Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಅಸ್ಸಾಂ: ಸತತ 2ನೇ ಅವಧಿಗೆ ಮುಖ್ಯಮಂತ್ರಿಯಾಗಿ ಹಿಮಂತ ಬಿಸ್ವಾ ಶರ್ಮಾ ಆಯ್ಕೆ

ಗುವಾಹಟಿ: ಅಸ್ಸಾಂ ವಿಧಾನಸಭೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟದ ನಾಯಕರಾಗಿ ಹಿಮಂತ ಬಿಸ್ವಾ ಶರ್ಮಾ ಭಾನುವಾರ ಆಯ್ಕೆಯಾಗಿದ್ದಾರೆ.

ಇದರೊಂದಿಗೆ ಸತತ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಲಿದ್ದಾರೆ.

ಈ ಕುರಿತು ಕೇಂದ್ರ ಸಚಿವ ಜೆ.ಪಿ. ನಡ್ಡಾ ಮಾಹಿತಿ ನೀಡಿದ್ದು, 'ಬಿಜೆಪಿಯ ಎಂಟು ಶಾಸಕರು ಶರ್ಮಾ ಅವರನ್ನು ನಾಯಕರನ್ನಾಗಿ ಪ್ರತಿಪಾದಿಸಿದ್ದಾರೆ' ಎಂದು ತಿಳಿಸಿದ್ದಾರೆ.

ಇದನ್ನೂ ಮುನ್ನ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲೂ ಶರ್ಮಾ ಅವರನ್ನು ನಾಯಕರನ್ನಾಗಿ ಆರಿಸಲಾಯಿತು. ಜೆ.ಪಿ. ನಡ್ಡಾ ಹರಿಯಾಣ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಹಾಗೂ ಕೇಂದ್ರ ವೀಕ್ಷಕರು ಸಭೆಯಲ್ಲಿ ಹಾಜರಿದ್ದರು.

ಬಿಜೆಪಿ ಮೈತ್ರಿ ಪಕ್ಷಗಳಾದ ಅಸ್ಸಾಂ ಗಣ ಪರಿಷದ್ (ಎಜಿಪಿ) ಹಾಗೂ ಬೋಡೋಲ್ಯಾಂಡ್ ಪೀಪಲ್ಸ್ ಫ್ರಂಟ್ (ಬಿಪಿಎಫ್) ಸಹ ಹಿಮಂತ ಬಿಸ್ವಾ ಶರ್ಮಾ ಅವರ ನಾಮನಿರ್ದೇಶನವನ್ನು ಬೆಂಬಲಿಸಿದೆ. ಇದರಿಂದ ಸರ್ವಾನುಮತದಿಂದ ನಾಯಕರಾಗಿ ಆಯ್ಕೆಯಾಗಿದ್ದಾರೆ.

ನೂತನ ಸರ್ಕಾರದ ಹಕ್ಕು ಮಂಡನೆ ಹಾಗೂ ಪ್ರಮಾಣವಚನಕ್ಕೆ ಸಂಬಂಧಿಸಿದಂತೆ ಭಾನುವಾರವೇ ಲೋಕಭನವದಲ್ಲಿ ರಾಜ್ಯಪಾಲ ಲಕ್ಷ್ಮಣ್ ಪ್ರಸಾದ್‌ ಆಚಾರ್ಯ ಅವರನ್ನು ಭೇಟಿ ಮಾಡಿ ಚರ್ಚಿಸಲಿದ್ದಾರೆ.

ಮೇ 12ರಂದು ಪ್ರಮಾಣವಚನ ಕಾರ್ಯಕ್ರಮ ನಡೆಯುವ ಸಾಧ್ಯತೆ ಇದೆ.

ಇತ್ತೀಚೆಗೆ ನಡೆದ ಅಸ್ಸಾಂ ವಿಧಾನಸಭೆ ಚುನಾವಣೆಯಲ್ಲಿ ಮೂರನೇ ಎರಡರಷ್ಟು ಬಹುಮತದೊಂದಿಗೆ ಬಿಜೆಪಿ ನೇತೃತ್ವದ ಎನ್‌ಡಿಎ ಸತತ ಮೂರನೇ ಸಲ ಗೆಲುವು ದಾಖಲಿಸಿತ್ತು. 126 ಸದಸ್ಯ ಬಲದ ವಿಧಾನಸಭೆಯಲ್ಲಿ ಬಿಜೆಪಿ 82, ಮಿತ್ರಪಕ್ಷಗಳಾದ ಎಜಿಪಿ ಹಾಗೂ ಬಿಪಿಎಫ್ ತಲಾ 10 ಸ್ಥಾನಗಳಲ್ಲಿ ಜಯಿಸಿತ್ತು.

Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರುನಾಳೆ ಸಿದ್ದರಾಮಯ್ಯ ರಾಜೀನಾಮೆ ?