Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕೈಯಲ್ಲಿ ಬರೆದು 100 ಪುಟಗಳ ಬಜೆಟ್ ಮಂಡಿಸಿದ ಛತ್ತೀಸಗಢ ಹಣಕಾಸು ಸಚಿವ

ರಾಯ್‌ಪುರ: ಕಂಪ್ಯೂಟರ್ ಪ್ರತಿ ಅಥವಾ ಟ್ಯಾಬ್ ಬಳಕೆಯ ಈ ಕಾಲದಲ್ಲಿ ಛತ್ತೀಸಗಢದ ಹಣಕಾಸು ಸಚಿವ ಒ.ಪಿ ಚೌಧರಿ ಅವರು 100 ಪುಟಗಳ ಬಜೆಟ್ ಅನ್ನು ಕೈಯಲ್ಲಿ ಬರೆದು ಮಂಡಿಸಿದ್ದಾರೆ.

ಚೌಧರಿ ಅವರು ಸೋಮವಾರ ರಾಜ್ಯದ 2025-26ನೇ ಸಾಲಿನ ಆಯವ್ಯಯ ಮಂಡಿಸಿದ್ದಾರೆ. ₹1.65 ಲಕ್ಷ ಕೋಟಿ ಬಜೆಟ್ ಮಂಡಿಸಿದ್ದಾರೆ.

ಛತ್ತೀಸಗಢ ವಿಧಾನಸಭೆಯ ಇತಿಹಾಸದಲ್ಲಿ ಕಂಪ್ಯೂಟರ್‌ನಲ್ಲಿ ಟೈಪಿಸಿದ ಪ್ರತಿ ಬಳಸದೆ ಹಸ್ತ ಪ್ರತಿಯಲ್ಲಿ ಬಜೆಟ್‌ ಮಂಡನೆಯಾಗಿರುವುದು ಇದೇ
ಮೊದಲ ಬಾರಿಗೆ ಎಂದು ಡೆಕ್ಕನ್ ಕ್ರಾನಿಕಲ್ ವರದಿ ತಿಳಿಸಿದೆ.

ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಚೌಧರಿ ಅವರು, 'ಛತ್ತೀಸಗಢಕ್ಕೆ ಐತಿಹಾಸಿಕ ಉಪಕ್ರಮ. ರಾಜ್ಯದ ಮೊದಲ ಕೈಬರಹದ ಬಜೆಟ್ ಅನ್ನು ವಿಧಾನಸಭೆಯಲ್ಲಿ ಮಂಡಿಸಲಾಯಿತು. ಈ 100 ಪುಟಗಳ ಬಜೆಟ್ ಸಂಪ್ರದಾಯವು ಸ್ವಂತಿಕೆಯ ಹೊಸ ಉದಾಹರಣೆಯಾಗಿದೆ' ಎಂದು ಬರೆದುಕೊಂಡಿದ್ದಾರೆ.

ಒ.ಪಿ. ಚೌಧರಿ ಈ ಹಿಂದೆ ರಾಯ್‌ಪುರದ ಜಿಲ್ಲಾಧಿಕಾರಿಯಾಗಿದ್ದರು. ಮೊದಲ ಪ್ರಯತ್ನದಲ್ಲೇ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ 22 ನೇ ವಯಸ್ಸಿನಲ್ಲಿ ಐಎಎಸ್ ಅಧಿಕಾರಿಯಾದ ಹೆಗ್ಗುರುತು ಇವರದ್ದು.

ಛತ್ತೀಸಗಢದಲ್ಲಿ ಬಿಜೆಪಿ ಆಡಳಿತವಿದ್ದು, ವಿಷ್ಣು ದೇವ್ ಸಾಯಿ ಮುಖ್ಯಮಂತ್ರಿಯಾಗಿದ್ದಾರೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಪಾಲರ ಪತ್ನಿಯ ಆರೋಗ್ಯದಲ್ಲಿ ಏರುಪೇರು :  ದಿಢೀರ್ ಇಂದೋರ್ ಗೆ ತೆರಳಿದ ಗೆಹಲೋಟ್ -ಸಿಎಂ ರಾಜೀನಾಮೆ ಪತ್ರ ಯಾರಿಗೆ ಸಲ್ಲಿಸುತ್ತಾರೆ ?ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರು