Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕೊನೆಗೂ ಯತ್ನಾಳಗೆ ಬಿಗ್ ಶಾಕ್ ನೀಡಿದ ಬಿಜೆಪಿ

ಬೆಂಗಳೂರು: ನಾಯಕತ್ವಕ್ಕೆ ಮುಜುಗರ ಉಂಟು ಮಾಡುವ ಹೇಳಿಕೆಗಳನ್ನು ನೀಡುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ (Basanagouda Patil Yatnal) ಅವರಿಗೆ ಕೇಂದ್ರ ಬಿಜೆಪಿ ಶಿಸ್ತು ಸಮಿತಿ ಶೋಕಾಸ್ ನೋಟಿಸ್ ಜಾರಿ ಮಾಡಿದೆ.

ಕೇಂದ್ರ ಬಿಜೆಪಿ ಶಿಸ್ತು ಸಮಿತಿಯ ಸದಸ್ಯ ಕಾರ್ಯದರ್ಶಿ ಓಂ ಪಾಠಕ್ ಅವರು ಬಸವರಾಜ ಯತ್ನಾಳ ಅವರಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿದ್ದಾರೆ. ಹತ್ತು ದಿನಗಳೊಳಗೆ ಸ್ಪಷ್ಟೀಕರಣ ಕೊಡದಿದ್ದಲ್ಲಿ ನಿಮ್ಮ ತಪ್ಪು ನೀವೇ ಒಪ್ಪಿಕೊಂಡಂತೆ. ನಾವು ಕ್ರಮಕ್ಕೆ ಮುಂದಾಗಲು ನಿಮ್ಮ ಒಪ್ಪಿಗೆ ಇದೆಯೆಂದು ಭಾವಿಸುತ್ತೇವೆ. ಇದೇ ವಿಷಯವಾಗಿ ಈ ಹಿಂದೆ ಹಲವು ಬಾರಿ ನಿಮಗೆ ಎಚ್ಚರಿಕೆ ನೀಡಲಾಗಿತ್ತು, ಆ ವೇಳೆ ಮುಂದೆ ಈ ರೀತಿಯ ತಪ್ಪಾಗದಂತೆ ನೋಡಿಕೊಳ್ಳುವುದಾಗಿ ಹೇಳಿದ್ದೀರಿ, ಆದರೆ ಯಥಾ ಪ್ರಕಾರ ಇದು ಮುಂದುವರಿದಿದೆ, ಹೀಗಾಗಿ ಇದಕ್ಕೆ ವಿವರಣೆ ನೀಡಬೇಕೆಂದು ನೋಟಿಸ್‌ನಲ್ಲಿ ಸೂಚಿಸಿದ್ದಾರೆ.

https://twitter.com/BasanagoudaBJP/status/1863432659663241522?ref_src=twsrc%5Etfw%7Ctwcamp%5Etweetembed%7Ctwterm%5E1863432659663241522%7Ctwgr%5E7802c03f8402bd6a7d2773da4fd86caf1c9d0384%7Ctwcon%5Es1_&ref_url=https%3A%2F%2Fpublictv.in%2Fshow-cause-notice-issued-by-central-bjp-disciplinary-committee-to-basanagouda-patil-yatnal%2F
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ನೀಡಿದ್ದ ಬಹಿರಂಗ ಹೇಳಿಕೆಗಳ ಕುರಿತು ಈಗ ಹೈಕಮಾಂಡ್ ಕ್ರಮಕ್ಕೆ ಮುಂದಾಗಿದೆ. ಶೋಕಾಸ್ ನೊಟೀಸ್ (Show Cause Notice) ಗೆ ತಾನು ಉತ್ತರ ನೀಡುವುದಾಗಿ ಯತ್ನಾಳ್ ಹೇಳಿದ್ದಾರೆ. ತನಗೆ ನೀಡಿರುವ ಶೋಕಾಸ್‌ ನೋಟಿಸ್‌ ಅನ್ನು ಎಕ್ಸ್‌ನಲ್ಲಿ ಹಂಚಿಕೊಂಡಿರುವ ಅವರು ತಾನು ನೋಟಿಸ್‌ಗೆ ಉತ್ತರ ಕೊಡುತ್ತೇನೆ. ಅಲ್ಲದೆ, ವರಿಷ್ಠರ ಮುಂದೆ ರಾಜ್ಯ ಬಿಜೆಪಿಯ ವಸ್ತುಸ್ಥಿತಿಯನ್ನೂ ಮುಂದಿಡುತ್ತೇನೆ ಎಂದು ಹೇಳಿದ್ದಾರೆ.
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಜ್ಯ ಬಿಜೆಪಿಯಲ್ಲಿ ಅನೇಕರು ಒತ್ತಾಯಿಸಿದ್ದರು. ಜೆಪಿಸಿ ಅಧ್ಯಕ್ಷ ಜಗದಾಂಬಿಕ ಪಾಲ್ ಅವರಿಗೆ ವಕ್ಫ್ ವಿರೋಧಿ ಜನಜಾಗೃತಿ ವರದಿ ಸಲ್ಲಿಸಲು ಭಾನುವಾರವೇ ಯತ್ನಾಳ್ ದೆಹಲಿಗೆ ತೆರಳಿದ್ದಾರೆ ಎನ್ನಲಾಗಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಸಂಸದ ಶೆಟ್ಟರ್ ಸಭೆವಿದ್ಯಾರ್ಥಿಗಳು ಗಣಕೀಕೃತ ಗ್ರಂಥಾಲಯ ಸದುಪಯೋಗ ಪಡಿಸಿಕೊಳ್ಳಬೇಕು: ಡಾ.ಪ್ರವೀಣ ಹುಲ್ಲೋಳಿಭಾರತ–ಬ್ರಿಟನ್ ಮುಕ್ತ ವ್ಯಾಪಾರ ಒಪ್ಪಂದ ಜಾರಿ : ಯಾವ ವಸ್ತುಗಳು ಅಗ್ಗವಾಗಲಿವೆ ? ಯಾವ್ಯಾವುದು ದುಬಾರಿಯೇ ಇರಲಿವೆ ?ಪ್ರಧಾನಿ ನಿವಾಸದಲ್ಲಿ ಬಿಜೆಪಿ ಉನ್ನತ ನಾಯಕರ ಸಭೆ: ಸಂಪುಟ ಪುನಾರಚನೆ ಕುತೂಹಲಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿ