Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕ್ಷಣಗಣನೆ ಶುರು- ಇಂದಿನಿಂದ ಬೆಳಗಾವಿ ಚಳಿಗಾಲದ ಅಧಿವೇಶನ

ಬೆಳಗಾವಿ: ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ವಿಧಾನಮಂಡಲ ಚಳಿಗಾಲದ ಅಧಿವೇಶನ ಇಂದಿನಿಂದ ಆರಂಭವಾಗುತ್ತಿದೆ. ಬಾಣಂತಿಯರ ಸಾವು, ಶಿಶುಗಳ ಸಾವು, ವಕ್ಫ್ ವಿವಾದ, ಮುಡಾ ಅಕ್ರಮ, ವಾಲ್ಮೀಕಿ ನಿಗಮ ಹಗರಣ, ಅಬಕಾರಿ ಇಲಾಖೆ ಭ್ರಷ್ಟಾಚಾರ, ಹೀಗೆ ಕಾಂಗ್ರೆಸ್ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಸಾಲು ಸಾಲು ಬಾಣಗಳು ಬಿಜೆಪಿಯ ಬತ್ತಳಿಕೆಯಲ್ಲಿವೆ. ಆದರೆ, ಬಿಜೆಪಿಗೆ ಬಿಸಿ ತುಪ್ಪವಾಗಿರುವ ಯತ್ನಾಳ್, ಸದನದಲ್ಲಿ ಯಾವ ರೀತಿ ಸ್ಪಂದಿಸುತ್ತಾರೆ ಎಂಬುದು ಕಮಲ ಪಡೆಗೆ ಆತಂಕ ತಂದೊಡ್ಡಿದೆ. ಹೀಗಾಗಿ ಕಣಕ್ಕಿಳಿದಿರುವ ವಿಪಕ್ಷ ನಾಯಕ ಆರ್‌.ಅಶೋಕ್, ಯತ್ನಾಳ್‌ರನ್ನೇ ವಿಶ್ವಾಸಕ್ಕೆ ತೆಗೆದುಕೊಂಡು ಸದನದಲ್ಲಿ ಯುದ್ಧಕ್ಕಿಳಿದು ಸರ್ಕಾರಕ್ಕೆ ಖೆಡ್ಡಾ ತೋಡಲು ಸಜ್ಜಾಗಿದ್ದಾರೆ.

ಆಂತರಿಕ ಕಚ್ಚಾಟ ಬದಿಗಿಟ್ಟು ಸದನದಲ್ಲಿ ಬಿಜೆಪಿ ಹೋರಾಟ
ಬಿಜೆಪಿ ಸಿದ್ಧವಾಗಿಟ್ಟುಕೊಂಡಿರುವ ಬಾಣಗಳಿಗೆ ಕಾಂಗ್ರೆಸ್ ನಾಯಕರು ಕೊರೊನಾ ಹಗರಣದ ಪ್ರತ್ಯಸ್ತ್ರ ಸಿದ್ಧ ಮಾಡಿಟ್ಟುಕೊಂಡಿದ್ದಾರೆ. ಅಷ್ಟೇ ಅಲ್ಲ, ವಕ್ಫ್ ವಿಚಾರ ಮುಂದಿಟ್ಟರೆ, ಯತ್ನಾಳ್ ಪ್ರತ್ಯೇಕ ಹೋರಾಟ ಪ್ರಸ್ತಾಪಿಸಿ ತಿವಿಯುವ ಸಾಧ್ಯತೆ ಇದೆ. ಇದನ್ನರಿತ ಬಿಜೆಪಿ ನಾಯಕರು ಯತ್ನಾಳ್‌ರನ್ನೇ ವಿಶ್ವಾಸಕ್ಕೆ ತೆಗೆದುಕೊಂಡು ಸದನದಲ್ಲಿ ಹೋರಾಡಲು ಕೌಂಟರ್ ಪ್ಲ್ಯಾನ್ ಮಾಡಿದ್ದಾರೆ. ಇದಕ್ಕೆ ಯತ್ನಾಳ್ ಕೂಡಾ ಜೈ ಎಂದಿದ್ದಾರೆ. ನಮ್ಮ ಆಂತರಿಕ ಜಗಳ ಏನೇ ಇರಲಿ, ರಾಜ್ಯದ ಹಿತಾಸಕ್ತಿಗಾಗಿ ಆರ್ ಅಶೋಕ್ ನೇತೃತ್ವದಲ್ಲೇ ಹೋರಾಟ ಮಾಡುತ್ತೇವೆ ಎಂದಿದ್ದಾರೆ.

ಯತ್ನಾಳ್ ಸದ್ಯ ತಮ್ಮ ಮಾತಿನ ಬಾಣವನ್ನು ಸರ್ಕಾರದತ್ತ ತಿರುಗಿಸಿದ್ದಾರೆ. ಸರ್ಕಾರದಲ್ಲಿ ಅಭಿವೃದ್ಧಿ ಕುಸಿದಿದೆ. ಇ.ಡಿ.ದು ಏನಾದರೂ ಆದರೆ, ಸಿಎಂ ಸಿದ್ದರಾಮಯ್ಯರದ್ದು ಕೊನೆ ಅಧಿವೇಶನ ಆಗಬಹುದು ಎಂದಿದ್ದಾರೆ. ಇದಕ್ಕೆ ಸಚಿವ ಚಲುವರಾಯಸ್ವಾಮಿ ಕೌಂಟರ್ ಕೊಟ್ಟಿದ್ದು, ಯತ್ನಾಳ್​ಗೆ ಪುರುಸೊತ್ತಿಲ್ಲ ಎಂದು ಕಾಲೆಳೆದಿದ್ದಾರೆ.

ಬಳ್ಳಾರಿಯಲ್ಲಿ ಐವರು ಬಾಣಂತಿಯರ ಸಾವನ್ನು ಪ್ರಸ್ತಾಪಿಸಲು ಬಿಜೆಪಿ ಸಜ್ಜಾಗಿದೆ. ಮೃತರ ಕುಟುಂಬದವರಿಗೆ 1 ಕೋಟಿ ರೂ. ಪರಿಹಾರದ ಜೊತೆಗೆ ಲೋಕಾಯುಕ್ತ ತನಿಖೆಗೆ ಆಗ್ರಹಿಸಿದೆ. ಇದಕ್ಕೆ ಆಡಳಿತಾರೂಢ ಕಾಂಗ್ರೆಸ್ ಕೂಡ ಪ್ರತ್ಯಸ್ತ್ರ ರೆಡಿ ಮಾಡಿಕೊಂಡಿದ್ದು, ಕೇಂದ್ರದ ಲ್ಯಾಬೋರೇಟರಿ ನೀಡಿದ ಸ್ಯಾಂಪಲ್‌ನಿಂದ ಹೀಗಾಯಿತು ಎಂದು ಆರೋಪಿಸಲು ಸಜ್ಜಾಗಿದೆ. 22 ಬ್ಯಾಚ್​ಗಳ IV ಸ್ಯಾಂಪಲ್ಸ್ ರಿಜೆಕ್ಟ್ ಆಗಿತ್ತು. ಆದರೆ, ಇದೇ ಐವಿಗಳು ಕೇಂದ್ರದ ಲ್ಯಾಬೋರೇಟರಿಗಳಲ್ಲಿ ಪಾಸ್ ಆಗಿದ್ದವು ಎಂದು ಕೌಂಟರ್ ಕೊಡಲು ರೆಡಿಯಾಗಿದೆ.

ರೈತರ ಜಮೀನಿನಲ್ಲಿ ವಕ್ಫ್ ಹೆಸರು ಉಲ್ಲೇಖ ವಿಚಾರ ಬಿಜೆಪಿ ನಾಯಕರಿಗೆ ಮತ್ತೊಂದು ಪ್ರಮುಖ ಅಸ್ತ್ರವಾಗಿದೆ. ಇದೇ ವಿಚಾರಕ್ಕೆ ಬಿಜೆಪಿ ನಾಯಕರು ಪ್ರತಿಭಟಿಸಿದ್ದಾರೆ. ಯತ್ನಾಳ್ ಬಣ, ವಿಜಯೇಂದ್ರ ಟೀಂ, ಆರ್.ಅಶೋಕ್ ಸೇರಿ ಬಿಜೆಪಿ ನಾಯಕರು ರೈತರ ಬಳಿ ವಕ್ಫ್ ವಿಚಾರವಾಗಿ ಮಾಹಿತಿ ಸಂಗ್ರಹಿಸಿದ್ದು, ಇದನ್ನ ಸದನದ ಮುಂದಿಡಲಿದ್ದಾರೆ. ಇದಕ್ಕೆ ಕಾಂಗ್ರೆಸ್ ನಾಯಕರು ಪ್ರತ್ಯಸ್ತ್ರ ಸಿದ್ಧಪಡಿಸಿಕೊಂಡಿದ್ದು, ಬಿಜೆಪಿ ಅವಧಿಯಲ್ಲಿಯೇ ರೈತರಿಗೆ ಹೆಚ್ಚು ನೋಟಿಸ್ ನೀಡಲಾಗಿದೆ. ನಿಮ್ಮ ಅವಧಿಯಲ್ಲಿ ನೋಟಿಸ್ ನೀಡಿದಾಗ ಎಲ್ಲಿ ಹೋಗಿದ್ದಿರಿ ಎಂದು ತಿರುಗೇಟು ಕೊಡಲಿದ್ದಾರೆ. ಅಲ್ಲದೇ, ಯಾರ ಅವಧಿಯಲ್ಲಿ ಎಷ್ಟು ರೈತರಿಗೆ ನೋಟಿಸ್ ಎಂಬುದರ ಕುರಿತ ಅಂಕಿ ಅಂಶಗಳನ್ನು ಕೂಡ ಸಿದ್ಧಪಡಿಸಿಕೊಂಡಿದ್ದಾರೆ ಎನ್ನಲಾಗಿದೆ.

ವಾಲ್ಮೀಕಿ ನಿಗಮ, ಮುಡಾ ಅಕ್ರಮ ವಿಷಯವನ್ನು ಬಿಜೆಪಿ ಸದನದಲ್ಲಿ ಅಸ್ತ್ರವನ್ನಾಗಿ ಬಳಸಿಕೊಳ್ಳಲಿದೆ. ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸುವ ಸಾಧ್ಯತೆ ಇದೆ.

ಸರ್ಕಾರಕ್ಕೆ ತಟ್ಟಲಿದೆ 2Aಮೀಸಲಾತಿ ಬಿಸಿ
ಒಟ್ಟಿನಲ್ಲಿ ಜನ ಪ್ರತಿನಿಧಿಗಳ ಮಾತಿನ ಯುದ್ಧಕ್ಕೆ ಬೆಳಗಾವಿಯ ಸುವರ್ಣ ಸೌಧ ಸಾಕ್ಷಿಯಾಗಲಿದೆ. ಸುವರ್ಣ ಸೌಧದಲ್ಲಿ ಎಲ್ಲಾ ರೀತಿಯ ಸಿದ್ದತೆ ಮಾಡಿಕೊಳ್ಳಲಾಗಿದೆ. ಊಟ, ವಸತಿ, ಕಚೇರಿ ಸೇರಿ ಎಲ್ಲಾ ಹಂತದಲ್ಲಿ ಸಿದ್ಧತೆ ನಡೆದಿದೆ. 2,750 ಕೊಠಡಿಗಳಲ್ಲಿ ಸಚಿವರು, ಶಾಸಕರು, ಅಧಿಕಾರಿಗಳಿಗೆ 6 ಕಡೆ ವಸತಿ ವ್ಯವಸ್ಥೆ ಮಾಡಲಾಗಿದೆ. ಬಂದೋಬಸ್ತ್​ಗೆ 6 ಸಾವಿರ ಪೊಲೀಸರನ್ನು ನಿಯೋಜಿಸಲಾಗಿದೆ. ಇದರ ಜೊತೆ 2A ಮೀಸಲಾತಿ ಪ್ರತಿಭಟನೆಯ ಬಿಸಿ ಕೂಡ ಸರ್ಕಾರಕ್ಕೆ ತಟ್ಟುವ ಸಾಧ್ಯತೆ ಇದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿಭೋಜಶಾಲಾ–ಕಮಾಲ್ ಮೌಲಾ ಪ್ರಕರಣ: ಶುಕ್ರವಾರದ ನಮಾಜ್‌ಗೆ ಮುಸ್ಲಿಮರಿಗೆ ಪ್ರತ್ಯೇಕ ಸ್ಥಳ ಕಲ್ಪಿಸಲು ಸುಪ್ರೀಂ ಕೋರ್ಟ್ ನಿರ್ದೇಶನ2022ರಲ್ಲಿ ಉಕ್ರೇನ್ ಮೇಲೆ ಅಣ್ವಸ್ತ್ರ ದಾಳಿ ನಡೆಸದಂತೆ ರಷ್ಯಾವನ್ನು ತಡೆದದ್ದು ಮೋದಿ : ಪೋಲೆಂಡ್ ಸಚಿವರ ಹೇಳಿಕೆಚೊಚ್ಚಲ ಬಾಹ್ಯಾಕಾಶ ಯಾನ ಕೈಗೊಂಡ ಭಾರತೀಯ ಮೂಲದ ಗಗನಯಾತ್ರಿ ಅನಿಲ ಮೆನನ್ಸಾವೂ ಬೇರ್ಪಡಿಸಲಿಲ್ಲ ಇವರಿಬ್ಬರ ಬಂಧವನ್ನು…; ಯಜಮಾನನ ಶವಯಾತ್ರೆಯಲ್ಲೇ ಪ್ರಾಣ ಬಿಟ್ಟ ನಿಷ್ಠಾವಂತ ನಾಯಿ ʼದುಗ್ಗುʼ