Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿ ಜನತೆಗೆ ಮತ್ತೊಂದು ಬಿಗ್ ಶಾಕ್

ಬೆಳಗಾವಿ: ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪಟ್ಟವನ್ನು ದಶಕಗಳ ಹಿಂದೆಯೇ ಪಡೆಯಬೇಕಾಗಿದ್ದ ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸುವ ವಿಮಾನಗಳು ಒಂದೊಂದೇ ಕಡಿಮೆ ಆಗುತ್ತಿರುವುದು ಇದೀಗ ಬೆಳಗಾವಿ ಜನತೆಯ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಉಡಾನ್ ಯೋಜನೆಗೆ ಬೆಳಗಾವಿ ವಿಮಾನ ನಿಲ್ದಾಣ ಸೇರ್ಪಡೆಗೊಂಡ ನಂತರ ಇಲ್ಲಿಂದ ದೇಶದ ಪ್ರಮುಖ ನಗರಗಳಿಗೆ ನೇರ ವಿಮಾನಯಾನ ಸೌಲಭ್ಯ ವನ್ನು ಹಲವು ವಿಮಾನಯಾನ ಸಂಸ್ಥೆಗಳು ಆರಂಭಿಸಿದ್ದವು ಆದರೆ ಈಗ ಮತ್ತಷ್ಟು ನಗರಗಳಿಗೆ ಬೇಡಿಕೆ ಇದ್ದರೂ ಸಹ ವಿಮಾನಯಾನ ಸಂಸ್ಥೆಗಳು ಒಂದೊಂದೇ ವಿಮಾನಗಳನ್ನು ಸ್ಥಗಿತಗೊಳಿಸುತ್ತಿರುವುದು ಬೆಳಗಾವಿಯ ಉದ್ಯಮಿಗಳು ಮತ್ತು ಜನತೆಯ ಬೇಸರಕ್ಕೆ ಕಾರಣವಾಗಿದೆ.

ದೇಶದ ಪ್ರತಿಷ್ಠಿತ ಇಂಡಿಗೋ ಸಂಸ್ಥೆ ಬೆಳಗಾವಿ ಮತ್ತು ಬೆಂಗಳೂರು ನಡುವಿನ ಬೆಳಗಿನ ಹೊತ್ತಿನ ವಿಮಾನಯಾನ ಸ್ಥಗಿತಗೊಳಿಸಿದೆ. ಈ ಅಘಾತದಿಂದ ಬೆಳಗಾವಿ ಜನತೆ ಹೊರಬರುವ ಮುನ್ನವೇ ಮತ್ತೊಂದು ನಿರಾಶೆಯ ಸುದ್ದಿ ಇದೀಗ ಬರ ಸಿಡಿಲಿನಂತೆ ಬಂದರೆಗಿದೆ.
ಈಗ ಸ್ಟಾರ್ ಏರ್ ಲೈನ್ಸ್‌ನ ಮತ್ತೊಂದು ವಿಮಾನ ಡಿ.6 ರಿಂದ ತನ್ನ ಹಾರಾಟವನ್ನು ಸ್ಥಗಿತಗೊಳಿಸಲಿದೆ. ಬೆಳಗಾವಿ-ತಿರುಪತಿ ನಡುವೆ ವಾರದಲ್ಲಿ ಮೂರು ದಿನಗಳ ಕಾಲ(ಭಾನುವಾರ, ಮಂಗಳವಾರ ಮತ್ತು ಗುರುವಾರ) ಸಂಚರಿಸುತ್ತಿದ್ದ ವಿಮಾನಕ್ಕೆ 2025ರ ಮಾರ್ಚ್ 27ರ ವರೆಗೆ ಸರಕಾರದಿಂದ ಅನುಮತಿ ನೀಡಲಾಗಿತ್ತು.
ಆದರೆ, ಸಂಸ್ಥೆ ಮೂರು ತಿಂಗಳ ಮುಂಚಿತವಾಗಿಯೇ ತನ್ನ ಸಂಚಾರ ನಿಲ್ಲಿಸುತ್ತಿದ್ದು, ಈ ಮಾರ್ಗದಲ್ಲಿನ ಪ್ರಯಾಣಿಕರಿಗೆ ಡಿ.6ರ ನಂತರದ ಬುಕ್ಕಿಂಗ್ ರದ್ದು ಮಾಡಿದೆ. ಇದರಿಂದ ಮತ್ತೊಂದು ಶಾಕ್ ಎದುರಾಗಿದೆ. ಬೆಳಗಾವಿಯಿಂದ ಮಧ್ಯಾಹ್ನ 1.30ಕ್ಕೆ 2.45 ತಿರುಪತಿ ತಲುಪುತ್ತಿರುವ ವಿಮಾನ, ಮಧ್ಯಾಹ್ನ 3.15ಕ್ಕೆ ಅಲ್ಲಿಂದ ಹೊರಟು ಸಂಜೆ 4.30ಕ್ಕೆ ಬೆಳಗಾವಿ ತಲುಪುತ್ತಿದೆ. ಇನ್ನು ಮುಂದೆ ಬೆಳಗಾವಿ ಸೇರಿದಂತೆ ಸುತ್ತಮುತ್ತಲ ಜಿಲ್ಲೆಗಳ ಭಕ್ತರು ದೇಶದ ಅತ್ಯಂತ ಶ್ರೀಮಂತ ದೇವಸ್ಥಾನಗಳಲ್ಲಿ ಒಂದಾಗಿರುವ ತಿರುಪತಿಗೆ ತೆರಳಲು ಪ್ರಯಾಸ ಪಡಬೇಕಾದ ಸಂದಿಗ್ಧತೆ ಎದುರಾಗಿದೆ. ಈ ನಿಟ್ಟಿನಲ್ಲಿ ಬೆಳಗಾವಿ ಸಂಸದ ಜಗದೀಶ ಶೆಟ್ಟರ್ ಹಾಗೂ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಗಮನಹರಿಸಲಿ ಎನ್ನುವುದು ಬೆಳಗಾವಿ ಜನತೆಯ ಆಗ್ರಹವಾಗಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕನ್ನಡ ಸಾಹಿತ್ಯ ಪರಿಷತ್ ಸರ್ಜರಿಗೆ ಹಾರ್ಟ್ ಸರ್ಜನ್ ಬೆಳಗಾವಿ ಮಣ್ಣಿನ ಮಗಳು ಡಾ.ವಿಜಯಲಕ್ಷ್ಮೀ ಬಾಳೆಕುಂದ್ರಿ ಸಜ್ಜು ಚುನಾವಣೆ ಸ್ಪರ್ಧೆಗೆ ನಿರ್ಧಾರ | ಗೆದ್ದರೆ ಪ್ರಥಮ ಅಧ್ಯಕ್ಷೆ, ತೋಂಟದಾರ್ಯ ಮಠದ ಜಗದ್ಗುರುಗಳು ಬೆಂಬಲಸುಪ್ರೀಂ ಕೋರ್ಟಿನಲ್ಲಿರುವ ಗಡಿ ವಿವಾದ ಪ್ರಕರಣದ ತ್ವರಿತ ವಿಚಾರಣೆಗೆ ಮಹಾರಾಷ್ಟ್ರ ಸರಕಾರ ಅರ್ಜಿ ಸಲ್ಲಿಸಿರುವ ಕುರಿತು ಪ್ರತಿಕ್ರಿಯಿಸಿದ ಅಶೋಕ ಚಂದರಗಿಅಯೋಧ್ಯೆ ರಾಮಮಂದಿರದ ಮೊದಲ ಸಿಇಒ ಆಗಿ ನಿವೃತ್ತ ಏರ್‌ ಮಾರ್ಷಲ್‌ ಜೀತೇಂದ್ರ ಮಿಶ್ರ ನೇಮಕಸುಪ್ರೀಂ ಕೋರ್ಟಿನಲ್ಲಿರುವ ಗಡಿ ವಿವಾದ ಪ್ರಕರಣದ ತ್ವರಿತ ವಿಚಾರಣೆಗೆ ಮಹಾರಾಷ್ಟ್ರ ಸರಕಾರ ಅರ್ಜಿ ಸಲ್ಲಿಸಿರುವ ಕುರಿತು ಪ್ರತಿಕ್ರಿಯಿಸಿದ ಅಶೋಕ ಚಂದರಗಿ8 ಜನ ಮೊಬೈಲ್ ಕಳ್ಳರನ್ನು ಬಂಧಿಸಿದ ಕಟಕೋಳ ಪೊಲೀಸರು200 ವರ್ಷಗಳ ಬಳಿಕ ಕುಟುಂಬದಲ್ಲಿ ಹೆಣ್ಣು ಮಗುವಿನ ಜನನ : ರಥದಲ್ಲಿ ಕುಳ್ಳಿರಿಸಿ ಮೆರವಣಿಗೆ ಮೂಲಕ ಮನೆಗೆ ಕರೆತಂದ ಕುಟುಂಬ !ನಕಲಿ ದಾಖಲೆ ಸೃಷ್ಟಿಸಿ ಜಮೀನು ಮಾರಾಟ ಮಾಡಿದ್ದ ಅಜ್ಜಿಯ ಬಂಧನಪುತ್ರಿಯರ ಶಿಕ್ಷಣಕ್ಕಾಗಿ ಸೀರೆಯುಟ್ಟು ಬರಿಗಾಲಿನಲ್ಲಿ ಓಡಿ ʼಮ್ಯಾರಥಾನ್‌ʼನಲ್ಲಿ ಮೊದಲ ಸ್ಥಾನ ಪಡೆದ 47 ವರ್ಷದ ತಾಯಿ !ರಷ್ಯಾ ಅತಿಹೆಚ್ಚು ತೈಲ ಉತ್ಪಾದನೆ ಮಾಡುತ್ತಿದ್ರೂ ಈಗ ಅದಕ್ಕೇ ದಾಖಲೆ ಪ್ರಮಾಣದಲ್ಲಿ ಪೆಟ್ರೋಲ್ ಪೂರೈಸುತ್ತಿರುವ ಭಾರತ ! ಕಾರಣ ?ವೈಶ್ಯ ಸಮಾಜದ ಏಕತೆ, ಪ್ರಗತಿಗೆ ಸೆ.6ರಂದು ಬೆಳಗಾವಿಯಲ್ಲಿ ವೈಶ್ಯ ಸಮ್ಮೇಳನ