Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ವಿಶ್ವ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದಕ್ಕೆ 309 ವರ್ಷಗಳ ಸಂಭ್ರಮ

ತಿರುಪತಿ : ವಿಶ್ವದ ಶ್ರೀಮಂತ ದೇವಸ್ಥಾನ ಎನ್ನುವ ಹೆಗ್ಗಳಿಕೆಗೆ ತಿರುಪತಿಯ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನ ಪಾತ್ರವಾಗಿದ್ದು ವರ್ಷದಿಂದ ವರ್ಷಕ್ಕೆ ಈ ದೇವಸ್ಥಾನದ ಆದಾಯ ಹೆಚ್ಚಾಗುತ್ತಿದೆ. ಇಲ್ಲಿನ ದೇವರು ಎಷ್ಟು ಪ್ರಸಿದ್ದವೋ ಈ ದೇವಸ್ಥಾನದಲ್ಲಿ ನೀಡುವ ಲಡ್ಡು ಅಷ್ಟೇ ಪ್ರಸಿದ್ದ. ಈ ಪವಿತ್ರ ಪ್ರಸಾದಕ್ಕೆ ಆರಂಭವಾಗಿ 309 ವರ್ಷವಾಗಿದೆ.

ಪ್ರಸಿದ್ಧ ತಿರುಪತಿ ವೆಂಕಟೇಶ್ವರ ದೇವಾಲಯದ 'ತಿರುಪತಿ ಲಡ್ಡು' ಪ್ರಸಾದ ನೆನೆದರೆ ಭಕ್ತಿಯ ಜೊತೆಗೆ ಬಾಯಲ್ಲಿ ನೀರು ಬರುತ್ತದೆ. ತುಪ್ಪ ಮತ್ತು ಏಲಕ್ಕಿ ಆಸ್ವಾದ ಹೊಂದಿರುವ ಈ ಲಡ್ಡು ವಿಶ್ವ ಪ್ರಸಿದ್ಧ. ಈಗ ಈ ಪವಿತ್ರ ಪ್ರಸಾದಕ್ಕೆ 309 ವರ್ಷ. ಇದನ್ನು ಮೊದಲ ಬಾರಿಗೆ 1715 ರ ಆಗಸ್ಟ್ 2 ರಂದು ಪ್ರಾರಂಭಿಸಲಾಯಿತು.

ನಂಬಿಕೆಗಳ ಪ್ರಕಾರ ಇಲ್ಲಿನ ಪ್ರಸಾದ ಸ್ವೀಕರಿಸದೆ ತಿರುಪತಿ ದೇವಸ್ಥಾನ ಯಾತ್ರೆ ಸಂಪೂರ್ಣವಾಗುವುದಿಲ್ಲ ಎನ್ನಲಾಗುತ್ತದೆ. ಹಾಗಾಗಿ ಇಲ್ಲಿಗೆ ಬಂದ ಭಕ್ತರು ಲಡ್ಡು ಪ್ರಸಾದ ಸ್ವೀಕರಿಸದೆಯೇ ಮನೆಗೆ ತೆರಳುವುದಿಲ್ಲ.

ತಿರುಮಲ ತಿರುಪತಿ ದೇವಸ್ಥಾನ (ಟಿಟಿಡಿ) ಅಧಿಕಾರಿಗಳ ಪ್ರಕಾರ 2014ರಲ್ಲಿ 90 ದಶಲಕ್ಷ ಲಡ್ಡುಗಳನ್ನು ಭಕ್ತಾದಿಗಳಿಗೆ ನೀಡಲಾಗಿದೆಯಂತೆ. ಇಲ್ಲಿ ಸಬ್ಸಿಡಿ ಬೆಲೆಯಲ್ಲಿ ಪ್ರಸಾದ ಮಾರಲಾಗುತ್ತದೆ. ಹಾಗಾಗಿ 10 ರುಪಾಯಿಗೆ ಎರಡು ಲಡ್ಡುಗಳನ್ನು ನೀಡಲಾಗುತ್ತದೆ. ಪ್ರಸಾದದ ಮಾರಾಟವೇ ದೇವಸ್ಥಾನಕ್ಕೆ ಒಳ್ಳೆಯ ಆದಾಯ ತಂದುಕೊಡುತ್ತದೆ.

ಇಲ್ಲಿ ನಡೆಯುವ ಬ್ರಹ್ಮೋತ್ಸವದ ಸಮಯದಲ್ಲಿ ಈ ಲಡ್ಡಿಗೆ ಅಪಾರ ಬೇಡಿಕೆಯಿರುತ್ತದಂತೆ. ಇಲ್ಲಿ ಪ್ರತಿನಿತ್ಯ 270 ಜನ ಬಾಣಸಿಗರು ಸೇರಿದಂತೆ 620 ಜನ ಲಡ್ಡು ತಯಾರಿಕಾ ಘಟಕದಲ್ಲಿ ಕೆಲಸ ಮಾಡುತ್ತಾರೆ ಎಂದು ಇಲ್ಲಿನ ಅಧಿಕಾರಿಗಳು ಹೇಳುತ್ತಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಸಂಸದ ಶೆಟ್ಟರ್ ಸಭೆವಿದ್ಯಾರ್ಥಿಗಳು ಗಣಕೀಕೃತ ಗ್ರಂಥಾಲಯ ಸದುಪಯೋಗ ಪಡಿಸಿಕೊಳ್ಳಬೇಕು: ಡಾ.ಪ್ರವೀಣ ಹುಲ್ಲೋಳಿಭಾರತ–ಬ್ರಿಟನ್ ಮುಕ್ತ ವ್ಯಾಪಾರ ಒಪ್ಪಂದ ಜಾರಿ : ಯಾವ ವಸ್ತುಗಳು ಅಗ್ಗವಾಗಲಿವೆ ? ಯಾವ್ಯಾವುದು ದುಬಾರಿಯೇ ಇರಲಿವೆ ?ಪ್ರಧಾನಿ ನಿವಾಸದಲ್ಲಿ ಬಿಜೆಪಿ ಉನ್ನತ ನಾಯಕರ ಸಭೆ: ಸಂಪುಟ ಪುನಾರಚನೆ ಕುತೂಹಲಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿ