Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಅಯೋಧ್ಯೆ ರಾಮ ಮಂದಿರ: ಒಂದೇ ದಿನದಲ್ಲಿ ₹3.17 ಕೋಟಿ ದೇಣಿಗೆ ಸಂಗ್ರಹ

 

ಅಯೋಧ್ಯೆ : ರಾಮಮಂದಿರಕ್ಕೆ ಅಪಾರ ಸಂಖ್ಯೆಯಲ್ಲಿ ಭಕ್ತರು ಭೇಟಿ ನೀಡುತ್ತಿದ್ದು, ಪ್ರಾಣ ಪ್ರತಿಷ್ಠಾಪನೆಯಾದ ಮರುದಿನ ಒಂದೇ ದಿನದಲ್ಲಿ ₹3.17 ಕೋಟಿ ದೇಣಿಗೆ ಸಂಗ್ರಹವಾಗಿದೆ. ಬುಧವಾರ 2.5 ಲಕ್ಷ ಜನ ಬಾಲರಾಮನ ದರ್ಶನ ಪಡೆದಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ರಾಜ್ಯ ಸರ್ಕಾರ ಹೊರಡಿಸಿದ ಪತ್ರಿಕಾ ಹೇಳಿಕೆಯಲ್ಲಿ ಜಿಲ್ಲಾಧಿಕಾರಿ ನಿತೀಶ್ ಕುಮಾರ್ ಅವರು, ಪ್ರಾಣ ಪ್ರತಿಷ್ಠಾಪನೆಯಾದ ನಂತರದ ಎರಡನೇ ದಿನವಾದ ಬುಧವಾರ ರಾತ್ರಿ 10 ಗಂಟೆಯವರೆಗೆ 2.5 ಲಕ್ಷಕ್ಕೂ ಹೆಚ್ಚು ಭಕ್ತರು ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ಮೊದಲ ದಿನವೇ 5 ಲಕ್ಷಕ್ಕೂ ಹೆಚ್ಚು ಜನರು ದೇವಸ್ಥಾನಕ್ಕೆ ಭೇಟಿ ನೀಡಿದ್ದು, ಅಧಿಕಾರಿಗಳಿಗೆ ಸವಾಲಾಗಿ ಪರಿಣಮಿಸಿದೆ ಎಂದರು.

ದೇವಾಲಯದಲ್ಲಿ ತೆರೆಯಲಾದ 10 ಕೌಂಟರ್‌ಗಳಲ್ಲಿ ಮತ್ತು ಆನ್‌ಲೈನ್ ಮೂಲಕ ಭಕ್ತರು ಪ್ರಾಣ ಪ್ರತಿಷ್ಠಾಪನೆಯಾದ ಮರುದಿನ ಒಂದೇ ದಿನದಲ್ಲಿ ಒಟ್ಟು ₹3.17 ಕೋಟಿ ದೇಣಿಗೆ ನೀಡಿದ್ದಾರೆ ಎಂದು ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಟ್ರಸ್ಟಿ ಅನಿಲ್ ಮಿಶ್ರಾ ಹೇಳಿದ್ದಾರೆ.

ದರ್ಶನ ಅವಧಿ ವಿಸ್ತರಣೆ :
ಇನ್ನು ಮುಂದೆ ಭಕ್ತರು ಬೆಳಿಗ್ಗೆ 6 ರಿಂದ ರಾತ್ರಿ 10 ರವರೆಗೆ ದೇವಾಲಯಕ್ಕೆ ಭೇಟಿ ನೀಡಿ ಬಾಲರಾಮನ ದರ್ಶನ ಪಡೆಯಬಹುದು ಎಂದು ಟ್ರಸ್ಟ್‌ ಹೇಳಿದೆ. ಈ ಮೊದಲು ಬೆಳಿಗ್ಗೆ 7 ರಿಂದ 11.30 ಮತ್ತು ಮಧ್ಯಾಹ್ನ 2 ರಿಂದ 7 ರವರೆಗೆ ಮಾತ್ರ ದರ್ಶನಕ್ಕೆ ಅವಕಾಶವಿತ್ತು.

ಬಿಗಿ ಭದ್ರತೆ :
ಭಕ್ತಾದಿಗಳಿಗೆ ಭದ್ರತೆ ಮತ್ತು ಅನುಕೂಲಕ್ಕಾಗಿ ಆಡಳಿತ ಮತ್ತು ಪೊಲೀಸರು ಸನ್ನದ್ಧರಾಗಿದ್ದಾರೆ. ದೇವಾಲಯದ ಆವರಣದ ಹೊರಗೆ ರ್‍ಯಾಪಿಡ್‌ ಆಕ್ಷನ್‌ ಫೋರ್ಸ್‌ ಮತ್ತು ಕೇಂದ್ರೀಯ ಮೀಸಲು ಪೊಲೀಸ್ ಪಡೆ ತಂಡಗಳನ್ನು ನಿಯೋಜಿಸಲಾಗಿದ್ದು ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ ಮಾಡಲಾಗಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿಭೋಜಶಾಲಾ–ಕಮಾಲ್ ಮೌಲಾ ಪ್ರಕರಣ: ಶುಕ್ರವಾರದ ನಮಾಜ್‌ಗೆ ಮುಸ್ಲಿಮರಿಗೆ ಪ್ರತ್ಯೇಕ ಸ್ಥಳ ಕಲ್ಪಿಸಲು ಸುಪ್ರೀಂ ಕೋರ್ಟ್ ನಿರ್ದೇಶನ2022ರಲ್ಲಿ ಉಕ್ರೇನ್ ಮೇಲೆ ಅಣ್ವಸ್ತ್ರ ದಾಳಿ ನಡೆಸದಂತೆ ರಷ್ಯಾವನ್ನು ತಡೆದದ್ದು ಮೋದಿ : ಪೋಲೆಂಡ್ ಸಚಿವರ ಹೇಳಿಕೆಚೊಚ್ಚಲ ಬಾಹ್ಯಾಕಾಶ ಯಾನ ಕೈಗೊಂಡ ಭಾರತೀಯ ಮೂಲದ ಗಗನಯಾತ್ರಿ ಅನಿಲ ಮೆನನ್ಸಾವೂ ಬೇರ್ಪಡಿಸಲಿಲ್ಲ ಇವರಿಬ್ಬರ ಬಂಧವನ್ನು…; ಯಜಮಾನನ ಶವಯಾತ್ರೆಯಲ್ಲೇ ಪ್ರಾಣ ಬಿಟ್ಟ ನಿಷ್ಠಾವಂತ ನಾಯಿ ʼದುಗ್ಗುʼ