Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

BREAKING ಲೋಕಸಭೆ ಚುನಾವಣೆ ದಿನಾಂಕ ಘೋಷಣೆ..!


⏩ *ದೇಶದಲ್ಲಿ 7 ಹಂತದಲ್ಲಿ ಈ ಸಲ ಚುನಾವಣೆ*


▶️ *ಏಪ್ರಿಲ್ 19 ಮೊದಲ ಹಂತ,ಏಪ್ರಿಲ್ 26 ಎರಡನೆಯ ಹಂತ, ಮೇ. 7  ಮೂರನೆಯ ಹಂತ*


*ಮೇ 13 ನಾಲ್ಕನೆಯ ಹಂತ, ಮೇ 20 ;5 ನೆಯ ಹಂತ,*
*ಮೇ 25 ;6 ನೆಯ ಹಂತ, ಜೂನ 1 ರಂದು 7 ನೆಯ ಹಂತ ರಂದು ಮತದಾನ*


▶️  *ಜೂನ್ 4ರಂದು ಫಲಿತಾಂಶ*


ಜನ ಜೀವಾಳ ಜಾಲ: ದೆಹಲಿ :ಇಡೀ ದೇಶದ ಗಮನ ಸೆಳೆದಿರುವ ಲೋಕಸಭಾ ಚುನಾವಣೆ ದಿನಾಂಕ ಘೋಷಣೆಯಾಗಿದೆ.

ಭಾರತೀಯ ಚುನಾವಣಾ ಆಯೋಗ ಇಂದು ಸುದ್ದಿಗೋಷ್ಠಿಯಲ್ಲಿ ಚುನಾವಣೆಯ ದಿನಾಂಕಗಳನ್ನು ಪ್ರಕಟಿಸಿದೆ‌.
ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು ಚುನಾವಣೆಯ ದಿನಾಂಕಗಳನ್ನು ಘೋಷಿಸಿದರು.

ಲೋಕಸಭಾ ಚುನಾವಣೆ ನಡೆಸಲು ಆಯೋಗ ಸಿದ್ಧವಾಗಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದರು.

ದೆಹಲಿಯ ವಿಜ್ಞಾನ ಭವನದಲ್ಲಿ ನಡೆಯುತ್ತಿರುವ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿಯೊಂದು ಚುನಾವಣೆಯೂ ನಮಗೆ ಪರೀಕ್ಷೆ ಇದ್ದಂತೆ. ಮುಕ್ತ ನ್ಯಾಯಸಮ್ಮತ, ಪಾರದರ್ಶಕ ಚುನಾವಣೆ ನಮ್ಮ ಉದ್ದೇಶವಾಗಿದೆ. ದೇಶಾದ್ಯಂತ 97 ಕೋಟಿ ಮತದಾರರು ಮತ ಚಲಾಯಿಸಲಿದ್ದಾರೆ. ದೇಶಾದ್ಯಂತ 10.5 ಲಕ್ಷ ಮತದಾನ ಕೇಂದ್ರಗಳು ಇದ್ದು, ಚುನಾವಣಾ ಕರ್ತವ್ಯಕ್ಕೆ ಒಂದೂವರೆ ಕೋಟಿ ಸಿಬ್ಬಂದಿ ಬಳಕೆ ಮಾಡಲಾಗುವುದು. ಮತದಾನಕ್ಕೆ ಒಟ್ಟು 55 ಲಕ್ಷ ಇವಿಎಂಗಳ ವ್ಯವಸ್ಥೆ ಮಾಡಲಾಗುವುದು ಎಂದರು.

ಮೊದಲ ಬಾರಿ ಮತಚಲಾವಣೆ ಮಾಡಲಿದ್ದಾರೆ 1.8 ಕೋಟಿ ಮತದಾರರು: ದೇಶದಲ್ಲಿ 1.8 ಕೋಟಿ ಮತದಾರರು ಮೊದಲ ಬಾರಿಗೆ ಮತಚಲಾವಣೆ ಮಾಡಲಿದ್ದಾರೆ. 49.7 ಕೋಟಿ ಪುರುಷರು, 47.1 ಕೋಟಿ ಮಹಿಳಾ ಮತದಾರರಿದ್ದಾರೆ. 48 ಸಾವಿರ ತೃತೀಯ ಲಿಂಗಿ ಮತದಾರರು ಮತಚಲಾಯಿಸಲಿದ್ದಾರೆ. 85 ವರ್ಷ ಮೇಲ್ಪಟ್ಟ 82 ಲಕ್ಷ ಮತದಾರರು ಮತಚಲಾಯಿಸಲಿದ್ದಾರೆ. 19.74 ಕೋಟಿ ಯುವ ಮತದಾರರು ಮತ ಚಲಾಯಿಸಲಿದ್ದಾರೆ. 12 ರಾಜ್ಯಗಳಲ್ಲಿ ಪುರುಷ ಮತದಾರಗಿಂತ ಮಹಿಳಾ ಮತದಾರರ ಸಂಖ್ಯೆ ಹೆಚ್ಚಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾ ಕುಮಾರ್ ಹೇಳಿದರು.

ರಾಷ್ಟ್ರಕ್ಕೆ ನಿಜವಾದ ಹಬ್ಬದ, ಪ್ರಜಾಸತ್ತಾತ್ಮಕ ವಾತಾವರಣವನ್ನು ನೀಡಲು ನಾವು ಬದ್ಧರಾಗಿದ್ದೇವೆ. 17 ನೇ ಲೋಕಸಭೆಯ ಅವಧಿಯು 16 ಜೂನ್ 2024 ರಂದು ಮುಕ್ತಾಯಗೊಳ್ಳಲಿದೆ. ಆಂಧ್ರಪ್ರದೇಶ, ಒಡಿಶಾದ ಶಾಸನ ಸಭೆಗಳ ಅವಧಿ, ಅರುಣಾಚಲ ಪ್ರದೇಶ ಮತ್ತು ಸಿಕ್ಕಿಂ ಕೂಡ ಜೂನ್ 2024 ರಲ್ಲಿ ಮುಕ್ತಾಯಗೊಳ್ಳಲಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣೆಗಳು ನಡೆಯಲಿವೆ ಎಂದರು.

ದಿವ್ಯಾಂಗರಿಗೆ ಮನೆಯಿಂದಲೇ ಮತದಾನಕ್ಕೆಅವಕಾಶ: ಮತದಾನ ಕೇಂದ್ರಗಳಲ್ಲಿ ನೀರು, ಶೌಚಾಲಯ, ಹೆಲ್ಪಡೆಸ್ಕ್ ವಿದ್ಯುತ್ ಸೇರಿ ಮೂಲಕ ಸೌಕರ್ಯಗಳ ವ್ಯವಸ್ಥೆ ಮಾಡಲಾಗುತ್ತದೆ. 85 ವರ್ಷ ಮೇಲ್ಪಟ್ಟವರಿಗೆ ಮನೆಯಿಂದಲೇ ಮತದಾನಕ್ಕೆ ವ್ಯವಸ್ಥೆ ಮಾಡಲಾಗುವುದು. 40%ಕ್ಕೂ ಹೆಚ್ಚು ದಿವ್ಯಾಂಗರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶ ಕಲ್ಪಿಸಲಾಗುವುದು. ಮತದಾನ ಕೇಂದ್ರಗಳಲ್ಲಿ ವೀಲ್ ಚೇ‌ರ್ ವ್ಯವಸ್ಥೆ ಇರಲಿದೆ.

ಕರ್ನಾಟಕದಲ್ಲಿ 2 ಹಂತದ ಚುನಾವಣೆ ನಡೆಯಲಿದೆ. ಮೊದಲ ಹಂತವು ಏ.26ರಂದು ರಾಜ್ಯದ ದಕ್ಷಿಣ ಭಾಗದಲ್ಲಿ ಮತದಾನ ನಡೆದರೆ, ಮೇ 7ರಂದು ಉತ್ತರ ಕರ್ನಾಟಕ ಭಾಗದಲ್ಲಿ ಎರಡನೇ ಹಂತದ ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಸಂಸದ ಶೆಟ್ಟರ್ ಸಭೆವಿದ್ಯಾರ್ಥಿಗಳು ಗಣಕೀಕೃತ ಗ್ರಂಥಾಲಯ ಸದುಪಯೋಗ ಪಡಿಸಿಕೊಳ್ಳಬೇಕು: ಡಾ.ಪ್ರವೀಣ ಹುಲ್ಲೋಳಿಭಾರತ–ಬ್ರಿಟನ್ ಮುಕ್ತ ವ್ಯಾಪಾರ ಒಪ್ಪಂದ ಜಾರಿ : ಯಾವ ವಸ್ತುಗಳು ಅಗ್ಗವಾಗಲಿವೆ ? ಯಾವ್ಯಾವುದು ದುಬಾರಿಯೇ ಇರಲಿವೆ ?ಪ್ರಧಾನಿ ನಿವಾಸದಲ್ಲಿ ಬಿಜೆಪಿ ಉನ್ನತ ನಾಯಕರ ಸಭೆ: ಸಂಪುಟ ಪುನಾರಚನೆ ಕುತೂಹಲಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿ