Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿ : ಕೆಎಲ್ಇ ಡೀಮ್ಡ್ ವಿಶ್ವವಿದ್ಯಾಲಯ (ಕಾಹೇರ್) ವತಿಯಿಂದ ಎಜುಕೇಶನ್ ಎಕ್ಸ್‌ಪೋ–2026 ಆಯೋಜನೆ 

ಬೆಳಗಾವಿ : ಬೆಳಗಾವಿಯ ಕೆಎಲ್ಇ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಅಂಡ್ ರಿಸರ್ಚ್ (KAHER) 13 ಏಪ್ರಿಲ್ 2006ರಂದು ಸ್ಥಾಪಿತವಾದ ಡೀಮ್ಡ್ ವಿಶ್ವವಿದ್ಯಾಲಯವಾಗಿದೆ. ಕಾಹೇರ್ ಮತ್ತು ಅದರ ಅಂಗ ಸಂಸ್ಥೆಗಳು ಅಲೈಡ್ ಹೆಲ್ತ್ ಸೈನ್ಸಸ್ ಮತ್ತು ಅಂತರಶಾಖಾ ವಿಜ್ಞಾನಗಳಲ್ಲಿ ವಿವಿಧ ಪದವಿ (Under-Graduate) ಕಾರ್ಯಕ್ರಮಗಳನ್ನು ನೀಡುತ್ತಿವೆ. ಕಾಹೇರ್ ವತಿಯಿಂದ ಎಜುಕೇಶನ್ ಎಕ್ಸ್‌ಪೋ–2026 ಅನ್ನು 2026ರ ಮೇ 4 (ಸೋಮವಾರ) ಮತ್ತು ಮೇ 5 (ಮಂಗಳವಾರ)ರಂದು ಬೆಳಿಗ್ಗೆ 10.00ರಿಂದ ಸಂಜೆ 5.00ರವರೆಗೆ ಬೆಳಗಾವಿಯ ನೆಹರು ನಗರದಲ್ಲಿರುವ ಜೆಎನ್‌ಎಂಸಿ ಕ್ಯಾಂಪಸ್‌ನ ಕೆಎಲ್ಇ ಸೆಂಟಿನರಿ ಕನ್ವೆನ್ಷನ್ ಸೆಂಟರ್‌ನಲ್ಲಿ ಎರಡು ದಿನಗಳ ಕಾಲ ಆಯೋಜಿಸಲಾಗಿದೆ. 

ಈ ಎಜುಕೇಶನ್ ಎಕ್ಸ್‌ಪೋವನ್ನು ಆಯೋಜಿಸುವ ಮುಖ್ಯ ಉದ್ದೇಶವು ವಿದ್ಯಾರ್ಥಿಗಳು ಮತ್ತು ಪೋಷಕರಿಗೆ NEET ವ್ಯಾಪ್ತಿಗೆ ಒಳಪಡುವುದಿಲ್ಲದ ವಿವಿಧ ಆರೋಗ್ಯ ವೃತ್ತಿ ಮತ್ತು ಕೌಶಲ್ಯಾಧಾರಿತ ಉದ್ಯೋಗಮುಖಿ ಪದವಿ ಕೋರ್ಸ್‌ಗಳ ಬಗ್ಗೆ ಅರಿವು ಮೂಡಿಸುವುದಾಗಿದೆ. ಇದರಲ್ಲಿ ಫಾರ್ಮಸಿ, ಫಿಸಿಯೋಥೆರಪಿ, ನರ್ಸಿಂಗ್ ಸೈನ್ಸಸ್, ಅಲೈಡ್ ಹೆಲ್ತ್ ಸೈನ್ಸಸ್ ಹಾಗೂ ಅಂತರಶಾಖಾ ವಿಜ್ಞಾನಗಳು ಸೇರಿವೆ. ಈ ಸಂದರ್ಭದಲ್ಲಿ ಕೋರ್ಸ್ ಸಂಯೋಜಕರು ಹಾಗೂ ವಿಷಯ ತಜ್ಞರು ಅರ್ಹತಾ, ಅವಧಿ, ಉದ್ಯೋಗಾವಕಾಶಗಳು ಮುಂತಾದ ವಿವಿಧ ವಿಷಯಗಳ ಕುರಿತು ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಮಾರ್ಗದರ್ಶನ ನೀಡಲಿದ್ದಾರೆ. ವಿದ್ಯಾರ್ಥಿಗಳು ಹಾಗೂ ಪೋಷಕರು ಈ ಎಜುಕೇಶನ್ ಎಕ್ಸ್‌ಪೋಗೆ ಭೇಟಿ ನೀಡಿ ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ವಿನಂತಿಸಲಾಗಿದೆ ಎಂದು ರಿಜಿಸ್ಟ್ರಾರ್
ಪ್ರೊ. ಡಾ. ವಿ.ಎಂ. ಪಟ್ಟಣಶೆಟ್ಟಿ ತಿಳಿಸಿದರು.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿಭೋಜಶಾಲಾ–ಕಮಾಲ್ ಮೌಲಾ ಪ್ರಕರಣ: ಶುಕ್ರವಾರದ ನಮಾಜ್‌ಗೆ ಮುಸ್ಲಿಮರಿಗೆ ಪ್ರತ್ಯೇಕ ಸ್ಥಳ ಕಲ್ಪಿಸಲು ಸುಪ್ರೀಂ ಕೋರ್ಟ್ ನಿರ್ದೇಶನ2022ರಲ್ಲಿ ಉಕ್ರೇನ್ ಮೇಲೆ ಅಣ್ವಸ್ತ್ರ ದಾಳಿ ನಡೆಸದಂತೆ ರಷ್ಯಾವನ್ನು ತಡೆದದ್ದು ಮೋದಿ : ಪೋಲೆಂಡ್ ಸಚಿವರ ಹೇಳಿಕೆಚೊಚ್ಚಲ ಬಾಹ್ಯಾಕಾಶ ಯಾನ ಕೈಗೊಂಡ ಭಾರತೀಯ ಮೂಲದ ಗಗನಯಾತ್ರಿ ಅನಿಲ ಮೆನನ್ಸಾವೂ ಬೇರ್ಪಡಿಸಲಿಲ್ಲ ಇವರಿಬ್ಬರ ಬಂಧವನ್ನು…; ಯಜಮಾನನ ಶವಯಾತ್ರೆಯಲ್ಲೇ ಪ್ರಾಣ ಬಿಟ್ಟ ನಿಷ್ಠಾವಂತ ನಾಯಿ ʼದುಗ್ಗುʼ