Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕರುನಾಡಿಗೆ ಮತ್ತೊಂದು ವಂದೇ ಭಾರತ ರೈಲು

 

ದೆಹಲಿ :
ಕೇಂದ್ರದ ನರೇಂದ್ರ ಮೋದಿ ಸರಕಾರದ ಮಹತ್ವದ ಒಂದೇ ಭಾರತರ ಎಂದು ಕರ್ನಾಟಕದಲ್ಲಿ ಇದೀಗ ಮೂರು ಕಡೆ ಸಂಚರಿಸುತ್ತಿವೆ. ಮುಂದಿನ ದಿನಗಳಲ್ಲಿ ಇವುಗಳ ಸಂಖ್ಯೆ ಇನ್ನಷ್ಟು ಹೆಚ್ಚುವ ಸಾಧ್ಯತೆ ಇದೆ. ನೆರೆಯ ಗೋವಾ ರಾಜ್ಯಕ್ಕೆ ಕಡಲ ನಗರಿ ಮಂಗಳೂರಿನಿಂದ ವಂದೇ ಭಾರತ ರೈಲು ಸಂಚರಿಸಲಿದೆ. ಇದರಿಂದ ಕರಾವಳಿ ಭಾಗದ ಜನತೆಗೆ ಗೋವಾ ತಲುಪಲು ಹೆಚ್ಚಿನ ಅನುಕೂಲ ಆಗಲಿದೆ.

ಅಕ್ಟೋಬರ್‌ ಅಂತ್ಯದೊಳಗೆ ಮಂಗಳೂರಿನಿಂದ ಗೋವಾಗೆ ಹೊಸ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲು ಆರಂಭಿಸುವುದಾಗಿ ರೈಲ್ವೆ ಸಚಿವರು ಭರವಸೆ ನೀಡಿದ್ದಾರೆ ಎಂದು ಸಂಸದ ನಳಿನ್‌ ಕುಮಾರ್‌ ಕಟೀಲು ತಿಳಿಸಿದ್ದಾರೆ.

ಮಂಗಳೂರಿನಿಂದ ಗೋವಾಗೆ ಹೊಸ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲು ಸೇವೆ ಆರಂಭಿಸುವಂತೆ ಹಾಗೂ ರೈಲ್ವೆ ಇಲಾಖೆಗೆ ಸಂಬಂಧಿಸಿದ ನಾನಾ ಬೇಡಿಕೆಗಳನ್ನು ಒದಗಿಸುವಂತೆ ಶುಕ್ರವಾರ ಹೊಸದಿಲ್ಲಿಯಲ್ಲಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದೇನೆ ಎಂದು ಸಂಸದರು ಹೇಳಿದರು.

ಬೆಂಗಳೂರು ಕಣ್ಣೂರು ರೈಲನ್ನು ಕೊಚ್ಚಿನ್‌ವರೆಗೆ ವಿಸ್ತರಿಸಬೇಕೆಂಬ ಕೇರಳ ರಾಜ್ಯದ ಮನವಿಯನ್ನು ಯಾವುದೇ ಕಾರಣಕ್ಕೂ ಪುರಸ್ಕರಿಸದಂತೆ ಸಚಿವರನ್ನು ಒತ್ತಾಯಿಸಿದ್ದು, ಇದಕ್ಕೆ ಸ್ಪಂದಿಸಿರುವ ಸಚಿವರು ಅಂತಹ ಯಾವುದೇ ಪ್ರಸ್ತಾವನೆಗೆ ಒಪ್ಪಿಗೆ ನೀಡುವುದಿಲ್ಲವೆಂದು ತಿಳಿಸಿದ್ದಾರೆ.

ಮಂಗಳೂರು ಸುಬ್ರಹ್ಮಣ್ಯ ರಸ್ತೆಗೆ ಪ್ಯಾಸೆಂಜರ್ ರೈಲು ಪ್ರತಿದಿನ ಮುಂಜಾನೆ ಸುಬ್ರಹ್ಮಣ್ಯ ರಸ್ತೆಯಿಂದ ಹೊರಟು ಮಂಗಳೂರಿಗೆ ಹಾಗೂ ಸಂಜೆ ಮಂಗಳೂರಿನಿಂದ ಸುಬ್ರಹ್ಮಣ್ಯ ರಸ್ತೆಗೆ ಪ್ಯಾಸೆಂಜರ್‌ ರೈಲು ಒದಗಿಸಲು ಒಪ್ಪಿಗೆ ನೀಡಿದ್ದಾರೆ. ರೈಲ್ವೆ ಇಲಾಖೆಯನ್ನು ಕೇರಳ ಹಿಡಿತದಿಂದ ತಪ್ಪಿಸಲು ದಕ್ಷಿಣ ರೈಲ್ವೆಯ ಪಾಲಕ್ಕಾಡು ವಿಭಾಗದಲ್ಲಿರುವ ದಕ್ಷಿಣ ಕನ್ನಡ ಜಿಲ್ಲೆಯ ಭಾಗವನ್ನು ನೈಋುತ್ಯ ರೈಲ್ವೆಯ ಮೈಸೂರು ವಿಭಾಗಕ್ಕೆ ಸೇರಿಸಬೇಕೆಂಬ ಮನವಿಗೆ ಸಚಿವರು, ಈಗಾಗಲೇ ಈ ಕುರಿತು ಅಗತ್ಯ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ದಕ್ಷಿಣ ರೈಲ್ವೆ ಹಾಗೂ ಕೊಂಕಣ ರೈಲ್ವೆಗಳ ವಿಭಾಗಗಳ ನಡುವೆ ಸಂಚರಿಸುವ ರೈಲುಗಳ ಅನಗತ್ಯ ವಿಳಂಬ ನಿವಾರಿಸುವ ಬಗ್ಗೆ ಗಮನ ಸೆಳೆದಾಗ ಈ ಕುರಿತು ಸಂಬಂಧಿಸಿದ ಅಧಿಕಾರಿಗಳಿಗೆ ರೈಲ್ವೆ ಸಚಿವರು ಸೂಚಿಸಿದ್ದಾರೆ ಎಂದು ತಿಳಿಸಿದ್ದಾರೆ.

ರಾಜ್ಯದ ಮೂರನೇ ವಂದೇ ಭಾರತ್‌ ರೈಲು ಸಂಚಾರ ಯಶಸ್ವಿರಾಜ್ಯದ ಮೂರನೇ ವಂದೇ ಭಾರತ್‌ ರೈಲು ಇದೇ ತಿಂಗಳ 24 ರಂದು ಹೈದರಾಬಾದ್‌ನ ಕಾಚಿಗುಡ-ಯಶವಂತಪುರ ನಿಲ್ದಾಣದ ನಡುವೆ ಸಂಚರಿಸಲಿದ್ದು, ಅದರ ಪ್ರಾಯೋಗಿಕ ಸಂಚಾರ ಗುರುವಾರ ನಡೆಯಿತು. ಸರಾಸರಿ 70-80 ಕಿ.ಮೀ. ವೇಗದಲ್ಲಿ ಸಂಚರಿಸಿದ ರೈಲು ನಿರೀಕ್ಷೆಗಿಂತ 40 ನಿಮಿಷ ಮೊದಲೇ ನಿಲ್ದಾಣಗಳನ್ನು ತಲುಪಿತು.ಸೆ. 24ರಂದು ಪ್ರಧಾನಿ ನರೇಂದ್ರ ಮೋದಿ ಅವರು ರೈಲಿಗೆ ಚಾಲನೆ ನೀಡಲಿದ್ದಾರೆ. ಬಹುತೇಕ ಸೆ. 25 ರಿಂದಲೇ ಇದು ಸಾರ್ವಜನಿಕ ಸಂಚಾರಕ್ಕೆ ಮುಕ್ತವಾಗಲಿದೆ. ರೈಲಿನ ವೇಳಾಪಟ್ಟಿ ಹಾಗೂ ಟಿಕೆಟ್‌ ದರವನ್ನು ದಕ್ಷಿಣ ಮಧ್ಯ ರೈಲ್ವೆ ಅಧಿಕೃತವಾಗಿ ಇನ್ನಷ್ಟೇ ಪ್ರಕಟಿಸಬೇಕಿದೆ. ಈ ರೈಲು ಗುರುವಾರ ಬೆಳಗ್ಗೆ 5.30ಕ್ಕೆ ಕಾಚಿಗುಡದಿಂದ ಹೊರಟು ಮಧ್ಯಾಹ್ನ 1.15ಕ್ಕೆ ಬೆಂಗಳೂರಿನ ಯಶವಂತಪುರ ನಿಲ್ದಾಣ ತಲುಪಿತು. ಯಾವುದೇ ನಿಲುಗಡೆ ಇಲ್ಲದೆ ಸಂಚರಿಸಿದ ರೈಲು 40 ನಿಮಿಷ ಮೊದಲೇ ಯಶವಂತಪುರಕ್ಕೆ ಬಂದಿತು. ಇಲ್ಲಿಂದ 2.30ಕ್ಕೆ ವಾಪಸ್‌ ತೆರಳಿದ್ದು, ರಾತ್ರಿ 11 ಗಂಟೆಗೆ ಕಾಚಿಗುಡ ತಲುಪಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಂಭಾವ್ಯ ವೇಳಾಪಟ್ಟಿಪ್ರತಿದಿನ ಬೆಳಗ್ಗೆ 5.30ಕ್ಕೆ ಕಾಚಿಗುಡದಿಂದ ಹೊರಡಲಿದ್ದು, 6.59ಕ್ಕೆ ಮೆಹಬೂಬ್‌ನಗರ, 8.39ಕ್ಕೆ ಕರ್ನೂಲು, 10.54ಕ್ಕೆ ಅನಂತಪುರ, 11.25ಕ್ಕೆ ಧರ್ಮಾವರಂ ರೈಲು ನಿಲ್ದಾಣ ತಲುಪಿ ಯಶವಂತಪುರಕ್ಕೆ 2 ಗಂಟೆಗೆ ತಲುಪಲಿದೆ. 2.45ಕ್ಕೆ ಯಶವಂತಪುರದಿಂದ ಹೊರಟು ಅನಂತಪುರಕ್ಕೆ ಸಂಜೆ 5.40, ಕರ್ನೂಲು ಸಿಟಿಗೆ ರಾತ್ರಿ 7.40, ಮೆಹಬೂಬ್‌ನಗರಕ್ಕೆ ರಾತ್ರಿ 9.39ಕ್ಕೆ ಬಂದು ರಾತ್ರಿ 11 ಗಂಟೆಗೆ ಕಾಚಿಗುಡ ತಲುಪಲಿದೆ ಎಂದು ಸಂಭಾವ್ಯ ಪಟ್ಟಿಯಲ್ಲಿ ತಿಳಿಸಲಾಗಿದೆ. ಒಮ್ಮುಖ ಪ್ರಯಾಣ ಟಿಕೆಟ್‌ ದರ ಎಸಿ ಚೇರ್‌ಕಾರ್‌ನಲ್ಲಿಸುಮಾರು 1,525 ರೂ., ಹಾಗೂ ಎಕ್ಸಿಕ್ಯೂಟಿವ್‌ ಕ್ಲಾಸ್‌ನಲ್ಲಿ3015 ರೂ. ನಿಗದಿಸಬಹುದು. ಪ್ರಯಾಣಿಕರಿಗೆ ಮಧ್ಯಾಹ್ನ ಹಾಗೂ ರಾತ್ರಿಯ ಊಟ ಲಭ್ಯವಿರಲಿದೆ ಎನ್ನಲಾಗಿದೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರುನಾಳೆ ಸಿದ್ದರಾಮಯ್ಯ ರಾಜೀನಾಮೆ ?