾ‌ರ್' ಸಂಖ್ಯೆಯ ಮಾದರಿಯಲ್ಲಿ 12 ಅಂಕಿಯ 'ಅಪಾರ್‌' ವಿಶಿಷ್ಟ ಗುರುತಿನ ಚೀಟಿ ವಿತರಿಸುವ ಪ್ರಕ್ರಿಯೆಗೆ ಚಾಲನೆ ದೊರೆತಿದೆ.

ಕೇಂದ್ರ ಶಾಲಾ ಶಿಕ್ಷಣ ಸಚಿವಾಲಯದ ರಾಷ್ಟ್ರೀಯ ಶಿಕ್ಷಣ ನೀತಿ 2020 (ಎನ್‌ಇಪಿ) ಯೋಜನೆ ಅಡಿ ವಿದ್ಯಾರ್ಥಿಗಳಿಗೆ ದೇಶದಾದ್ಯಂತ ಏಕರೂಪದ ಗುರುತಿನ ಚೀಟಿ ನೀಡಲು 'ಒಂದು ದೇಶ, ಏಕರೂಪದ ವಿದ್ಯಾರ್ಥಿ ಗುರುತಿನ ಚೀಟಿ' ಶಿಫಾರಸು ಮಾಡಲಾಗಿತ್ತು. ಅದರಂತೆ ಎಲ್ಲಾ ವಿದ್ಯಾರ್ಥಿಗಳಿಗೂ 'ಅಪಾರ್' ವಿಶಿಷ್ಟ ಗುರುತಿನ ಚೀಟಿ ನೀಡಲಾಗುತ್ತಿದೆ.

ಈಗಾಗಲೇ ರಾಜ್ಯ ಪಠ್ಯಕ್ರಮದ ಶಾಲೆಗಳ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದ ಎಸ್‌ಟಿಎಸ್ (ಸ್ಪೂಡೆಂಟ್ ಟ್ರ್ಯಾಕಿಂಗ್ ಸಿಸ್ಟಮ್) ಗುರುತಿನ ಚೀಟಿ ಮತ್ತು ಕೇಂದ್ರ ಸರ್ಕಾರದ ಪಿಇಎನ್ ನಂಬ‌ರ್ (ಪರ್ಮನೆಂಟ್ ಎಜ್ಯುಕೇಷನ್ ನಂಬರ್) ಚಾಲ್ತಿಯಲ್ಲಿ ಇದೆ.

ಅಪಾ‌ರ್ ಗುರುತಿನ ಚೀಟಿಗೆ ವಿದ್ಯಾರ್ಥಿಗಳ ಹೆಸರು ನೋಂದಣಿಗೂ ಮುಂಚೆ ಪೋಷಕರ ಒಪ್ಪಿಗೆ ಕಡ್ಡಾಯ. ಪೋಷಕರ ಆಧಾರ್, ಚುನಾವಣಾ ಆಯೋಗ ನೀಡಿದ ವೋಟರ್ಸ್ ಐ.ಡಿ, ಚಾಲನಾ ಪರವಾನಗಿ ನಂಬರ್(ಡ್ರೈವಿಂಗ್ ಲೈಸನ್ಸ್) ಲಿಂಕ್ ನೀಡಿದ ವೋಟರ್ಸ್ ಐ.ಡಿ, ಚಾಲನಾ ಪರವಾನಗಿ ನಂಬರ್(ಡ್ರೈವಿಂಗ್ ಲೈಸನ್ಸ್) ಲಿಂಕ್ ಮಾಡಿ ವಿದ್ಯಾರ್ಥಿಗಳ ಐ.ಡಿ ಸೃಷ್ಟಿಸಲಾಗುತ್ತದೆ.

ವಿದ್ಯಾರ್ಥಿಗಳ ಹೆಸರು ನೋಂದಾಯಿಸಲು ಶಿಕ್ಷಣ ಇಲಾಖೆ ಆದೇಶ ಹೊರಡಿ ಸಿದ್ದು, ಮುಖ್ಯ ಶಿಕ್ಷಕರು ಪೋಷಕರ ಸಭೆ ಕರೆದು ಅವರ ಒಪ್ಪಿಗೆ ಪಡೆಯುವಂತೆ ಸೂಚಿಸಿದೆ. ಈಗಾಗಲೇ ರಾಜ್ಯದ ಎಲ್ಲ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳ ಪೋಷಕರ ಒಪ್ಪಿಗೆ ಪಡೆಯುವ ಪ್ರಕ್ರಿಯೆ ಆರಂಭಗೊಂಡಿದೆ.

ಏನಿದು ಅಪಾ‌ರ್?
'ಅಪಾ‌ರ್' ಎಂದರೆ ಸ್ವಯಂಚಾಲಿತ ಶಾಶ್ವತ ಶೈಕ್ಷಣಿಕ ಖಾತೆ (APAAR-Automatic Permanent Academic Account Registry)

ಆಧಾರ್ ಕಾರ್ಡ್ ಪರಿಕಲ್ಪನೆಯೇ ಇದಕ್ಕೆ ಪ್ರೇರಣೆ. ಆಧಾರ್ ಮಾದರಿಯಲ್ಲಿಯೇ ವಿದ್ಯಾರ್ಥಿಗಳಿಗೂ 12 ಅಂಕಿಗಳ ವಿಶಿಷ್ಟ ಗುರುತಿನ ಗುರುತಿನ ಚೀಟಿ ನೀಡಲಾಗುವುದು. ಇದು ವಿದ್ಯಾರ್ಥಿ ಜೀವಮಾನದ ಗುರುತಿನ ಸಂಖ್ಯೆಯಾಗಿರುತ್ತದೆ.

ವಿದ್ಯಾರ್ಥಿಯ ಶೈಕ್ಷಣಿಕ ವಿವರ ಮತ್ತು ಸಾಧನೆಗಳನ್ನು ಟ್ರ್ಯಾಕ್ ಮಾಡಲು ಮತ್ತು ಒಂದು ಶಾಲೆಯಿಂದ ಮತ್ತೊಂದು ಶಾಲೆಗೆ ವರ್ಗಾವಣೆ ಪ್ರಕ್ರಿಯೆಯನ್ನೂ ಸುಲಭಗೊಳಿಸುತ್ತದೆ .
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕನ್ನಡ ಸಾಹಿತ್ಯ ಪರಿಷತ್ ಸರ್ಜರಿಗೆ ಹಾರ್ಟ್ ಸರ್ಜನ್ ಬೆಳಗಾವಿ ಮಣ್ಣಿನ ಮಗಳು ಡಾ.ವಿಜಯಲಕ್ಷ್ಮೀ ಬಾಳೆಕುಂದ್ರಿ ಸಜ್ಜು ಚುನಾವಣೆ ಸ್ಪರ್ಧೆಗೆ ನಿರ್ಧಾರ | ಗೆದ್ದರೆ ಪ್ರಥಮ ಅಧ್ಯಕ್ಷೆ, ತೋಂಟದಾರ್ಯ ಮಠದ ಜಗದ್ಗುರುಗಳು ಬೆಂಬಲಸುಪ್ರೀಂ ಕೋರ್ಟಿನಲ್ಲಿರುವ ಗಡಿ ವಿವಾದ ಪ್ರಕರಣದ ತ್ವರಿತ ವಿಚಾರಣೆಗೆ ಮಹಾರಾಷ್ಟ್ರ ಸರಕಾರ ಅರ್ಜಿ ಸಲ್ಲಿಸಿರುವ ಕುರಿತು ಪ್ರತಿಕ್ರಿಯಿಸಿದ ಅಶೋಕ ಚಂದರಗಿಅಯೋಧ್ಯೆ ರಾಮಮಂದಿರದ ಮೊದಲ ಸಿಇಒ ಆಗಿ ನಿವೃತ್ತ ಏರ್‌ ಮಾರ್ಷಲ್‌ ಜೀತೇಂದ್ರ ಮಿಶ್ರ ನೇಮಕಸುಪ್ರೀಂ ಕೋರ್ಟಿನಲ್ಲಿರುವ ಗಡಿ ವಿವಾದ ಪ್ರಕರಣದ ತ್ವರಿತ ವಿಚಾರಣೆಗೆ ಮಹಾರಾಷ್ಟ್ರ ಸರಕಾರ ಅರ್ಜಿ ಸಲ್ಲಿಸಿರುವ ಕುರಿತು ಪ್ರತಿಕ್ರಿಯಿಸಿದ ಅಶೋಕ ಚಂದರಗಿ8 ಜನ ಮೊಬೈಲ್ ಕಳ್ಳರನ್ನು ಬಂಧಿಸಿದ ಕಟಕೋಳ ಪೊಲೀಸರು200 ವರ್ಷಗಳ ಬಳಿಕ ಕುಟುಂಬದಲ್ಲಿ ಹೆಣ್ಣು ಮಗುವಿನ ಜನನ : ರಥದಲ್ಲಿ ಕುಳ್ಳಿರಿಸಿ ಮೆರವಣಿಗೆ ಮೂಲಕ ಮನೆಗೆ ಕರೆತಂದ ಕುಟುಂಬ !ನಕಲಿ ದಾಖಲೆ ಸೃಷ್ಟಿಸಿ ಜಮೀನು ಮಾರಾಟ ಮಾಡಿದ್ದ ಅಜ್ಜಿಯ ಬಂಧನಪುತ್ರಿಯರ ಶಿಕ್ಷಣಕ್ಕಾಗಿ ಸೀರೆಯುಟ್ಟು ಬರಿಗಾಲಿನಲ್ಲಿ ಓಡಿ ʼಮ್ಯಾರಥಾನ್‌ʼನಲ್ಲಿ ಮೊದಲ ಸ್ಥಾನ ಪಡೆದ 47 ವರ್ಷದ ತಾಯಿ !ರಷ್ಯಾ ಅತಿಹೆಚ್ಚು ತೈಲ ಉತ್ಪಾದನೆ ಮಾಡುತ್ತಿದ್ರೂ ಈಗ ಅದಕ್ಕೇ ದಾಖಲೆ ಪ್ರಮಾಣದಲ್ಲಿ ಪೆಟ್ರೋಲ್ ಪೂರೈಸುತ್ತಿರುವ ಭಾರತ ! ಕಾರಣ ?ವೈಶ್ಯ ಸಮಾಜದ ಏಕತೆ, ಪ್ರಗತಿಗೆ ಸೆ.6ರಂದು ಬೆಳಗಾವಿಯಲ್ಲಿ ವೈಶ್ಯ ಸಮ್ಮೇಳನ