Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಅಯೋಧ್ಯೆ, ಕಾಶಿಯಲ್ಲೀಗ ಭಕ್ತ ಸಾಗರ

 

ಅಯೋಧ್ಯೆ: ಮಹಾಕುಂಭ ಮೇಳ ನಡೆಯುತ್ತಿರುವ
ಪ್ರಯುಕ್ತ ಅಯೋಧ್ಯೆಗೆ ಭೇಟಿ ನೀಡುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ, ಹೀಗಾಗಿ, ಅಯೋಧ್ಯೆಯಲ್ಲಿ ಜನರನ್ನು ನಿಯಂತ್ರಿಸಲು ಹೆಚ್ಚಿನ ಭದ್ರತೆ ಕೈಗೊಳ್ಳಲಾಗಿದೆ.

ಪ್ರಯಾಗ್‌ರಾಜ್‌ನಿಂದ ಅಯೋಧ್ಯೆ ಕೇವಲ 160 ಕಿ.ಮೀ ದೂರದಲ್ಲಿರುವ ಕಾರಣ ಕುಂಭದಲ್ಲಿ ಪುಣ್ಯ ಸ್ನಾನ ಮಾಡಿದವರು ಅಯೋಧ್ಯೆ ರಾಮನ ದರ್ಶನಕ್ಕೆ ಬರುತ್ತಿದ್ದಾರೆ.

ಜನ ಸಂದಣಿ ನಿಯಂತ್ರಣಕ್ಕೆ ಅಯೋಧ್ಯೆಯನ್ನು ಆರು ವಲಯಗಳಾಗಿ ಮತ್ತು 11 ಸೆಕ್ಟರ್‌ಗಳಾಗಿ ವಿಭಾಗಿಸಲಾಗಿದೆ. ಅಯೋಧ್ಯೆಗೆ ನಿತ್ಯ ಲಕ್ಷಕ್ಕೂ ಹೆಚ್ಚು ಭಕ್ತರು ಬರುತ್ತಿದ್ದಾರೆ, ಬೆಳಿಗ್ಗೆ ಸರಯೂ ನದಿಯಲ್ಲಿ ಸ್ನಾನ ಮಾಡಿ ಬಾಲರಾಮ, ಹನುಮನ ದರ್ಶನ ಪಡೆಯುತ್ತಿದ್ದಾರೆ. ಭಕ್ತ ಸಾಗರವನ್ನು ನಿಯಂತ್ರಿಸಲು ಮತ್ತು ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲು ಭದ್ರತೆ ಬಿಗಿ ಮಾಡಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಮಧುವನ್ ಕುಮಾರ್ ಸಿಂಗ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಹಿಂದೂಗಳಿಗೆ ಅತೀ ಪುಣ್ಯ ಸ್ಥಳಗಳಲ್ಲಿ ಒಂದಾದ ಕಾಶಿಗೆ ಭೇಟಿ ನೀಡುವವರ ಸಂಖ್ಯೆ ದುಪ್ಪಟ್ಟಾಗಿದೆ. ಮಹಾಕುಂಭಮೇಳಕ್ಕೆ ಬಂದವರು ಕಾಶಿ ವಿಶ್ವನಾಥನ ದರ್ಶನಕ್ಕೆ ಬರುತ್ತಿದ್ದಾರೆ. ಶಿವರಾತ್ರಿಯೂ ಸಮೀಪಿಸುತ್ತಿರುವ ಕಾರಣ ಕಾಶಿಯಲ್ಲೂ ಜನಸಾಗರ ಕಂಡುಬರುತ್ತಿದೆ. ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನಕ್ಕೆ ಸಾಗುತ್ತಿರುವ ದೃಶ್ಯಗಳ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರುನಾಳೆ ಸಿದ್ದರಾಮಯ್ಯ ರಾಜೀನಾಮೆ ?