Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿ-ಕಿತ್ತೂರು-ಧಾರವಾಡ ರೈಲು : ಮಹತ್ವದ ಸಭೆ ನಡೆಸಿದ ಸಚಿವರು

ಬೆಳಗಾವಿ : ಬೆಳಗಾವಿ-ಕಿತ್ತೂರು- ಧಾರವಾಡ ನೇರ ರೈಲು ಯೋಜನೆಗೆ ಸಂಬಂಧಿಸಿ ರಾಜ್ಯ ಮೂಲ ಸೌಕರ್ಯ ಖಾತೆ ಸಚಿವ ಎಂ.ಬಿ.ಪಾಟೀಲ ಅವರು ಬೆಂಗಳೂರಿನಲ್ಲಿಂದು ಅಧಿಕಾರಿಗಳ ಜೊತೆ ಮಹತ್ವದ ಸಭೆ ನಡೆಸಿದರು.

ರೈಲ್ವೆ ಜತೆ ವೆಚ್ಚ ಹಂಚಿಕೆ ಆಧಾರದಲ್ಲಿ ಕೈಗೊಂಡಿರುವ ರಾಜ್ಯದ ಗದಗ-ವಾಡಿ, ಧಾರವಾಡ- ಬೆಳಗಾವಿ, ತುಮಕೂರು- ದಾವಣಗೆರೆ, ತುಮಕೂರು- ರಾಯದುರ್ಗ ಸೇರಿದಂತೆ ಹಲವಾರು ರೈಲ್ವೆ ಯೋಜನೆಗಳಿಗೆ ಎದುರಾಗಿರುವ ಭೂಸ್ವಾಧೀನ ಅಡೆತಡೆ ಸೇರಿದಂತೆ ವಿವಿಧ ಸಮಸ್ಯೆಗಳ ಕುರಿತು ಮತ್ತು ಯೋಜನೆಗಳ ತ್ವರಿತ ಕಾಮಗಾರಿಗೆ ಸಂಬಂಧಿಸಿದಂತೆ ಅಗತ್ಯ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಸಚಿವರು ನೈರುತ್ಯ ರೈಲ್ವೆ ಅಧಿಕಾರಿಗಳ ಜತೆ ಮಹತ್ವದ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.

ಧಾರವಾಡ-ಬೆಳಗಾವಿ ಯೋಜನೆ ಆದಷ್ಟು ಬೇಗನೇ ಕಾರ್ಯಗತವಾಗಬೇಕು ಎಂದು ಸಚಿವರು ಸಭೆಯಲ್ಲಿ ಸೂಚನೆ ನೀಡಿದರು.ಧಾರವಾಡ-ಬೆಳಗಾವಿ ನಡುವೆ ಈಗಿನ ರೈಲು ಪಯಣ ಈಗ ಪ್ರಯಾಸಕರವಾಗಿದೆ. ಇದನ್ನು ನಾವು ಸುಗಮಗೊಳಿಸಬೇಕಿದೆ. ಇದಕ್ಕಾಗಿ 888 ಎಕರೆ ಭೂಮಿ ಬೇಕಾಗಿದೆ. ಇದು ಮುಗಿಯದೆ ಕಾಮಗಾರಿ ಆರಂಭ ಸಾಧ್ಯವಿಲ್ಲ. ಭೂಮಿ ಹಸ್ತಾಂತರವಾದರೆ 2027ರ ಕೊನೆಯ ವೇಳೆಗೆ ಕಾಮಗಾರಿ ಮುಗಿಸಬಹುದು. ಈ ಸಂಬಂಧ ಅವರು ಸಚಿವರಾದ ಲಕ್ಷ್ಮೀ ಹೆಬ್ಬಾಳ್ಳರ ಮತ್ತು ಸಂತೋಷ್ ಲಾಡ್ ಇಬ್ಬರನ್ನೂ ಸೇರಿಸಿಕೊಂಡು ಸಭೆ ನಡೆಸಲು ಸಚಿವರು ಸಲಹೆ ನೀಡಿದರು.

ಸಭೆಯಲ್ಲಿ ರಾಜ್ಯ ಮೂಲಸೌಕರ್ಯ ಅಭಿವೃದ್ಧಿ ಇಲಾಖೆ ಕಾರ್ಯದರ್ಶಿ ಮಂಜುಳಾ, ಮೂಲಸೌಕರ್ಯ ಇಲಾಖೆ ಹೆಚ್ಚುವರಿ ಕಾರ್ಯದರ್ಶಿ ಶ್ರೀಧರ ಮೂರ್ತಿ, ಸಚಿವರ ತಾಂತ್ರಿಕ ಸಲಹೆಗಾರ ಅರವಿಂದ ಗಲಗಲಿ, ನೈರುತ್ಯ ರೈಲ್ವೆಯ ನಿರ್ಮಾಣ ವಿಭಾಗದ ಮುಖ್ಯ ಆಡಳಿತಾಧಿಕಾರಿ ಅಜಯ ಶರ್ಮಾ, ಯೋಜನಾ ವಿಭಾಗದ ಮುಖ್ಯ ಎಂಜಿನಿಯರ್ ಮೂರ್ತಿರಾಜು ಸೇರಿದಂತೆ ನೈರುತ್ಯ ರೈಲ್ವೆಯ ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಪಾಲರ ಪತ್ನಿಯ ಆರೋಗ್ಯದಲ್ಲಿ ಏರುಪೇರು :  ದಿಢೀರ್ ಇಂದೋರ್ ಗೆ ತೆರಳಿದ ಗೆಹಲೋಟ್ -ಸಿಎಂ ರಾಜೀನಾಮೆ ಪತ್ರ ಯಾರಿಗೆ ಸಲ್ಲಿಸುತ್ತಾರೆ ?ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರು