Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಅಪ್ರಾಪ್ತೆ ಮೇಲೆ ಅತ್ಯಾಚಾರ : ಆರೋಪಿಗೆ 20 ವರ್ಷ ಜೈಲು ಶಿಕ್ಷೆ

ಬೆಳಗಾವಿ: ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ ಪೋಕ್ಸೋ ನ್ಯಾಯಾಲಯ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು 10 ಸಾವಿರ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ.

ಸವದತ್ತಿ ಪೊಲೀಸ್ ಠಾಣೆಯಲ್ಲಿ 2021 ರಲ್ಲಿ ಅಪ್ರಾಪ್ತೆಯ ಅಪಹರಣ ಮತ್ತು ಅತ್ಯಾಚಾರದ ಬಗ್ಗೆ ಬಾಲಕಿಯ ತಂದೆ ನೀಡಿದ್ದ ದೂರಿನಂತೆ ಪ್ರಕರಣ ದಾಖಲು ಮಾಡಿಕೊಂಡಿದ್ದ ಸವದತ್ತಿ ಪೊಲೀಸರು, ಮಂಗಳೂರಿನಲ್ಲಿ ಬಾಲಕಿಯನ್ನು ಪತ್ತೆ ಹಚ್ಚಿ ಪೋಷಕರಿಗೆ ಒಪ್ಪಿಸಿದ್ದರು.

ಪ್ರಕರಣದ ಆರೋಪಿ ಸವದತ್ತಿ ತಾಲೂಕು ಉಗರಗೋಳದ ಹುಲಿಗೆಪ್ಪ ಶಿವಲಿಂಗಪ್ಪ ವಡ್ಡರ ವಿರುದ್ಧ ಪೋಕ್ಸೋ ಕಾಯ್ದೆಯಡಿ ದೂರು ದಾಖಲಾಗಿದ್ದು ಅಂದು ತನಿಖಾಧಿಕಾರಿಯಾಗಿದ್ದ ಮಂಜುನಾಥ ನಡುವಿನಮನಿ ಅವರು ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಸಿ.ಎಂ. ಪುಷ್ಪಲತಾ ಅವರು ಇದೀಗ ಹುಲಿಗಪ್ಪ ವಡ್ಡರ್ ನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ 10,000 ರೂ.ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಅಪ್ರಾಪ್ತೆಗೆ ಒಂದು ಲಕ್ಷ ರೂ. ಪರಿಹಾರ ನೀಡಲು ನ್ಯಾಯಾಲಯ ಸೂಚಿಸಿದೆ. ಸರ್ಕಾರದ ಪರವಾಗಿ ವಿಶೇಷ ಅಭಿಯೋಜಕ ಎಲ್.ವಿ. ಪಾಟೀಲ ವಾದ ಮಂಡಿಸಿದ್ದರು.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಉಪಹಾರಕೂಟದಲ್ಲೇ ರಾಜೀನಾಮೆ ಸುಳಿವು ನೀಡಿದ ಸಿಎಂ : ಸಹೋದ್ಯೋಗಿಗಳ ಸಮ್ಮುಖದಲ್ಲೇ ರಾಜೀನಾಮೆ  ಘೋಷಿಸಿದ ಸಿದ್ದರಾಮಯ್ಯ..!ಬೆಳಗಾವಿಯಲ್ಲಿ ಯುವಕನನ್ನು ಕೊಚ್ಚಿ ಕೊಲೆ ...ರಾಜ್ಯಪಾಲರ ಪತ್ನಿಯ ಆರೋಗ್ಯದಲ್ಲಿ ಏರುಪೇರು :  ದಿಢೀರ್ ಇಂದೋರ್ ಗೆ ತೆರಳಿದ ಗೆಹಲೋಟ್ -ಸಿಎಂ ರಾಜೀನಾಮೆ ಪತ್ರ ಯಾರಿಗೆ ಸಲ್ಲಿಸುತ್ತಾರೆ ?ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆ