Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಜಾತಿ ಗಣತಿ ಅವಧಿ ವಿಸ್ತರಣೆ; ರಾಜ್ಯಾದ್ಯಂತ ಶಾಲಾ ಸಮಯದಲ್ಲಿ ಬದಲಾವಣೆ

ಬೆಂಗಳೂರು: ಅವಧಿಯೊಳಗೆ ಜಾತಿ ಗಣತಿ ಮುಗಿಯದ ಕಾರಣ ಅದರ ಅವಧಿ ವಿಸ್ತರಣೆ ಮಾಡಲಾಗಿದೆ. ಹೀಗಾಗಿ ಕರ್ನಾಟಕದಾದ್ಯಂತ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಸಮಯ ಬದಲಾವಣೆ ಮಾಡಿ ಶಾಲಾ ಶಿಕ್ಷಣ ಇಲಾಖೆ ಸೋಮವಾರ ಆದೇಶ ಹೊರಡಿಸಿದೆ.

ಜಾತಿ ಗಣತಿ ಸಮೀಕ್ಷಾ ಕಾರ್ಯಕ್ಕೆ ಶಾಲಾ ಶಿಕ್ಷಕರನ್ನು ನಿಯೋಜಿಸಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಸಮಯ ಬದಲಾವಣೆ ಮಾಡಿ ಶಾಲಾ ಶಿಕ್ಷಣ ಇಲಾಖೆ ಸೋಮವಾರ ಆದೇಶ ಹೊರಡಿಸಿದೆ. ಸಮೀಕ್ಷೆಯ ಅವಧಿಯನ್ನು ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿ ಅಕ್ಟೋಬರ್​ 24ರವರೆಗೆ ವಿಸ್ತರಿಸಲಾಗಿದ್ದು, ಬೆಂಗಳೂರು ಹೊರತುಪಡಿಸಿ ರಾಜ್ಯದ ಇತರ ಭಾಗಗಳಲ್ಲಿಅಕ್ಟೋಬರ್ 12ರವರೆಗೆ ಸಮೀಕ್ಷೆ ದಿನಾಂಕ ವಿಸ್ತರಣೆ ಮಾಡಲಾಗಿದೆ. ಹೀಗಾಗಿ ಅಕ್ಟೋಬರ್ 8 ರಿಂದ ಶಾಲಾ ಸಮಯವನ್ನು ಪರಿಷ್ಕರಣೆ ಮಾಡಲಾಗಿದೆ.
ಕಳೆದ ಸೆಪ್ಟೆಂಬರ್ 22ರಿಂದ ಜಾತಿ ಗಣತಿ ಆರಂಭವಾಗಿದ್ದು,. ಈ ಗಣತಿಗೆ ರಾಜ್ಯ ಸರ್ಕಾರ ಅಕ್ಟೋಬರ್ 7ರಂದು ಡೆಡ್​ಲೈನ್ ನೀಡಿತ್ತು. ಆದರೆ ಸರ್ಕಾರಕ್ಕೆ ಕೊಟ್ಟ ಗಡುವಿನೊಳಗೆ ಸಮೀಕ್ಷೆ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. ಅಕ್ಟೋಬರ್ 8 ರಿಂದ ಶಾಲಾ ತರಗತಿ ಸಮಯವನ್ನು ಬೆಳಿಗ್ಗೆ 8ರಿಂದ ಮಧ್ಯಾಹ್ನ 1 ಗಂಟೆ ವರೆಗೆ ನಡೆಸಲು ಸೂಚಿಸಲಾಗಿದ್ದು, ನಂತರ ಶಿಕ್ಷಕರು ಸಮೀಕ್ಷೆಗೆ ಹೋಗಬೇಕಾಗಿದೆ.
ಸೆಪ್ಟೆಂಬರ್‌ 22 ರಿಂದ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಆರಂಭಗೊಂಡಿತ್ತು. ಸೆಪ್ಟೆಂಬರ್‌ 22ರಿಂದ ಅಕ್ಟೋಬರ್ 7 ರವರೆಗೆ 15 ದಿನಗಳ ಕಾಲ ಸಮೀಕ್ಷೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದರು. ಆದರೆ ಸಮೀಕ್ಷೆ ಪೂರ್ಣಗೊಂಡಿಲ್ಲ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕನ್ನಡ ಸಾಹಿತ್ಯ ಪರಿಷತ್ ಸರ್ಜರಿಗೆ ಹಾರ್ಟ್ ಸರ್ಜನ್ ಬೆಳಗಾವಿ ಮಣ್ಣಿನ ಮಗಳು ಡಾ.ವಿಜಯಲಕ್ಷ್ಮೀ ಬಾಳೆಕುಂದ್ರಿ ಸಜ್ಜು ಚುನಾವಣೆ ಸ್ಪರ್ಧೆಗೆ ನಿರ್ಧಾರ | ಗೆದ್ದರೆ ಪ್ರಥಮ ಅಧ್ಯಕ್ಷೆ, ತೋಂಟದಾರ್ಯ ಮಠದ ಜಗದ್ಗುರುಗಳು ಬೆಂಬಲಸುಪ್ರೀಂ ಕೋರ್ಟಿನಲ್ಲಿರುವ ಗಡಿ ವಿವಾದ ಪ್ರಕರಣದ ತ್ವರಿತ ವಿಚಾರಣೆಗೆ ಮಹಾರಾಷ್ಟ್ರ ಸರಕಾರ ಅರ್ಜಿ ಸಲ್ಲಿಸಿರುವ ಕುರಿತು ಪ್ರತಿಕ್ರಿಯಿಸಿದ ಅಶೋಕ ಚಂದರಗಿಅಯೋಧ್ಯೆ ರಾಮಮಂದಿರದ ಮೊದಲ ಸಿಇಒ ಆಗಿ ನಿವೃತ್ತ ಏರ್‌ ಮಾರ್ಷಲ್‌ ಜೀತೇಂದ್ರ ಮಿಶ್ರ ನೇಮಕಸುಪ್ರೀಂ ಕೋರ್ಟಿನಲ್ಲಿರುವ ಗಡಿ ವಿವಾದ ಪ್ರಕರಣದ ತ್ವರಿತ ವಿಚಾರಣೆಗೆ ಮಹಾರಾಷ್ಟ್ರ ಸರಕಾರ ಅರ್ಜಿ ಸಲ್ಲಿಸಿರುವ ಕುರಿತು ಪ್ರತಿಕ್ರಿಯಿಸಿದ ಅಶೋಕ ಚಂದರಗಿ8 ಜನ ಮೊಬೈಲ್ ಕಳ್ಳರನ್ನು ಬಂಧಿಸಿದ ಕಟಕೋಳ ಪೊಲೀಸರು200 ವರ್ಷಗಳ ಬಳಿಕ ಕುಟುಂಬದಲ್ಲಿ ಹೆಣ್ಣು ಮಗುವಿನ ಜನನ : ರಥದಲ್ಲಿ ಕುಳ್ಳಿರಿಸಿ ಮೆರವಣಿಗೆ ಮೂಲಕ ಮನೆಗೆ ಕರೆತಂದ ಕುಟುಂಬ !ನಕಲಿ ದಾಖಲೆ ಸೃಷ್ಟಿಸಿ ಜಮೀನು ಮಾರಾಟ ಮಾಡಿದ್ದ ಅಜ್ಜಿಯ ಬಂಧನಪುತ್ರಿಯರ ಶಿಕ್ಷಣಕ್ಕಾಗಿ ಸೀರೆಯುಟ್ಟು ಬರಿಗಾಲಿನಲ್ಲಿ ಓಡಿ ʼಮ್ಯಾರಥಾನ್‌ʼನಲ್ಲಿ ಮೊದಲ ಸ್ಥಾನ ಪಡೆದ 47 ವರ್ಷದ ತಾಯಿ !ರಷ್ಯಾ ಅತಿಹೆಚ್ಚು ತೈಲ ಉತ್ಪಾದನೆ ಮಾಡುತ್ತಿದ್ರೂ ಈಗ ಅದಕ್ಕೇ ದಾಖಲೆ ಪ್ರಮಾಣದಲ್ಲಿ ಪೆಟ್ರೋಲ್ ಪೂರೈಸುತ್ತಿರುವ ಭಾರತ ! ಕಾರಣ ?ವೈಶ್ಯ ಸಮಾಜದ ಏಕತೆ, ಪ್ರಗತಿಗೆ ಸೆ.6ರಂದು ಬೆಳಗಾವಿಯಲ್ಲಿ ವೈಶ್ಯ ಸಮ್ಮೇಳನ