Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಹಸೀನಾ ನೇತೃತ್ವದ 'ಅವಾಮಿ ಲೀಗ್' ಪಕ್ಷ ನಿಷೇಧಿಸಿದ ಬಾಂಗ್ಲಾ ಮಧ್ಯಂತರ ಸರ್ಕಾರ

ಢಾಕಾ: ಭಯೋತ್ಪಾದನಾ ವಿರೋಧಿ ಕಾನೂನಿನ ಅಡಿಯಲ್ಲಿ ಮೊಹಮ್ಮದ್ ಯೂನಸ್ ನೇತೃತ್ವದ ಬಾಂಗ್ಲಾ ಮಧ್ಯಂತರ ಸರ್ಕಾರ, ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರ 'ಅವಾಮಿ ಲೀಗ್' ಪಕ್ಷವನ್ನು ಶನಿವಾರ ನಿಷೇಧಿಸಿದೆ.

'ಭಯೋತ್ಪಾದಕ ಚಟುವಟಿಕೆಗಳು ಮತ್ತು ಸರ್ವಾಧಿಕಾರಿ ಆಡಳಿತ ನಡೆಸಿದ ಆರೋಪದ ಮೇರೆಗೆ ಅವಾಮಿ ಲೀಗ್ ಪಕ್ಷವನ್ನು ನಿಷೇಧಿಸಬೇಕು ಎಂದು ಆಗ್ರಹಿಸಿ ವಿದ್ಯಾರ್ಥಿಗಳ ನೇತೃತ್ವದಲ್ಲಿ ಹೊಸದಾಗಿ ರಚನೆಯಾದ ನ್ಯಾಷನಲ್ ಸಿಟಿಜನ್ ಪಾರ್ಟಿ (ಎನ್‌ಸಿಪಿ) ಕಾರ್ಯಕರ್ತರು ಗುರುವಾರ ಢಾಕಾದಾದ್ಯಂತ ಪ್ರತಿಭಟನೆ ನಡೆಸಿದ್ದರು. ಇದಾದ ಬಳಿಕ ಪಕ್ಷವನ್ನು ನಿಷೇಧಿಸುವ ಘೋಷಣೆ ಹೊರಬಿದ್ದಿದೆ.

ಈ ಸಂಬಂಧ ಅಧಿಕೃತ ಗೆಜೆಟ್ ಅಧಿಸೂಚನೆಯನ್ನು ಶೀಘ್ರದಲ್ಲಿಯೇ ಹೊರಡಿಸಲಾಗುವುದು ಎಂದು ಯೂನಸ್ ಕಚೇರಿ ತಿಳಿಸಿದೆ.

ದೇಶದ ಭದ್ರತೆ ಮತ್ತು ಸಾರ್ವಭೌಮತ್ವವನ್ನು ರಕ್ಷಿಸುವ ಹಿತದೃಷ್ಟಿಯಿಂದ ಬಾಂಗ್ಲಾದೇಶದ ಅಂತರರಾಷ್ಟ್ರೀಯ ಅಪರಾಧ ನ್ಯಾಯಮಂಡಳಿಯಲ್ಲಿ ಅವಾಮಿ ಲೀಗ್ ಮತ್ತು ಅದರ ನಾಯಕರ ವಿಚಾರಣೆ ಪೂರ್ಣಗೊಳ್ಳುವವರೆಗೆ ನಿಷೇಧವು ಜಾರಿಯಲ್ಲಿರುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಅವಾಮಿ ಲೀಗ್ ಪಕ್ಷದ ಆಡಳಿತವನ್ನು ಪದಚ್ಯುತಗೊಳಿಸಲು ಕಾರಣರಾದ ನಾಯಕರು ಮತ್ತು ಕಾರ್ಯಕರ್ತರ ಭದ್ರತೆಗಾಗಿಯೂ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದೂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರುನಾಳೆ ಸಿದ್ದರಾಮಯ್ಯ ರಾಜೀನಾಮೆ ?