Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ವಕ್ಫ್ ಆಸ್ತಿ ವಿವಾದ: ನೈಜ ವರದಿ ಸಂಗ್ರಹಿಸಲು 3 ತಂಡ ರಚಿಸಿದ ಬಿಜೆಪಿ

ಬೆಂಗಳೂರು: ರಾಜ್ಯಾದ್ಯಂತ ರೈತರು ಹಾಗೂ ಮಠಗಳ ಪಹಣಿಯಲ್ಲಿ ಸರ್ಕಾರದಿಂದ ವಕ್ಫ್ ಆಸ್ತಿ ಎಂದು ನಮೂದಿಸಿರುವುದರ ನೈಜ ವರದಿಯನ್ನು ಸಂಗ್ರಹಿಸಲು ಪ್ರತಿಪಕ್ಷ ಬಿಜೆಪಿಯಿಂದ ‘ನಮ್ಮ ಭೂಮಿ- ನಮ್ಮ ಹಕ್ಕು’ ಘೋಷವಾಕ್ಯದಡಿ ಮೂರು ತಂಡಗಳನ್ನು ರಚಿಸಲಾಗಿದೆ. ಈ ತಂಡಗಳು ಆಯಾಯ ಜಿಲ್ಲಾ ಕೇಂದ್ರಗಳಿಗೆ ಭೇಟಿ ನೀಡಿ ಸರ್ಕಾರದಿಂದ ವಕ್ಫ್ ಆಸ್ತಿ ಎಂದು ನಮೂದಿಸಿರುವುದರ ಬಗ್ಗೆ ವಿಸ್ಕೃತ ವರದಿ ಸಂಗ್ರಹಿಸಲಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ರಚನೆಯಾದ ಮೊದಲ ತಂಡಕ್ಕೆ ಪಿ. ರಾಜೀವ್ ಸಂಚಾಲಕರಾಗಿದ್ದು, ಅರುಣ ಶಹಾಪುರ, ಹರೀಶ ಪೂಂಜಾ ಮತ್ತು ಡಾ. ಶೈಲೇಂದ್ರ ಬೆಲ್ಲಾಳ ಸಂಯೋಜಕರಾಗಿದ್ದಾರೆ. ಪ್ರಲ್ಹಾದ ಜೋಶಿ, ಜಗದೀಶ ಶೆಟ್ಟರ್, ಭಗವಂತ ಖೂಬಾ, ಡಾ. ಸಿ.ಎನ್. ಅಶ್ವತ್ಥನಾರಾಯಣ, ಮುರುಗೇಶ ನಿರಾಣಿ, ಬಿ. ಶ್ರೀರಾಮುಲು, ರಮೇಶ ಜಾರಕಿಹೊಳಿ, ಈರಣ್ಣ ಕಡಾಡಿ, ಹಾಲಪ್ಪ ಆಚಾರ್, ಸುನೀಲ ವಲ್ಯಾಪುರೆ ಮತ್ತು ವಕೀಲ ಎಂ.ಜಿ. ಜಿರಲಿ ಇದ್ದಾರೆ.

 

ಈ ತಂಡವು ಬೀದರ, ಕಲಬುರಗಿ, ಯಾದಗಿರಿ, ರಾಯಚೂರು,ಕೊಪ್ಪಳ, ಗದಗ, ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡು ಮಾಹಿತಿ ಸಂಗ್ರಹಿಸಲಿದೆ.

ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ ನೇತೃತ್ವದಲ್ಲಿ ಎರಡನೇ ತಂಡ ರಚನೆಯಾಗಿದ್ದು, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಬಸವರಾಜ ಬೊಮ್ಮಾಯಿ, ಬಸನಗೌಡ ಪಾಟೀಲ ಯತ್ನಾಳ, ರಾಜೂಗೌಡ, ಎಂ.ಪಿ. ರೇಣುಕಾಚಾರ್ಯ, ಎನ್. ಮಹೇಶ, ದೊಡ್ಡನ ಗೌಡ ಪಾಟೀಲ, ಭಾರತಿ ಶೆಟ್ಟಿ, ಡಾ. ಬಿ. ಸಿ. ನವೀನಕುಮಾರ ಮತ್ತು ವಕೀಲ ವಸಂತಕುಮಾರ ಇದ್ದಾರೆ. ಇದಕ್ಕೆ ಪ್ರೀತಂಗೌಡ ಸಂಚಾಲಕರಾಗಿದ್ದು, ವಿನಯ ಬಿದರೆ, ಡಿ.ಎಸ್. ಅರುಣ , ಲಕ್ಷ್ಮಿ ಅಶ್ವಿನಿಗೌಡ ಸಂಯೋಜಕರಾಗಿದ್ದಾರೆ.
ಈ ತಂಡವು ಚಾಮರಾಜನಗರ, ಮೈಸೂರು ನಗರ ಹಾಗೂ ಗ್ರಾಮಾಂತರ, ಮಂಡ್ಯ, ಹಾಸನ, ಕೊಡಗು, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳಲಿದೆ.

ವಿಧಾನ ಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ​ ನೇತೃತ್ವದಲ್ಲಿ ಇನ್ನೊಂದು ತಂಡ ರಚನೆಯಾಗಿದ್ದು, ಡಿ.ವಿ. ಸದಾನಂದಗೌಡ, ಕೇಂದ್ರ ಸಚಿವ ವಿ. ಸೋಮಣ್ಣ, ಸಿ.ಟಿ. ರವಿ, ನಳಿನಕುಮಾರ ಕಟೀಲು, ಅರವಿಂದ ಲಿಂಬಾವಳಿ, ಎಸ್​ ಮುನಿಸ್ವಾಮಿ, ಅರಗ ಜ್ಞಾನೇಂದ್ರ, ಬಿ.ಸಿ. ಪಾಟೀಲ, ವೈ.ಎ. ನಾರಾಯಣಸ್ವಾಮಿ, ವಿವೇಕ ಸುಬ್ಬಾರೆಡ್ಡಿ ಸದ್ಯರಾಗಿದ್ದಾರೆ. ವಿ. ಸುನೀಲಕುಮಾರ-ಸಂಚಾಲಕರು, ಅಶ್ವತ್ಥನಾತರಾಯಣ- ಸಂಯೋಜಕರು, ತಮ್ಮೇಶ ​ಗೌಡ, ಅಂಬಿ ಹುಲಿನಾಯ್ಕರ್​ ಸಂಯೋಜಕರಾಗಿದ್ದಾರೆ.
ಈ ತಂಡವು ಬೆಂಗಳೂರು ಗ್ರಾಮಾತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಹಾವೇರಿ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಸಂಸದ ಶೆಟ್ಟರ್ ಸಭೆವಿದ್ಯಾರ್ಥಿಗಳು ಗಣಕೀಕೃತ ಗ್ರಂಥಾಲಯ ಸದುಪಯೋಗ ಪಡಿಸಿಕೊಳ್ಳಬೇಕು: ಡಾ.ಪ್ರವೀಣ ಹುಲ್ಲೋಳಿಭಾರತ–ಬ್ರಿಟನ್ ಮುಕ್ತ ವ್ಯಾಪಾರ ಒಪ್ಪಂದ ಜಾರಿ : ಯಾವ ವಸ್ತುಗಳು ಅಗ್ಗವಾಗಲಿವೆ ? ಯಾವ್ಯಾವುದು ದುಬಾರಿಯೇ ಇರಲಿವೆ ?ಪ್ರಧಾನಿ ನಿವಾಸದಲ್ಲಿ ಬಿಜೆಪಿ ಉನ್ನತ ನಾಯಕರ ಸಭೆ: ಸಂಪುಟ ಪುನಾರಚನೆ ಕುತೂಹಲಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿ