Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ವಿಷ್ಣುವರ್ಧನ್, ಸರೋಜಾದೇವಿಗೆ ಕರ್ನಾಟಕ ರತ್ನ: ಕುವೆಂಪುಗೆ ಭಾರತ ರತ್ನ ಶಿಫಾರಸು

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ಕಲಾವಿದರಾದ ಸಾಹಸ ಸಿಂಹ ಖ್ಯಾತಿಯ ವಿಷ್ಣುವರ್ಧನ್ ಹಾಗೂ ಬಿ. ಸರೋಜಾದೇವಿ ಅವರಿಗೆ 'ಕರ್ನಾಟಕ ರತ್ನ' ಪ್ರಶಸ್ತಿಯನ್ನು ಮರಣೋತ್ತರವಾಗಿ ನೀಡಲಾಗುವುದು.

ಈ ಬಗ್ಗೆ ಕಾನೂನು ಸಚಿವ ಎಚ್ .ಕೆ. ಪಾಟೀಲ ಮಾಹಿತಿ ನೀಡಿದ್ದಾರೆ.

ಗುರುವಾರ ಸಚಿವ ಸಂಪುಟ ಸಭೆ ಬಳಿಕ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಅವರು ಈ ವಿಷಯವನ್ನು ತಿಳಿಸಿದರು.

ವಿಷ್ಣುವರ್ಧನ್ ಸ್ಮಾರಕಕ್ಕೆ ಜಮೀನು ನೀಡಬೇಕು ಎಂದು ಅವರ ಅಭಿಮಾನಿಗಳು ಮುಖ್ಯಮಂತ್ರಿಯವರಿಗೆ ಮನವಿ ಸಲ್ಲಿಸಿದ್ದರು. ಆದರೆ ಈ ಬಗ್ಗೆ ಸಭೆಯಲ್ಲಿ ಚರ್ಚೆಯಾಗಿಲ್ಲ ಎಂದು ಅವರು ವಿವರಿಸಿದರು.

ವಿಷ್ಣುವರ್ಧನ್ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಕನ್ನಡ ಚಲನಚಿತ್ರ ರಂಗದ ಹಿರಿಯ ನಟಿಯರಾದ ಜಯಮಾಲಾ, ಶ್ರತಿ ಮತ್ತು ಮಾಳವಿಕಾ ಅವಿನಾಶ್ ಅವರು ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದರು.

ರಾಷ್ಟ್ರಕವಿ ಕುವೆಂಪು ಅವರಿಗೆ 'ಭಾರತ ರತ್ನ' ಪ್ರಶಸ್ತಿಯನ್ನು ಮರಣೋತ್ತರವಾಗಿ ನೀಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ಸಭೆಯಲ್ಲಿ ತೀರ್ಮಾನಿಸಿದೆ ಎಂದು ಅವರು ಹೇಳಿದರು.

ಕರ್ನಾಟಕ ಪ್ರದಾನ ಮಾಡುವ ಸಮಾರಂಭದ ಬಗ್ಗೆ ಮುಂದಿನ ದಿನಗಳಲ್ಲಿ ಮಾಹಿತಿ ನೀಡಲಾಗುವುದು ಎಂದು ಅವರು ತಿಳಿಸಿದರು.

ವಿಷ್ಣುವರ್ಧನ್ ಅವರಿಗೆ ಕರ್ನಾಟಕ ರತ್ನ ನೀಡಬೇಕು ಎನ್ನುವುದು ಅಭಿಮಾನಿಗಳ ಕನಸು. ಈ ಬಗ್ಗೆ ಅಭಿಮಾನಿಗಳು ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು. ಇತ್ತೀಚಿಗಷ್ಟೇ ಭಾರತಿ ವಿಷ್ಣುವರ್ಧನ್ ಮತ್ತು ಅನಿರುದ್ಧ ಅವರು ಕರ್ನಾಟಕ ರತ್ನ ನೀಡುವ ಬಗ್ಗೆ ಮನವಿ ಸಲ್ಲಿಸಿದ್ದರು.

ಇದೇ ವರ್ಷದ ಜುಲೈ 14ರಂದು 87ರ ಹರೆಯದಲ್ಲಿ ಸರೋಜಾದೇವಿ ನಿಧನರಾಗಿದ್ದರು. ವಿಷ್ಣುವರ್ಧನ್ 2009ರ ಡಿಸೆಂಬರ್ 30ರಂದು ತಮ್ಮ 59ನೇ ವಯಸ್ಸಿನಲ್ಲಿ ನಿಧನರಾಗಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಸಂಸದ ಶೆಟ್ಟರ್ ಸಭೆವಿದ್ಯಾರ್ಥಿಗಳು ಗಣಕೀಕೃತ ಗ್ರಂಥಾಲಯ ಸದುಪಯೋಗ ಪಡಿಸಿಕೊಳ್ಳಬೇಕು: ಡಾ.ಪ್ರವೀಣ ಹುಲ್ಲೋಳಿಭಾರತ–ಬ್ರಿಟನ್ ಮುಕ್ತ ವ್ಯಾಪಾರ ಒಪ್ಪಂದ ಜಾರಿ : ಯಾವ ವಸ್ತುಗಳು ಅಗ್ಗವಾಗಲಿವೆ ? ಯಾವ್ಯಾವುದು ದುಬಾರಿಯೇ ಇರಲಿವೆ ?ಪ್ರಧಾನಿ ನಿವಾಸದಲ್ಲಿ ಬಿಜೆಪಿ ಉನ್ನತ ನಾಯಕರ ಸಭೆ: ಸಂಪುಟ ಪುನಾರಚನೆ ಕುತೂಹಲಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿ