Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಸಮೃದ್ಧ ವಿಕಲಚೇತನರ ಸಂಸ್ಥೆಗೆ ಅಗತ್ಯ ಸಾಮಗ್ರಿ ದೇಣಿಗೆ ನೀಡಿದ ಪ್ರಯತ್ನ ಸಂಘಟನೆ

ಬೆಳಗಾವಿ : ಪ್ರಯತ್ನ ಸಂಸ್ಥೆಯ ವತಿಯಿಂದ ಸಮೃದ್ಧ ವಿಕಲಚೇತನರ ಸಂಸ್ಥೆಗೆ ಆಹಾರ ಸಾಮಗ್ರಿಗಳನ್ನು ದೇಣಿಗೆಯಾಗಿ ನೀಡಲಾಯಿತು.

ಬುಧವಾರ ಸಂಸ್ಥೆಗೆ ಭೇಟಿ ನೀಡಿದ ಪ್ರಯತ್ನ ಸಂಘಟನೆಯ ಅಧ್ಯಕ್ಷೆ ಶಾಂತಾ ಆಚಾರ್ಯ ಮತ್ತು ಸದಸ್ಯರು ಸಮೃದ್ಧ ವಿಕಲಚೇತನರ ಸಂಸ್ಥೆಗೆ ಭೇಟಿ ನೀಡಿ ಅಲ್ಲಿನ ಮಕ್ಕಳಿಗಾಗಿ ವಿವಿಧ ಸಾಮಗ್ರಿಗಳನ್ನು ನೀಡಿದರು. ಸಮೃದ್ಧ ಸಂಸ್ಥೆಯ ಆಜೀವ ಸದಸ್ಯ ರಮೇಶ ಜಂಗಲ್ ಈ ವೇಳೆ ಮಾತನಾಡಿ, ಪ್ರಯತ್ನ ಸಂಸ್ಥೆಯ ಸಾಮಾಜಿಕ ಕಾರ್ಯಗಳನ್ನು ಶ್ಲಾಘಿಸಿದರು. ಸಂಸ್ಥೆಗೆ ದೇಣಿಗೆ ನೀಡಿದ್ದಕ್ಕಾಗಿ ಪದಾಧಿಕಾರಿಗಳಿಗೆ ಧನ್ಯವಾದ ಸಲ್ಲಿಸಿದರು.
ಶಾಂತಾ ಆಚಾರ್ಯ ಮಾತನಾಡಿ, ಕಳೆದ 15 ವರ್ಷಗಳಿಂದ ಸಂಘಟನೆಯ ವತಿಯಿಂದ ಅಗತ್ಯವುಳ್ಳವರಿಗೆ ವಿವಿಧ ರೀತಿಯ ನೆರವು ನೀಡಲಾಗುತ್ತಿದೆ. ಇಲ್ಲಿ ಸ್ವತಃ ವಿಕಲಚೇತನರಾಗಿರುವವರೇ ಬಹಳ ಶ್ರಮಪಟ್ಟು ಸಂಸ್ಥೆ ನಡೆಸುತ್ತಿದ್ದು, ಸಂಸ್ಥೆಯ ಅಗತ್ಯತೆ ತಿಳಿದುಕೊಂಡು ಸಾಮಗ್ರಿ ನೀಡಲಾಗಿದೆ. ಸಂಸ್ಥೆಯ ಮಕ್ಕಳ ಭವಿಷ್ಯ ಉಜ್ವಲವಾಗಲಿ. ಸಮಾಜದ ಇನ್ನಿತರ ಸಂಘಟನೆಗಳೂ ನೆರವಿಗೆ ಮುಂದೆ ಬರಲಿ ಎಂದು ಆಶಿಸಿದರು.

ಸಮೃದ್ಧ ಅಂಗವಿಕಲರ ಸಂಸ್ಥೆಯ ಅಧ್ಯಕ್ಷರಾದ ಶಿವನಗೌಡ ಪಾಟೀಲ್, ಕಾರ್ಯದರ್ಶಿ ಪ್ರಶಾಂತ್ ಬೋಧದಾರ್, ಸಂಸ್ಥೆಯ ಸದಸ್ಯರು ಹಾಗೂ ವಿದ್ಯಾರ್ಥಿಗಳು, ಪ್ರಯತ್ನ ಸಂಸ್ಥೆಯ ಕಾರ್ಯದರ್ಶಿ ಗೌರಿ ಸರ್ನೋಬತ್, ಸಂಸ್ಥೆಯ ಸದಸ್ಯರಾದ ವೆಂಕಟೇಶ ಸರ್ನೋಬತ್, ವೀಣಾ ಕುಲಕರ್ಣಿ, ಸಂಗೀತಾ ಪಾಟೀಲ, ವರದಾ ಭಟ್, ಶ್ವೇತಾ ಬಿಜಾಪುರೆ ಮೊದಲಾದವರು ಇದ್ದರು.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರುನಾಳೆ ಸಿದ್ದರಾಮಯ್ಯ ರಾಜೀನಾಮೆ ?