Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿ ಸೇರಿದಂತೆ ರಾಜ್ಯದ ನಾಲ್ಕು ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ ಸಂದೇಶ

ಬೆಳಗಾವಿ : ಕಿಡಿಗೇಡಿಗಳು ರಾಜ್ಯದ ಪ್ರಮುಖ ನಾಲ್ಕು ವಿಮಾನ ನಿಲ್ದಾಣಗಳ ಭದ್ರತೆಗೆ ಸವಾಲು ಒಡ್ಡುವ ಬೆದರಿಕೆ ಹಾಕಿದ್ದಾರೆ. ಬೆಳಗಾವಿ, ಹುಬ್ಬಳ್ಳಿ, ಮಂಗಳೂರು ಮತ್ತು ಬೆಂಗಳೂರು ವಿಮಾನ ನಿಲ್ದಾಣಗಳ ನಿರ್ದೇಶಕರಿಗೆ ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಫೋಟಿಸುವ ಕುರಿತು ಭಾನುವಾರ ಮಧ್ಯಾಹ್ನ ಇ-ಮೇಲ್ ಮೂಲಕ ಬೆದರಿಕೆ ಸಂದೇಶ ರವಾನೆಯಾಗಿದೆ.

ವಿಮಾನ ನಿಲ್ದಾಣ ಸೇರಿದಂತೆ ಶಾಲಾ ಕಾಲೇಜುಗಳಿಗೆ ಆಗಾಗ ಬಾಂಬ್ ಬೆದರಿಕೆ ಬರುವುದು ಹೊಸದೇನಲ್ಲ ಆದರೆ ಇದೀಗ ರಾಜ್ಯದ ಪ್ರಮುಖ ನಾಲ್ಕು ವಿಮಾನ ನಿಲ್ದಾಣಗಳಿಗೆ ಬೆದರಿಕೆ ಹಾಕಲಾಗಿದೆ ಅದರಲ್ಲೂ ಇ-ಮೇಲ್ ಸಂದೇಶದ ಮೂಲಕ ಬಾಂಬ್ ಸ್ಪೋಟಿಸುವ ಬೆದರಿಕೆ ಬಂದಿರುವುದರಿಂದ ಈ ನಾಲ್ಕು ವಿಮಾನ ನಿಲ್ದಾಣಗಳನ್ನು ಫುಲ್ ಅಲರ್ಟ್ ಮಾಡಲಾಗಿದೆ.

 

ರಾಜ್ಯದ ನಾಲ್ಕು ವಿಮಾನ ನಿಲ್ದಾಣಗಳಿಗೆ roadkill kyo ಹೆಸರಿನ ಇ-ಮೇಲ್ ಐಡಿಯಿಂದ ಬೆದರಿಕೆ ಸಂದೇಶ ಬಂದಿದೆ.

ಮುಂಜಾಗ್ರತಾ ಕ್ರಮವಾಗಿ ನಿಲ್ದಾಣಗಳಲ್ಲಿ ಬಿಗಿ ಭದ್ರತೆ ಹೆಚ್ಚಿಸಲಾಗಿದೆ.

ವಿಮಾನ ನಿಲ್ದಾಣದ ಆವರಣ ಪ್ರವೇಶಿಸುವ ಪ್ರತಿಯೊಬ್ಬ ಪ್ರಯಾಣಿಕರನ್ನು ಮತ್ತು ಸಾರ್ವಜನಿಕರನ್ನು ತೀವ್ರ ತಪಾಸಣೆಗೆ ಒಳಪಡಿಸಲಾಗುತ್ತಿದೆ. ಬಾಂಬ್ ನಿಷ್ಕ್ರಿಯ ದಳ, ಶ್ವಾನ ದಳ ಸಿಬ್ಬಂದಿ, ಪೊಲೀಸ್ ಅಧಿಕಾರಿಗಳು, ಆಂತರಿಕ ಭದ್ರತಾ ಸಿಬ್ಬಂದಿ ಮತ್ತು ಗುಪ್ತಚರ ಇಲಾಖೆ ಸಿಬ್ಬಂದಿ ನಿಗಾ ವಹಿಸಿದ್ದಾರೆ.

ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ
ಹುಬ್ಬಳ್ಳಿ ವಿಮಾನ ನಿಲ್ದಾಣದ ನಿರ್ದೇಶಕ ರೂಪೇಶಕುಮಾರ ಶ್ರೀಪಾದ ಅವರು,
ಬೆದರಿಕೆ ಬಂದ ತಕ್ಷಣ ಬಾಂಬ್ ತಪಾಸಣಾ ದಳ ಮತ್ತು ಭದ್ರತಾ ಸಿಬ್ಬಂದಿ ಜತೆ ಸಭೆ ನಡೆಸಿ, ನಿಲ್ದಾಣಕ್ಕೆ ಬಿಗಿ ಭದ್ರತೆ ಒದಗಿಸಿದ್ದೇವೆ. ವಿಮಾನ ನಿಲ್ದಾಣದ ಸುತ್ತಮುತ್ತಲಿನ ಸುಮಾರು 50-60 ಎಕರೆ ಪ್ರದೇಶವನ್ನು ಭದ್ರತಾ ಸಿಬ್ಬಂದಿ ಪರಿಶೀಲಿಸಿದ್ದಾರೆ. ಸಂದೇಶ ಬಂದ ಇ-ಮೇಲ್ ಐಡಿಯ ಮಾಹಿತಿಯನ್ನು ಪೊಲೀಸರಿಗೆ ನೀಡಿ, ಪ್ರಕರಣ ದಾಖಲಿಸುತ್ತೇವೆ ಎಂದು ತಿಳಿಸಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕನ್ನಡ ಸಾಹಿತ್ಯ ಪರಿಷತ್ ಸರ್ಜರಿಗೆ ಹಾರ್ಟ್ ಸರ್ಜನ್ ಬೆಳಗಾವಿ ಮಣ್ಣಿನ ಮಗಳು ಡಾ.ವಿಜಯಲಕ್ಷ್ಮೀ ಬಾಳೆಕುಂದ್ರಿ ಸಜ್ಜು ಚುನಾವಣೆ ಸ್ಪರ್ಧೆಗೆ ನಿರ್ಧಾರ | ಗೆದ್ದರೆ ಪ್ರಥಮ ಅಧ್ಯಕ್ಷೆ, ತೋಂಟದಾರ್ಯ ಮಠದ ಜಗದ್ಗುರುಗಳು ಬೆಂಬಲಸುಪ್ರೀಂ ಕೋರ್ಟಿನಲ್ಲಿರುವ ಗಡಿ ವಿವಾದ ಪ್ರಕರಣದ ತ್ವರಿತ ವಿಚಾರಣೆಗೆ ಮಹಾರಾಷ್ಟ್ರ ಸರಕಾರ ಅರ್ಜಿ ಸಲ್ಲಿಸಿರುವ ಕುರಿತು ಪ್ರತಿಕ್ರಿಯಿಸಿದ ಅಶೋಕ ಚಂದರಗಿಅಯೋಧ್ಯೆ ರಾಮಮಂದಿರದ ಮೊದಲ ಸಿಇಒ ಆಗಿ ನಿವೃತ್ತ ಏರ್‌ ಮಾರ್ಷಲ್‌ ಜೀತೇಂದ್ರ ಮಿಶ್ರ ನೇಮಕಸುಪ್ರೀಂ ಕೋರ್ಟಿನಲ್ಲಿರುವ ಗಡಿ ವಿವಾದ ಪ್ರಕರಣದ ತ್ವರಿತ ವಿಚಾರಣೆಗೆ ಮಹಾರಾಷ್ಟ್ರ ಸರಕಾರ ಅರ್ಜಿ ಸಲ್ಲಿಸಿರುವ ಕುರಿತು ಪ್ರತಿಕ್ರಿಯಿಸಿದ ಅಶೋಕ ಚಂದರಗಿ8 ಜನ ಮೊಬೈಲ್ ಕಳ್ಳರನ್ನು ಬಂಧಿಸಿದ ಕಟಕೋಳ ಪೊಲೀಸರು200 ವರ್ಷಗಳ ಬಳಿಕ ಕುಟುಂಬದಲ್ಲಿ ಹೆಣ್ಣು ಮಗುವಿನ ಜನನ : ರಥದಲ್ಲಿ ಕುಳ್ಳಿರಿಸಿ ಮೆರವಣಿಗೆ ಮೂಲಕ ಮನೆಗೆ ಕರೆತಂದ ಕುಟುಂಬ !ನಕಲಿ ದಾಖಲೆ ಸೃಷ್ಟಿಸಿ ಜಮೀನು ಮಾರಾಟ ಮಾಡಿದ್ದ ಅಜ್ಜಿಯ ಬಂಧನಪುತ್ರಿಯರ ಶಿಕ್ಷಣಕ್ಕಾಗಿ ಸೀರೆಯುಟ್ಟು ಬರಿಗಾಲಿನಲ್ಲಿ ಓಡಿ ʼಮ್ಯಾರಥಾನ್‌ʼನಲ್ಲಿ ಮೊದಲ ಸ್ಥಾನ ಪಡೆದ 47 ವರ್ಷದ ತಾಯಿ !ರಷ್ಯಾ ಅತಿಹೆಚ್ಚು ತೈಲ ಉತ್ಪಾದನೆ ಮಾಡುತ್ತಿದ್ರೂ ಈಗ ಅದಕ್ಕೇ ದಾಖಲೆ ಪ್ರಮಾಣದಲ್ಲಿ ಪೆಟ್ರೋಲ್ ಪೂರೈಸುತ್ತಿರುವ ಭಾರತ ! ಕಾರಣ ?ವೈಶ್ಯ ಸಮಾಜದ ಏಕತೆ, ಪ್ರಗತಿಗೆ ಸೆ.6ರಂದು ಬೆಳಗಾವಿಯಲ್ಲಿ ವೈಶ್ಯ ಸಮ್ಮೇಳನ