Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿ ಮೇಯರ್, ಉಪಮೇಯರ್ ಆಯ್ಕೆ

ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆಯ ಮೇಯರ್ ಆಗಿ 41ನೇ ವಾರ್ಡಿನ ಸದಸ್ಯ ಮಂಗೇಶ ಪವಾರ್ ಮತ್ತು ಉಪಮೇಯರ್ ಅಗಿ ವಾರ್ಡ್ ನಂಬರ್ 44ರ ಸದಸ್ಯೆ ವಾಣಿ ಜೋಶಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಎರಡು ಸ್ಥಾನಗಳು ಬೆಳಗಾವಿ ದಕ್ಷಿಣ ಮತ ಕ್ಷೇತ್ರದ ಪಾಲಾಗಿದೆ. ಈ ಮೂಲಕ ಶಾಸಕ ಅಭಯ ಪಾಟೀಲ ಮತ್ತೊಮ್ಮೆ ಮಹಾನಗರ ಪಾಲಿಕೆಯಲ್ಲಿ ತಮ್ಮ ಪ್ರಾಬಲ್ಯ ಸಾಧಿಸಿದಂತಾಗಿದೆ.

ಚುನಾವಣಾ ವೀಕ್ಷಕ ಎನ್.ರವಿಕುಮಾ‌ರ್, ಶಾಸಕ ಅಭಯ ಪಾಟೀಲ, ಸಂಸದ ಜಗದೀಶ ಶೆಟ್ಟರ್ ನೇತೃತ್ವದಲ್ಲಿ ಖಾಸಗಿ ಹೋಟೆಲ್‌ನಲ್ಲಿ ಕೋ‌ರ್ ಕಮಿಟಿ ಸದಸ್ಯರು ಗೋಪ್ಯ ಚರ್ಚೆ ನಡೆಸಿದರು.

ಮೇಯ‌ರ್ ಸ್ಥಾನಕ್ಕೆ ಮಂಗೇಶ ಪವಾರ, ಉಪ ಮೇಯ‌ರ್ ಸ್ಥಾನಕ್ಕೆ ವಾಣಿ ವಿಲಾಸ ಜೋಶಿ ಅವರನ್ನು ಅವಿರೋಧವಾಗಿ ಆಯ್ಕೆ ಮಾಡುವ ಕುರಿತು ಚರ್ಚಿಸಿದ್ದಾರೆ.

ಮೇಯ‌ರ್ ಸ್ಥಾನಕ್ಕೆ ಐವರು, ಉಪ ಮೇಯ‌ರ್ ಸ್ಥಾನಕ್ಕೆ ಮೂವರ ನಡುವೆ ಪೈಪೋಟಿ ಇತ್ತು. ನಾಯಕರು ಒಬ್ಬೊಬ್ಬರನ್ನೇ ಕರೆದು ಸಂಧಾನ ಮಾಡಿಸಿದರು.

ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ 58 ಸದಸ್ಯರಿದ್ದಾರೆ. ಈ ಪೈಕಿ ಬಿಜೆಪಿಯ 35 ಸದಸ್ಯರಿದ್ದಾರೆ. ಪಕ್ಷೇತರರಾಗಿ ಗೆದ್ದಿದ್ದ ಇಬ್ಬರು ಸದಸ್ಯರು ಬಿಜೆಪಿ ಜತೆಗೆ ಗುರುತಿಸಿಕೊಂಡಿದ್ದಾರೆ. ಕಾಂಗ್ರೆಸ್‌ನ 10, ಎಐಎಂಐಎಂನ ಒಬ್ಬ ಸದಸ್ಯರಿದ್ದಾರೆ.

ಮಹಾರಾಷ್ಟ್ರ ಏಕೀಕರಣ ಸಮಿತಿ ಬೆಂಬಲಿತರು ಸೇರಿದಂತೆ 10 ಸದಸ್ಯರು ಪಕ್ಷೇತರರಿದ್ದಾರೆ. ಸಚಿವರಾದ ಸತೀಶ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳಕರ, ಶಾಸಕರಾದ ಆಸಿಫ್ ಸೇರ್, ಅಭಯ ಪಾಟೀಲ, ವಿಧಾನ ಪರಿಷತ್ ಸದಸ್ಯ ಸಾಬಣ್ಣ ತಳವಾರ, ಸಂಸದರಾದ ಜಗದೀಶ ಶೆಟ್ಟ‌ರ್, ಪ್ರಿಯಾಂಕಾ ಜಾರಕಿಹೊಳಿ ಅವರಿಗೂ ಮತದಾನದ ಹಕ್ಕು ಇದೆ.

ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಬಹುಮತ ಹೊಂದಿದ್ದು ಇದೀಗ ಮತ್ತೊಮ್ಮೆ ಮೇಯರ್ ಮತ್ತು ಉಪಮೇಯರ್ ಸ್ಥಾನಗಳು ಕಮಲ ಪಕ್ಷದ ಪಾಲಾಗಿವೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರುನಾಳೆ ಸಿದ್ದರಾಮಯ್ಯ ರಾಜೀನಾಮೆ ?