Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿ ಬಳಿ ಬಿಜೆಪಿ ವಿಶೇಷ ಕಾರ್ಯಕಾರಿಣಿ ಸಭೆ ಸಂಪನ್ನ

ಬೆಳಗಾವಿ : ಜಿಲ್ಲೆಯ ಅಭಿವೃದ್ಧಿಗೆ ವಿಶೇಷ ಯೋಜನೆ ತರಲು ಪ್ರಯತ್ನ ನಡೆಸುವುದಾಗಿ ಸಂಸದ ಹಾಗೂ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಹೇಳಿದರು. ಮುತಗಾದಲ್ಲಿ ಭಾರತೀಯ ಜನತಾ ಪಾರ್ಟಿ ಬೆಳಗಾವಿ ಗ್ರಾಮಂತರ ಜಿಲ್ಲೆ ವತಿಯಿಂದ ನಡೆದ ವಿಶೇಷ ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದರು.

ಬೆಳಗಾವಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ಶ್ರಮಿಸುತ್ತೇನೆ ಈಗಾಗಲೇ ಹಲವು ಅಭಿವೃದ್ಧಿ ಕಾರ್ಯಗಳು ಯೋಜನೆಗಳ ಬಗ್ಗೆ ಕೇಂದ್ರದ ಮಂತ್ರಿಗಳ ಜೊತೆ ಭೇಟಿಯಾಗಿ ಮಾತನಾಡಿದ್ದೇನೆ. ಜಿಲ್ಲೆಗೆ ಹೊಸ ಯೋಜನೆಗಳನ್ನು ತರಲು ಪ್ರಾಮಾಣಿಕ ಪ್ರಯತ್ನವನ್ನು ಮಾಡುತ್ತೇನೆ ಎಂದು ಹೇಳಿದರು.
ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದರೂ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಎನ್.ಡಿ.ಎ ಮೈತ್ರಿ ಕೂಟಕ್ಕೆ 19 ಲೋಕಸಭಾ ಕ್ಷೇತ್ರದಲ್ಲಿ ಗೆಲುವು ಸಾಧಿಸಿದೆ. ರಾಜ್ಯ ಕಾಂಗ್ರೆಸ್ ಸರ್ಕಾರದ ದುರಾಡಳಿತಕ್ಕೆ ಜನ ತಕ್ಕ ಪಾಠ ಕಲಿಸಿದ್ದಾರೆ ಎಂದು ಹೇಳಿದರು.

ಭಾರತೀಯ ಜನತಾ ಪಾರ್ಟಿ ಬೆಳಗಾವಿ ಗ್ರಾಮಾಂತರ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಅಧಿಕಾರಕ್ಕೆ ಬೇಸತ್ತು ಜನತೆ ಲೋಕಸಭಾ ಚುನಾವಣೆಯಲ್ಲಿ ಎನ್.ಡಿ.ಎ ಅಭ್ಯರ್ಥಿಗಳಿಗೆ ಮತ ಹಾಕಿ ಹೆಚ್ಚು ಸ್ಥಾನಗಳಲ್ಲಿ ಗೆಲ್ಲಿಸಿದ್ದಾರೆ. ರಾಜ್ಯದಲ್ಲಿ ಭ್ರಷ್ಟಾಚಾರ ಮಿತಿ ಮೀರುತ್ತಿದೆ, ಕಾನೂನು ಬಾಹಿರ ಚಟುವಟಿಕೆ ಹೆಚ್ಚುತ್ತಿದೆ ಮುಡಾ, ಎಸ್.ಟಿ ನಿಗಮದಂತಹ ಹಗರಣಗಳ ಕಾರಣಿಕರ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕೆಂದು ಹೇಳಿದರು.
ರಾಜ್ಯ ಉಪಾಧ್ಯಕ್ಷ ಮುರುಗೇಶ್ ನಿರಾಣಿ ಮಾತನಾಡಿ, ಕಾರ್ಯಕರ್ತರ ಶಕ್ತಿ, ಪರಿಶ್ರಮದಿಂದ ಬೆಳಗಾವಿ ಲೋಕಸಭಾ ಚುನಾವಣೆಯಲ್ಲಿ ಜಗದೀಶ್ ಶೆಟ್ಟರ್ ಅವರ ಗೆಲುವಾಗಿದೆ.ಅಧಿಕಾರದ ಮದ, ಹಣ ಬಲದ ಮೇಲೆ ಮೆರೆಯುತ್ತಿದ್ದವರಿಗೆ ಜಿಲ್ಲೆಯ ಜನತೆ ತಕ್ಕ ಪಾಠ ಕಲಿಸಿದ್ದಾರೆ ಎಂದು ಹೇಳಿದರು.

ಬಿಜೆಪಿ ರಾಜ್ಯ ಉಪಾಧ್ಯಕ್ಷ ಅನಿಲ್ ಬೆನಕೆ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ,ಮಾಜಿ ಸಂಸದೆ ಮಂಗಲ ಅಂಗಡಿ, ಮಾಜಿ ವಿಧಾನ ಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ, ಮಾಜಿ ಶಾಸಕರಾದ ಸಂಜಯ ಪಾಟೀಲ, ಜಗದೀಶ ಮೆಟಗುಡ್ಡ, ಮಹಾಂತೇಶ ದೊಡಗೌಡರ, ವಿಶ್ವನಾಥ ಪಾಟೀಲ , ಅರವಿಂದ ಪಾಟೀಲ, ನಾಯಕರಾದ ರತ್ನಾ ಮಾಮನಿ, ಲಕ್ಷ್ಮಣ ತಪಸಿ , ಸಂದೀಪ ದೇಶಪಾಂಡೆ, ಧನಶ್ರೀ ದೇಸಾಯಿ,ಕೆ.ವಿ.ಪಾಟೀಲ, ಎಫ್.ಎಸ್.ಸಿದ್ದನಗೌಡರ್, ನಿತಿನ್ ಚೌಗಲೆ, ಈರಣ್ಣ ಅಂಗಡಿ, ಯಲ್ಲೇಶ್ ಕೋಲಕಾರ, ಮಹೇಶ್ ಮೋಹಿತೆ, ಮಲ್ಲಿಕಾರ್ಜುನ ಮಾದಮ್ಮನವರ, ಶಿವಾನಂದ್ ಹಣುಮಸಾಗರ, ಸಚಿನ್ ಕಡಿ, ಜಗದೀಶ್ ಬೂದಿಹಾಳ,ಬಾಳೇಶ ಚವ್ವನ್ನವರ ಹಾಗೂ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿಭೋಜಶಾಲಾ–ಕಮಾಲ್ ಮೌಲಾ ಪ್ರಕರಣ: ಶುಕ್ರವಾರದ ನಮಾಜ್‌ಗೆ ಮುಸ್ಲಿಮರಿಗೆ ಪ್ರತ್ಯೇಕ ಸ್ಥಳ ಕಲ್ಪಿಸಲು ಸುಪ್ರೀಂ ಕೋರ್ಟ್ ನಿರ್ದೇಶನ2022ರಲ್ಲಿ ಉಕ್ರೇನ್ ಮೇಲೆ ಅಣ್ವಸ್ತ್ರ ದಾಳಿ ನಡೆಸದಂತೆ ರಷ್ಯಾವನ್ನು ತಡೆದದ್ದು ಮೋದಿ : ಪೋಲೆಂಡ್ ಸಚಿವರ ಹೇಳಿಕೆಚೊಚ್ಚಲ ಬಾಹ್ಯಾಕಾಶ ಯಾನ ಕೈಗೊಂಡ ಭಾರತೀಯ ಮೂಲದ ಗಗನಯಾತ್ರಿ ಅನಿಲ ಮೆನನ್ಸಾವೂ ಬೇರ್ಪಡಿಸಲಿಲ್ಲ ಇವರಿಬ್ಬರ ಬಂಧವನ್ನು…; ಯಜಮಾನನ ಶವಯಾತ್ರೆಯಲ್ಲೇ ಪ್ರಾಣ ಬಿಟ್ಟ ನಿಷ್ಠಾವಂತ ನಾಯಿ ʼದುಗ್ಗುʼ