Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬಿಜೆಪಿ-ಬಿಜೆಡಿ ಮೈತ್ರಿ ಇನ್ನೂ ಅತಂತ್ರ

 

ಭುವನೇಶ್ವರ: ಬಿಜೆಪಿ-ಬಿಜೆಡಿ ನಡುವೆ ಚುನಾವಣಾ ಪೂರ್ವ ಮೈತ್ರಿಯ ಮಾತುಕತೆ ಅಪೂರ್ಣವಾಗಿದ್ದು, ರಾಜ್ಯದ ಎಲ್ಲಾ 147 ವಿಧಾನಸಭೆ ಹಾಗೂ 21 ಲೋಕಸಭೆ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದಾಗಿ ಒಡಿಶಾ ಬಿಜೆಪಿ ಅಧ್ಯಕ್ಷ ಮನಮೋಹನ ಸಮಾಲ್ ಹೇಳಿದರು.

ಶುಕ್ರವಾರ ರಾತ್ರಿ ಹಿರಿಯ ನಾಯಕರೊಂದಿಗೆ ದೆಹಲಿಯಿಂದ ಭುವನೇಶ್ವರಕ್ಕೆ ಆಗಮಿಸಿದ ಅವರು, ಮೈತ್ರಿಯ ಬಗ್ಗೆ ಯಾವುದೇ ಮಾತುಕತೆ ನಡೆದಿಲ್ಲ. ನಾವು ಏಕಾಂಗಿಯಾಗಿ ಚುನಾವಣೆ ಎದುರಿಸುತ್ತೇವೆ ಎಂದು ಹೇಳಿದರು.

ಮುಂದಿನ ಲೋಕಸಭಾ ಹಾಗೂ ವಿಧಾನಸಭಾ ಚುನಾವಣೆಯ ಸಿದ್ಧತೆಗಳ ಬಗ್ಗೆ ಮಾತುಕತೆ ನಡೆಸಲು ನಾವು ದೆಹಲಿಗೆ ತೆರೆಳಿದ್ದೆವು. ಮೈತ್ರಿ ಅಥವಾ ಸೀಟು ಹಂಚಿಕೆ ಬಗ್ಗೆ ಯಾವುದೇ ಚರ್ಚೆಗಳು ನಡೆದಿಲ್ಲ. ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸ ಇದ್ದು, ಎರಡೂ ಚುನಾವಣೆನ್ನು ಬಿಜೆಪಿ ಸ್ವಂತ ಬಲದಲ್ಲಿ ಎದುರಿಸಲಿದೆ.
ಬಿಜೆಪಿ ಜೊತೆ ಚುನಾವಣಾ ಪೂರ್ವ ಮೈತ್ರಿ ಬಗ್ಗೆ ಮಾತುಕತೆ ನಡೆಸಲು ಗುರುವಾರ ವಿಶೇಷ ವಿಮಾನದಲ್ಲಿ ದೆಹಲಿಗೆ ಪ್ರಯಾಣಿಸಿದ್ದ ಬಿಜೆಡಿ ನಾಯಕರಾದ ವಿ.ಕೆ ಪಾಂಡಿಯನ್‌ ಹಾಗೂ ಪ್ರಣಬ್ ಪ್ರಕಾಶ್ ದಾಸ್‌ ಭುವನೇಶ್ವರಕ್ಕೆ ಮರಳಿದ್ದಾರೆ. ಚರ್ಚೆಯ ಫಲಿತಾಂಶದ ಬಗ್ಗೆ ಇವರಿಬ್ಬರೂ ಮೌನ ವಹಿಸಿದ್ದಾರೆ.

ಸೀಟು ಹಂಚಿಕೆ ಸಂಬಂಧ ಉಭಯ ಪಕ್ಷಗಳ ನಡುವಿನ ಮಾತುಕತೆ ಅಪೂರ್ಣವಾಗಿದೆ ಎಂದು ಮೂಲಗಳು ತಿಳಿಸಿವೆ. 147 ಕ್ಷೇತ್ರಗಳ ಪೈಕಿ 100ಕ್ಕೂ ಅಧಿಕ ಸೀಟುಗಳಲ್ಲಿ ಸ್ಪರ್ಧಿಸುವುದಾಗಿ ಬಿಜೆಡಿ ಚರ್ಚೆ ವೇಳೆ ಹೇಳಿತ್ತು. ಇದನ್ನು ಬಿಜೆ‍ಪಿ ಒಪ್ಪಿಕೊಂಡಿಲ್ಲ ಎನ್ನಲಾಗಿದೆ.

ಸದ್ಯ ಬಿಜೆಡಿಗೆ 114 ಶಾಸಕರ ಬಲ ಇದ್ದು, 112 ಕ್ಷೇತ್ರಗಳನ್ನು ಬಿಟ್ಟುಕೊಡಬೇಕು ಎಂಬ ಬೇಡಿಕೆಯನ್ನು ಚರ್ಚೆ ವೇಳೆ ಮುಂದಿಟ್ಟಿತ್ತು.

‘ಬಿಜೆಡಿಯು ಸುಮಾರು ಶೇ 75ರಷ್ಟು ಸೀಟುಗಳಿಗೆ ಬೇಡಿಕೆ ಇಟ್ಟಿದೆ. ಇದನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಇದು ರಾಜ್ಯದಲ್ಲಿ ಪಕ್ಷಕ್ಕೆ ಋಣಾತ್ಮಕವಾಗಿ ಪರಿಣಮಿಸಲಿದೆ’ ಎಂದು ಬಿಜೆಪಿ ನಾಯಕರೊಬ್ಬರು ಹೇಳಿದ್ದಾರೆ.

21 ಲೋಕಸಭಾ ಕ್ಷೇತ್ರಗಳ ಪೈಕಿ 14ಕ್ಕೆ ಬಿಜೆಪಿ ಬೇಡಿಕೆ ಇಟ್ಟಿದೆ. ಇದನ್ನು ಬಿಜೆಡಿ ತಿರಸ್ಕರಿಸಿದೆ ಎಂದು ತಿಳಿದು ಬಂದಿದೆ. 2019ರ ಚುನಾವಣೆಯಲ್ಲಿ 12 ಕ್ಷೇತ್ರಗಳಲ್ಲಿ ಬಿಜೆಡಿ ಹಾಗೂ 8 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಿತ್ತು.

10ಕ್ಕೂ ಕಡಿಮೆ ಸೀಟುಗಳಲ್ಲಿ ಸ್ಪರ್ಧೆ ಮಾಡುವುದು ಆತ್ಮಾಹುತಿ ಮಾಡಿಕೊಂಡಂತೆ ಎಂದು ಬಿಜೆಡಿಯ ಹಿರಿಯ ನಾಯಕರೊಬ್ಬರು ಹೇಳಿದರು.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರುನಾಳೆ ಸಿದ್ದರಾಮಯ್ಯ ರಾಜೀನಾಮೆ ?