Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ವಿಶ್ವಸಂಸ್ಥೆಯಿಂದ ಬಸವಣ್ಣಗೆ ಸಿಗಲಿದೆ ಮನ್ನಣೆ

ಬೆಳಗಾವಿ: 'ಅದ್ವಿತೀಯ ನಾಯಕತ್ವ ಗುಣಗಳನ್ನು ಹೊಂದಿದ್ದ ಬಸವಣ್ಣ ಅವರಿಗೆ ಮುಂದೊಮ್ಮೆ ವಿಶ್ವಸಂಸ್ಥೆಯೂ ಮನ್ನಣೆ ನೀಡಲಿದೆ' ಎಂದು ಸಾಹಿತಿ ಡಾ.ಅವಿನಾಶ ಕವಿ ಹೇಳಿದರು.

ನಗರದಲ್ಲಿ ಹಮ್ಮಿಕೊಂಡಿದ್ದ ದಾನಮ್ಮ ದೇವಿ ಮರಿಪುರಾಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

'1948ರಲ್ಲಿ ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗವು ಒಬ್ಬ ನಾಯಕನಲ್ಲಿ ಇರಬೇಕಾದ ಗುಣಗಳ ಬಗ್ಗೆ ಘೋಷಣೆ ಮಾಡಿತು. ಆ ಪಟ್ಟಿಯಲ್ಲಿದ್ದ ಎಲ್ಲ ಗುಣಗಳು ಬಸವಣ್ಣ ಅವರಲ್ಲಿವೆ. ಅಂತೆಯೇ ಜಾಗತಿಕ ಮಟ್ಟದ ವಿಶ್ವವಿದ್ಯಾಲಯಗಳು ಸಿದ್ಧಪಡಿಸಿದ ಪಟ್ಟಿಯಲ್ಲಿನ ನಾಯಕತ್ವದ ಗುಣಗಳೂ ಬಸವಣ್ಣ ಅವರಲ್ಲಿವೆ. ಹಾಗಾಗಿ ಬಸವಣ್ಣ ಕೇವಲ ಕರ್ನಾಟಕದ ಸಾಂಸ್ಕೃತಿಕ ನಾಯಕ ಅಲ್ಲ. ಇಡೀ ಮಾನವ ಕುಲಕ್ಕೆ ಸಾಂಸ್ಕೃತಿಕ ನಾಯಕ. ಮುಂದೊಂದು ದಿನ ಇಡೀ ವಿಶ್ವ ಅವರನ್ನು ಗುರುತಿಸುತ್ತದೆ' ಎಂದರು.

ನಾಗನೂರು ರುದ್ರಾಕ್ಷಿಮಠದ ಅಲ್ಲಮಪ್ರಭು ಸ್ವಾಮೀಜಿ ಆಶೀರ್ವಚನ ನೀಡಿದರು. ಮೃತ್ಯುಂಜಯ ಬೋಳಮಲ್ಲ ಇದ್ದರು. ಚನ್ನವೀರಸ್ವಾಮಿ ಹಿರೇಮಠ ಪ್ರವಚನ ನೀಡಿದರು. ದಾನಮ್ಮ ದೇವಿ ದೇವಸ್ಥಾನದ ಟ್ರಸ್ಟ್ ಅಧ್ಯಕ್ಷ ಚಂದ್ರಶೇಖರ ಬೆಂಬಳಗಿ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಸಿ.ಎಂ.ಕಿತ್ತೂರು ವಂದಿಸಿದರು. ರೋಹಿಣಿ ಬೆಂಬಳಗಿ ಮತ್ತು ರಾಜಶ್ರೀ ದೇಯಣ್ಣವರ ನಿರೂಪಿಸಿದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಸಂಸದ ಶೆಟ್ಟರ್ ಸಭೆವಿದ್ಯಾರ್ಥಿಗಳು ಗಣಕೀಕೃತ ಗ್ರಂಥಾಲಯ ಸದುಪಯೋಗ ಪಡಿಸಿಕೊಳ್ಳಬೇಕು: ಡಾ.ಪ್ರವೀಣ ಹುಲ್ಲೋಳಿಭಾರತ–ಬ್ರಿಟನ್ ಮುಕ್ತ ವ್ಯಾಪಾರ ಒಪ್ಪಂದ ಜಾರಿ : ಯಾವ ವಸ್ತುಗಳು ಅಗ್ಗವಾಗಲಿವೆ ? ಯಾವ್ಯಾವುದು ದುಬಾರಿಯೇ ಇರಲಿವೆ ?ಪ್ರಧಾನಿ ನಿವಾಸದಲ್ಲಿ ಬಿಜೆಪಿ ಉನ್ನತ ನಾಯಕರ ಸಭೆ: ಸಂಪುಟ ಪುನಾರಚನೆ ಕುತೂಹಲಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿ