E-PAPER
07 Nov 2026, 07:36:06 AM|
Gold₹14437/gGold24K ₹14,437/g - 22K ₹13,222/gTap for full details
Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಬೆಳಗಾವಿಗೆ ಬರಾಕ್ ಒಪ್ತಾರಾ ?

ಬೆಳಗಾವಿ : ಬೆಳಗಾವಿಯಲ್ಲಿ ಅಖಿಲ ಭಾರತ ಕಾಂಗ್ರೆಸ್ ಪಕ್ಷದ 39 ನೇ ಮಹಾ ಅಧಿವೇಶನ ನಡೆದು ಬರೋಬ್ಬರಿ ನೂರು ವರ್ಷ ಸಂದಿದೆ. ಈ ಹಿನ್ನೆಲೆಯಲ್ಲಿ ಈ ಅಧಿವೇಶನದ ಶತಮಾನೋತ್ಸವ ಸಮಾರಂಭಕ್ಕೆ ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಅವರನ್ನು ಕರೆಸಲು ಚಿಂತನೆ ನಡೆಸಲಾಗಿದೆ. ಈ ಬಗ್ಗೆ ಸಚಿವ ಎಚ್.ಕೆ.ಪಾಟೀಲ ಅವರು ಬೆಂಗಳೂರಿನಲ್ಲಿ ಗಾಂಧಿ ಭಾರತ ಕಾರ್ಯಕ್ರಮದಲ್ಲಿ ಮಾತನಾಡಿ, ಬರಾಕ್ ಒಬಾಮಾ ಅವರು ಗಾಂಧೀಜಿ ಭಾರತದ ನಾಯಕ ಮಾತ್ರವಲ್ಲ, ಅವರೊಬ್ಬ ಜಾಗತಿಕ ನಾಯಕ ಎಂದು ಹಲವು ಬಾರಿ ಹೇಳಿದ್ದಾರೆ. ಈ ಹಿನ್ನಲೆಯಲ್ಲಿ ಕೆಪಿಸಿಸಿಯಿಂದ ಬೆಳಗಾವಿಯಲ್ಲಿ ಏರ್ಪಡಿಸುವ ಬೆಳಗಾವಿ ಅಧಿವೇಶನದ ಶತಾಬ್ದಿ ಕಾರ್ಯಕ್ರಮಕ್ಕೆ ಬರಾಕ್ ಒಬಾಮಾ ಅವರನ್ನು ಅತಿಥಿಯಾಗಿ ಅಹ್ವಾನಿಸಲು ಚರ್ಚಿಸಲಾಗಿದೆ. ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಜನ್ಮ ಶತಮಾನೋತ್ಸವ ಡಿ.26 ರಂದು ನಡೆಯಲಿದ್ದು ಈ ಕಾರ್ಯಕ್ರಮಕ್ಕೆ ಒಬಾಮಾ ಅವರನ್ನು ಕರೆತರುವ ನಿಟ್ಟಿನಲ್ಲಿ ಚಿಂತನೆ ನಡೆಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಬೆಳಗಾವಿಯಲ್ಲಿ 1924ರ ಡಿಸೆಂಬರ್ 26 ರಿಂದ ಎರಡು ದಿನಗಳ ಕಾಲ ಅಖಿಲ ಭಾರತ ಕಾಂಗ್ರೆಸ್ ಪಕ್ಷದ 39ನೇ ಅಧಿವೇಶನ ಆಯೋಜಿಸಲ್ಪಟ್ಟಿತ್ತು. ಆಗ ಐದು ವರ್ಷದ ಬಾಲಕಿಯಾಗಿದ್ದ ಗಾನಕೋಗಿಲೆ ಗಂಗೂಬಾಯಿ ಹಾನಗಲ್ ಅವರು ಹುಯಿಲಗೋಳ ನಾರಾಯಣರಾಯರ ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು ಗೀತೆಯನ್ನು ಹಾಡಿದರು. ಅಧಿವೇಶನ ನಡೆದ ಸ್ಥಳಕ್ಕೆ ವಿಜಯನಗರ ಎಂದು ಹೆಸರಿಡಲಾಗಿತ್ತು. ಅಧಿವೇಶನಕ್ಕೆ ಆಗಮಿಸುವ ಜನರಿಗೆ ಕುಡಿಯುವ ನೀರು ಒದಗಿಸಲು ನಿರ್ಮಿಸಿದ ಬಾವಿಗೆ ಪಂಪಾ ಸರೋವರ ಎಂದು ಹೆಸರಿಟ್ಟಲಾಗಿತ್ತು. ಒಟ್ಟಾರೆ, ಇದೀಗ ಬೆಳಗಾವಿ ಕಾಂಗ್ರೆಸ್ ಅಧಿವೇಶನಕ್ಕೆ 100 ವರ್ಷಗಳಾಗುತ್ತಿದ್ದು ದೇಶಕ್ಕೆ ಬ್ರಿಟಿಷರಿಂದ ಸ್ವಾತಂತ್ರ್ಯ ದೊರಕಿಸಿಕೊಡಲು ಮುಂಚೂಣಿಯಲ್ಲಿ ಹೋರಾಟ ಮಾಡಿದ ಮಹಾತ್ಮಾ ಗಾಂಧಿ ಬೆಳಗಾವಿ ಅಧಿವೇಶನದ ಅಧ್ಯಕ್ಷತೆ ವಹಿಸಿದ್ದು ಅತ್ಯಂತ ಮಹತ್ವದ್ದಾಗಿದೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಾರ್ಕಂಡೇಯ ನದಿಯಲ್ಲಿ  ಮರ್ಡರ್..?ಬೆಳಗಾವಿಯಲ್ಲಿ ಹೊಸ ಶೋರೂಮ್ ಮೂಲಕ ಕರ್ನಾಟಕದಲ್ಲಿ ತನ್ನ ಅಸ್ತಿತ್ವ ವಿಸ್ತರಿಸಿದ PuREPowerನೀಲಿ ಡ್ರಮ್ ಕೊಲೆ ಪ್ರಕರಣ : ಪತ್ನಿ ಮುಸ್ಕಾನ್‌, ಪ್ರಿಯಕರ ಸಾಹಿಲ್‌ಗೆ ಮರಣದಂಡನೆ ಶಿಕ್ಷೆRCU ದಲ್ಲಿ ಲಕ್ಷಾಂತರ ರೂ  ಗೋಲ್ಮಾಲ್, ಮೂವರು ಜೈಲುಪಾಲು.ಚೌತಿ ರಾತ್ರಿ ಅವಘಡ:  ಚವಾಟಗಲ್ಲಿಯಲ್ಲಿ ನಾಲ್ವರು ಸಜೀವ ದಹನದ್ವಿಚಕ್ರ ವಾಹನ-ಸಾರಿಗೆ ಬಸ್ ಅಪಘಾತ: ಮೂವರು ಸ್ಥಳದಲ್ಲೇ ಸಾವುಬೆಂಗಳೂರು-ಬೆಳಗಾವಿ ನಡುವೆ ಎರಡು ವಿಶೇಷ ರೈಲುಗಳ ಸಂಚಾರಕ್ಕೆ ವ್ಯವಸ್ಥೆ ಮಾಡಿದೆ.ಪಾರ್ಕಿಂಗ್‌ ಮಾಡಿದ್ದ ಕಾರಿನ ಬಾನೆಟ್‌ನಲ್ಲಿ ಅಡಗಿತ್ತು ಬೃಹತ್‌ ಹೆಬ್ಬಾವು ; ಬೆಚ್ಚಿಬಿದ್ದ ನಿವಾಸಿಗಳು  ಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ