Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಒಲಿಂಪಿಕ್ಸ್ 52 ವರ್ಷಗಳ ಬಳಿಕ ಸತತ ಕಂಚು; ಶ್ರೀಜೇಶ್ ಗೆಲುವಿನ ವಿದಾಯ

ಪ್ಯಾರಿಸ್‌: ಭಾರತ ಪುರುಷರ ತಂಡ ಒಲಿಂಪಿಕ್ ಕ್ರೀಡೆಗಳ

ಹಾಕಿಯಲ್ಲಿ ಸತತ ಎರಡನೇ ಬಾರಿ ಕಂಚಿನ ಪದಕ ಗೆದ್ದುಕೊಂಡಿತು.

ಭಾರತ 41 ವರ್ಷಗಳ ನಂತರ, 2020ರ ಟೋಕಿಯೊ ಕ್ರೀಡೆಗಳಲ್ಲಿ ಕಂಚಿನ ಪದಕ ಗಳಿಸಿತ್ತು. ಕ್ರೀಡೆಗಳಿಗೆ ಹೋಗುವ ಮೊದಲು ಅಂಥ ಲಯದಲ್ಲಿ ಇಲ್ಲದಿದ್ದರೂ ಪ್ಯಾರಿಸ್‌ನಲ್ಲಿ ನಿರೀಕ್ಷೆಗೆ ತಕ್ಕಂತೆ ಆಡಿತು.

ಭಾರತ 52 ವರ್ಷಗಳ ನಂತರ ಸತತ ಕ್ರೀಡೆಗಳಲ್ಲಿ ಕಂಚಿನ ಪದಕ ಪಡೆದಿದೆ. ಈ ಹಿಂದೆ 1968ರ ಮೆಕ್ಸಿಕೊ ಮತ್ತು 1972ರ ಮ್ಯೂನಿಕ್ ಕ್ರೀಡೆಗಳಲ್ಲಿ ಕಂಚಿನ ಪದಕಗಳನ್ನು ಗೆದ್ದುಕೊಂಡಿತ್ತು.

ಗುರುವಾರ ಮೂರನೇ ಸ್ಥಾನಕ್ಕಾಗಿ ನಡೆದ 'ಪ್ಲೇ ಆಫ್' ಪಂದ್ಯದಲ್ಲಿ ಸ್ಪೇನ್ ತಂಡವನ್ನು 2-1 ಗೋಲುಗಳಿಂದ ಸೋಲಿಸಿದ ಹರ್ಮನ್‌ಪ್ರೀತ್ ಬಳಗ, ಗೋಲ್‌ಕೀಪರ್ ಪಿ.ಆರ್.ಶ್ರೀಜೇಶ್ ಅವರಿಗೆ ಅರ್ಹ ರೀತಿಯಲ್ಲೇ ವಿದಾಯದ ಉಡುಗೋರೆ ನೀಡಿತು.

ಸ್ಕೋರ್ ಸಮ ಮಾಡಲು ಸ್ಪೇನ್ ತಂಡ ಕೊನೆಯ ಕೆಲವು ನಿಮಿಷ ಭಾರತದ ಗೋಲಿನ ಆವರಣದಲ್ಲಿ ಸತತ ದಾಳಿಗಳನ್ನು ನಡೆಸಿ ಒತ್ತಡ ಹೇರಿತು. ಪೆನಾಲ್ಟಿ ಕಾರ್ನ‌್ರಗಳನ್ನೂ ಪಡೆಯಿತು. ಆದರೆ ಭಾರತದ ರಕ್ಷಣಾ ಪಡೆ ಕಂಗೆಡದೇ ಅವುಗಳನ್ನು ತಡೆದು ಆತಂಕ ನಿವಾರಿಸಿತು.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಪಾಲರ ಪತ್ನಿಯ ಆರೋಗ್ಯದಲ್ಲಿ ಏರುಪೇರು :  ದಿಢೀರ್ ಇಂದೋರ್ ಗೆ ತೆರಳಿದ ಗೆಹಲೋಟ್ -ಸಿಎಂ ರಾಜೀನಾಮೆ ಪತ್ರ ಯಾರಿಗೆ ಸಲ್ಲಿಸುತ್ತಾರೆ ?ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರು