Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿಯ ಹಿರಿಯ ಸಾಹಿತಿ ಪ್ರಾ.ಬಿ.ಎಸ್.ಗವಿಮಠ ದಂಪತಿಗಳಿಂದ ಮರಣೋತ್ತರ ದೇಹದಾನ

ಬೆಳಗಾವಿ: ಹಿರಿಯ ಸಾಹಿತಿ ಪ್ರಾ.ಬಿ.ಎಸ್.ಗವಿಮಠ ಮತ್ತು ಅವರ ಪತ್ನಿ ಶ್ರೀಮತಿ ಸುಗಂಧ ಬಿ.ಗವಿಮಠ ಇವರು ಕೆ.ಎಲ್.ಇ. ಸಂಸ್ಥೆಯ ಶ್ರೀ ಬಿ.ಎಂ.ಕಂಕಣವಾಡಿ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆಗೆ ಮರಣೋತ್ತರ ದೇಹದಾನ ಮಾಡಲು ನಿರ್ಧರಿಸಿದ್ದಾರೆ.
1947 ರಲ್ಲಿ ಇದೇ ಕಂಕಣವಾಡಿ ಆಸ್ಪತ್ರೆಯಲ್ಲಿ ಜನಿಸಿದ್ದ ಇವರಿಗೆ ಈ ಕಾಲೇಜಿನ ಬಗ್ಗೆ ಭಾವನಾತ್ಮಕ ನಂಟಿದೆ. ಕೆ.ಎಲ್.ಇ.ಸಂಸ್ಥೆಯಲ್ಲಿಯೇ ಓದಿ, ಅಲ್ಲಿಯೇ 40 ವರ್ಷಗಳ ಕಾಲ ಶಿಕ್ಷಕರಾಗಿ, ಪ್ರಾಚಾರ್ಯರಾಗಿ, ಕೆಎಲ್‍ಇ ಸಂಸ್ಥೆಯ ಆಜೀವ ಸದಸ್ಯರಾಗಿ, ಪ್ರಸಾರಾಂಗದ ನಿರ್ದೇಶಕರಾಗಿ, ಕೆಎಲ್‍ಇ ಚರಿತ್ರೆ ಬರೆದ ಇತಿಹಾಸಕಾರರೆಂಬ ಹೆಗ್ಗಳಿಕೆ ಇವರದು. ಮರಣಾನಂತರ ಕೂಡ ತನ್ನ ದೇಹ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡಲಿ ಎಂಬುದೇ ಅವರ ಆಶಯ. ಈ ದಿಶೆಯಲ್ಲಿ ಬೈಲಹೊಂಗಲ ರಾಮಣ್ಣನವರ ಚಾರಿಟೇಬಲ್ ಟ್ರಸ್ಟ್ ಮೂಲಕ ಬಿ.ಎಂ.ಕಂಕಣವಾಡಿ ಕಾಲೇಜಿಗೆ ಮರಣೋತ್ತರ ದೇಹದಾನವನ್ನು ಮಾಡಲು ದಂಪತಿ ಸಮೇತ ವಾಗ್ದಾನ ಮಾಡಿದ್ದರು.
ಈ ಸಂದರ್ಭದಲ್ಲಿ ಶ್ರೀ ಬಿ.ಎಂ.ಕಂಕಣವಾಡಿ ಆಯುರ್ವೇದ ಕಾಲೇಜಿನ ಶರೀರ ರಚನಾಶಾಸ್ತ್ರದ ಮುಖ್ಯಸ್ಥರು ಹಾಗೂ ಡಾ. ರಾಮಣ್ಣವರ ಚಾರಿಟೇಬಲ್ ಟ್ರಸ್ಟ್ ಬೈಲಹೊಂಗಲದ ಕಾರ್ಯದರ್ಶಿ, ದೇಹದಾನ ಜಾಗೃತಿಗಾಗಿ ತಮ್ಮ ತಂದೆ ಮೃತದೇಹ ಛೇದಿಸಿ ವೈದ್ಯ ವಿದ್ಯಾರ್ಥಿಗಳಿಗೆ ಪಾಠ ಮಾಡಿ ವೈದ್ಯಕೀಯ ಇತಿಹಾಸ ನಿರ್ಮಿಸಿದ ಡಾ.ಮಹಾಂತೇಶ ರಾಮಣ್ಣನವರ ಅವರಿಗೆ ಮರಣೋತ್ತರ ದೇಹದಾನ ಪತ್ರವನ್ನು ಸಲ್ಲಿಸಿದರು. ಡಾ.ಮಹೇಶ ಗುರನಗೌಡರ ಉಪಸ್ಥಿತರಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಸಂಸದ ಶೆಟ್ಟರ್ ಸಭೆವಿದ್ಯಾರ್ಥಿಗಳು ಗಣಕೀಕೃತ ಗ್ರಂಥಾಲಯ ಸದುಪಯೋಗ ಪಡಿಸಿಕೊಳ್ಳಬೇಕು: ಡಾ.ಪ್ರವೀಣ ಹುಲ್ಲೋಳಿಭಾರತ–ಬ್ರಿಟನ್ ಮುಕ್ತ ವ್ಯಾಪಾರ ಒಪ್ಪಂದ ಜಾರಿ : ಯಾವ ವಸ್ತುಗಳು ಅಗ್ಗವಾಗಲಿವೆ ? ಯಾವ್ಯಾವುದು ದುಬಾರಿಯೇ ಇರಲಿವೆ ?ಪ್ರಧಾನಿ ನಿವಾಸದಲ್ಲಿ ಬಿಜೆಪಿ ಉನ್ನತ ನಾಯಕರ ಸಭೆ: ಸಂಪುಟ ಪುನಾರಚನೆ ಕುತೂಹಲಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿ