Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

BREAKING ಕೊನೆಗೂ ಮತ್ತೊಂದು ಟಿಕೆಟ್ ಘೋಷಣೆ

ಬೆಂಗಳೂರು: ಶಿಗ್ಗಾವಿ ವಿಧಾನಸಭಾ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಯಾಸಿರ ಅಹಮದ್ ಖಾನ್ ಪಠಾಣ ಅವರಿಗೆ ಕಾಂಗ್ರೆಸ್ ಪಕ್ಷ ಟಿಕೆಟ್ ನೀಡಿದೆ.

ಯಾಸಿರ್ ಅಹ್ಮದ್ ಖಾನ್ ಪಠಾಣ್ ಅವರನ್ನು ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಪಕ್ಷದ ವರಿಷ್ಠರು ಆಯ್ಕೆ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು.

ಚನ್ನಪಟ್ಟಣ ಕ್ಷೇತ್ರಕ್ಕೆ ನಿಖಿಲ್ ಕುಮಾರಸ್ವಾಮಿಯವರನ್ನು ಜೆಡಿಎಸ್ ಅಭ್ಯರ್ಥಿಯಾಗಿ ಆಯ್ಕೆ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಚನ್ನಪಟ್ಟಣ ಕ್ಷೇತ್ರಕ್ಕೆ ಬಿಜೆಪಿ ಅಥವಾ ಜೆಡಿಎಸ್ ನವರು ಯಾರನ್ನು ಅಭ್ಯರ್ಥಿಯಾಗಿ ಕಣಕ್ಕೆ ಇಳಿಸುತ್ತಾರೆಂಬುದು ನಮಗೆ ಮುಖ್ಯವಲ್ಲ. ನಮ್ಮ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ ಅವರು ಚನಪಟ್ಟಣ ಕ್ಷೇತ್ರದಲ್ಲಿ ಗೆಲುವು ಸಾಧಿಸಲಿದ್ದಾರೆ ಎಂದರು.

ಬಸವರಾಜ ಬೊಮ್ಮಾಯಿ ವಿರುದ್ಧ ಸ್ಪರ್ಧಿಸಿದ್ದರು :

2023ರ ವಿಧಾನಸಭಾ ಚುನಾವಣೆಯಲ್ಲಿ ಅವರು ಆಗ ಮುಖ್ಯಮಂತ್ರಿ ಆಗಿದ್ದ ಬಸವರಾಜ ಬೊಮ್ಮಾಯಿ ಅವರ ಸ್ಪರ್ಧಿಸಿ ಸೋಲು ಕಂಡಿದ್ದರು. ಈ ಸಲ ಕಾಂಗ್ರೆಸ್ ಟಿಕೆಟ್ ಗೆ ಯಾಸಿರ್ ಶತಪ್ರಯತ್ನ ಮಾಡಿದ್ದರು. ಕೊನೆಗೂ ಅಳೆದು ತೂಗಿರುವ ಕಾಂಗ್ರೆಸ್ ಪಕ್ಷ ಅಲ್ಪಸಂಖ್ಯಾತರಿಗೆ ಮತ್ತೆ ಟಿಕೆಟ್ ನೀಡಿದೆ. ಅಲ್ಪಸಂಖ್ಯಾತ ಮುಸ್ಲಿಂ ಸಮುದಾಯಕ್ಕೆ ಟಿಕೆಟ್ ನೀಡಲು ಬಾರಿ ಒತ್ತಡ ಬಂದಿದ್ದವು. ಈ ಹಿನ್ನಲೆಯಲ್ಲಿ ಈ ಸಲದ ಉಪಚುನಾವಣೆಯಲ್ಲೂ ಯಾಸಿರ್ ಅಹ್ಮದ್ ಖಾನ್ ಪಠಾಣ ಅವರಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ.

ಟಿಕೆಟ್​ಗಾಗಿ ಕಾಂಗ್ರೆಸ್​​ನಲ್ಲಿ ಭಾರಿ ಪೈಪೋಟಿ ನಡೆದಿತ್ತು. ಕಳೆದ ಐದು ಚುನಾವಣೆಗಳಲ್ಲೂ ಸಹ ಮುಸ್ಲಿಂ ಸಮುದಾಯಕ್ಕೆ ಟಿಕೆಟ್​ ನೀಡಲಾಗಿದ್ದು, ಈ ಬಾರಿ ಲಿಂಗಾಯತ ಸಮುದಾಯಕ್ಕೆ ಟಿಕೆಟ್​ ನೀಡಬೇಕೆಂಬ ಬಲವಾದ ಒತ್ತಾಯ ಕೇಳಿಬಂದಿತ್ತು.
ಅಲ್ಪಸಂಖ್ಯಾ ಸಮುದಾಯದಲ್ಲಿಯೂ ಟಿಕೆಟ್‌ಗಾಗಿ ಭಾರಿ ಪೈಪೋಟಿ ನಡೆದಿತ್ತು. ಮಾಜಿ ಶಾಸಕ ಅಜ್ಜಂಪೀಋ ಖಾದ್ರಿ ಹಾಗೂ ಯಾಸೀರ್ ಖಾನ್ ಪಠಾಣ್ ನಡುವೆ ಪೈಪೋಟಿ ಇತ್ತು. ಮತ್ತೊಂದೆಡೆ ಲಿಂಗಾಯತ ಸಮುದಾಯದಿಂದ ಸಂಜೀವ್ ನೀರಲಗಿ , ಸೋಮಣ್ಣ ಬೇವಿನಮರ ಅವರು ಟಿಕೆಟ್​ಗಾಗಿ ಪ್ರಯತ್ನ ನಡೆಸಿದ್ದರು. ಅಂತಿಮವಾಗಿ ಹೈಕಮಾಂಡ್​ ಯಾಸೀರ್ ಖಾನ್ ಪಠಾಣ್ ಅವರಿಗೆ ಮತ್ತೆ ಮಣೆ ಹಾಕಿದೆ.

ಹಾನಗಲ್ ತಾಲೂಕು ಬೊಮ್ಮನಹಳ್ಳಿ ಗ್ರಾಮದ ಅವರು ಶಿಗ್ಗಾವಿ ಮತಕ್ಷೇತ್ರದಲ್ಲಿ ಪಕ್ಷವನ್ನು ಸಂಘಟಿಸಿದ್ದರು. ಕಾಂಗ್ರೆಸ್ ಟಿಕೆಟ್ ಗೆ ಪೈಪೋಟಿ ನಡೆಸಿ ಕೊನೆಗೂ ಟಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಶಿಗ್ಗಾವಿ ಮತಕ್ಷೇತ್ರದಲ್ಲಿ ಅಲ್ಪಸಂಖ್ಯಾತ ಮುಸ್ಲಿಂ ಮತದಾರರ ಸಂಖ್ಯೆ ಗಣನೀಯ ಪ್ರಮಾಣದಲ್ಲಿದೆ.

ಯಾಸಿರ್ ಅವರಿಗೆ ಎದುರಾಳಿಯಾಗಿ ಬಿಜೆಪಿಯಿಂದ ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಸಂಸದ ಬಸವರಾಜ ಬೊಮ್ಮಾಯಿ ಅವರ ಸುಪುತ್ರ ಭರತ್ ಸ್ಪರ್ಧೆ ನಡೆಸುತ್ತಿದ್ದು ಈ ಸಲ ಪೈಪೋಟಿ ನಡೆಯುವ ಸಾಧ್ಯತೆ ಇದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿಭೋಜಶಾಲಾ–ಕಮಾಲ್ ಮೌಲಾ ಪ್ರಕರಣ: ಶುಕ್ರವಾರದ ನಮಾಜ್‌ಗೆ ಮುಸ್ಲಿಮರಿಗೆ ಪ್ರತ್ಯೇಕ ಸ್ಥಳ ಕಲ್ಪಿಸಲು ಸುಪ್ರೀಂ ಕೋರ್ಟ್ ನಿರ್ದೇಶನ2022ರಲ್ಲಿ ಉಕ್ರೇನ್ ಮೇಲೆ ಅಣ್ವಸ್ತ್ರ ದಾಳಿ ನಡೆಸದಂತೆ ರಷ್ಯಾವನ್ನು ತಡೆದದ್ದು ಮೋದಿ : ಪೋಲೆಂಡ್ ಸಚಿವರ ಹೇಳಿಕೆಚೊಚ್ಚಲ ಬಾಹ್ಯಾಕಾಶ ಯಾನ ಕೈಗೊಂಡ ಭಾರತೀಯ ಮೂಲದ ಗಗನಯಾತ್ರಿ ಅನಿಲ ಮೆನನ್ಸಾವೂ ಬೇರ್ಪಡಿಸಲಿಲ್ಲ ಇವರಿಬ್ಬರ ಬಂಧವನ್ನು…; ಯಜಮಾನನ ಶವಯಾತ್ರೆಯಲ್ಲೇ ಪ್ರಾಣ ಬಿಟ್ಟ ನಿಷ್ಠಾವಂತ ನಾಯಿ ʼದುಗ್ಗುʼ