Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಲಿಂಗರಾಜ ಕಾಲೇಜಿನ ಎನ್‌ಎಸ್‌ಎಸ್ ಘಟಕದಿಂದ ಕಣಬರಗಿ ಗ್ರಾಮದಲ್ಲಿ ಸ್ವಚ್ಛತಾ ಅಭಿಯಾನ

ಬೆಳಗಾವಿ : ಲಿಂಗರಾಜ ಕಾಲೇಜಿನ ಎನ್‌ಎಸ್‌ಎಸ್ ಘಟಕದ ವತಿಯಿಂದ ಮಹಾನಗರ ಪಾಲಿಕೆ ಹಾಗೂ ಯೂಥ್ ಫಾರ್ ಸೇವಾ ಸಹಯೋಗದಲ್ಲಿ ಕಣಬರಗಿ ಗ್ರಾಮದಲ್ಲಿ ಸ್ವಚ್ಛತಾ ಅಭಿಯಾನ, ‘ಹರ್ ಘರ್ ತಿರಂಗಾ’ ಹಾಗೂ ಸಸಿ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ನೂರಕ್ಕೂ ಹೆಚ್ಚು ಎನ್‌ಎಸ್‌ಎಸ್ ಸ್ವಯಂಸೇವಕ ವಿದ್ಯಾರ್ಥಿಗಳು ಪಾಲ್ಗೊಂಡು ಗ್ರಾಮದಲ್ಲಿ ಸ್ವಚ್ಛತಾ ಕಾರ್ಯ ಕೈಗೊಂಡರು. ಮನೆಮನೆಗೆ ತಿರಂಗಾ ಅಭಿಯಾನದ ಕುರಿತು ಜಾಗೃತಿ ಮೂಡಿಸುವುದರ ಜೊತೆಗೆ ಸಸಿಗಳನ್ನು ನೆಟ್ಟು ಪರಿಸರ ಸಂರಕ್ಷಣೆಯ ಸಂದೇಶ ಸಾರಿದರು.

 ಎನ್‌ಎಸ್‌ಎಸ್ ಸಂಯೋಜನಾಧಿಕಾರಿ ಡಾ. ಶಶಿಕಾಂತ ಕೊಣ್ಣೂರು ಮಾತನಾಡಿ, “ಗ್ರಾಮಗಳು ವಿಕಾಸವಾದರೆ ಭಾರತ ವಿಕಾಸವಾಗುತ್ತದೆ. ಗ್ರಾಮಗಳ ಅಭಿವೃದ್ಧಿ ಮಹಾತ್ಮ ಗಾಂಧೀಜಿಯವರ ಕನಸಾಗಿತ್ತು. ಆದರೆ ಅದನ್ನು ಇಂದಿಗೂ ಸಂಪೂರ್ಣವಾಗಿ ಸಾಧಿಸುವಲ್ಲಿ ನಾವು ಹಿಂದೆ ಬಿದ್ದಿದ್ದೇವೆ. ಗ್ರಾಮಗಳ ಅಭಿವೃದ್ಧಿಗೆ ಸರ್ಕಾರದೊಂದಿಗೆ ಯುವಜನರೂ ಹೆಚ್ಚಿನ ಜವಾಬ್ದಾರಿ ವಹಿಸಬೇಕು” ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

 ಸಂತೋಷ್ ಖೋತ್, ಮಹಾನಗರ ಪಾಲಿಕೆಯ ಸಿಬ್ಬಂದಿ ಹಾಗೂ ಎನ್‌ಎಸ್‌ಎಸ್ ಸ್ವಯಂಸೇವಕರು ಉಪಸ್ಥಿತರಿದ್ದರು. ವಿದ್ಯಾರ್ಥಿಗಳು ಇಡೀ ದಿನ ಗ್ರಾಮದಲ್ಲಿ ಸೇವಾ ಕಾರ್ಯದಲ್ಲಿ ತೊಡಗಿಸಿಕೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕನ್ನಡ ಸಾಹಿತ್ಯ ಪರಿಷತ್ ಸರ್ಜರಿಗೆ ಹಾರ್ಟ್ ಸರ್ಜನ್ ಬೆಳಗಾವಿ ಮಣ್ಣಿನ ಮಗಳು ಡಾ.ವಿಜಯಲಕ್ಷ್ಮೀ ಬಾಳೆಕುಂದ್ರಿ ಸಜ್ಜು ಚುನಾವಣೆ ಸ್ಪರ್ಧೆಗೆ ನಿರ್ಧಾರ | ಗೆದ್ದರೆ ಪ್ರಥಮ ಅಧ್ಯಕ್ಷೆ, ತೋಂಟದಾರ್ಯ ಮಠದ ಜಗದ್ಗುರುಗಳು ಬೆಂಬಲಸುಪ್ರೀಂ ಕೋರ್ಟಿನಲ್ಲಿರುವ ಗಡಿ ವಿವಾದ ಪ್ರಕರಣದ ತ್ವರಿತ ವಿಚಾರಣೆಗೆ ಮಹಾರಾಷ್ಟ್ರ ಸರಕಾರ ಅರ್ಜಿ ಸಲ್ಲಿಸಿರುವ ಕುರಿತು ಪ್ರತಿಕ್ರಿಯಿಸಿದ ಅಶೋಕ ಚಂದರಗಿಅಯೋಧ್ಯೆ ರಾಮಮಂದಿರದ ಮೊದಲ ಸಿಇಒ ಆಗಿ ನಿವೃತ್ತ ಏರ್‌ ಮಾರ್ಷಲ್‌ ಜೀತೇಂದ್ರ ಮಿಶ್ರ ನೇಮಕಸುಪ್ರೀಂ ಕೋರ್ಟಿನಲ್ಲಿರುವ ಗಡಿ ವಿವಾದ ಪ್ರಕರಣದ ತ್ವರಿತ ವಿಚಾರಣೆಗೆ ಮಹಾರಾಷ್ಟ್ರ ಸರಕಾರ ಅರ್ಜಿ ಸಲ್ಲಿಸಿರುವ ಕುರಿತು ಪ್ರತಿಕ್ರಿಯಿಸಿದ ಅಶೋಕ ಚಂದರಗಿ8 ಜನ ಮೊಬೈಲ್ ಕಳ್ಳರನ್ನು ಬಂಧಿಸಿದ ಕಟಕೋಳ ಪೊಲೀಸರು200 ವರ್ಷಗಳ ಬಳಿಕ ಕುಟುಂಬದಲ್ಲಿ ಹೆಣ್ಣು ಮಗುವಿನ ಜನನ : ರಥದಲ್ಲಿ ಕುಳ್ಳಿರಿಸಿ ಮೆರವಣಿಗೆ ಮೂಲಕ ಮನೆಗೆ ಕರೆತಂದ ಕುಟುಂಬ !ನಕಲಿ ದಾಖಲೆ ಸೃಷ್ಟಿಸಿ ಜಮೀನು ಮಾರಾಟ ಮಾಡಿದ್ದ ಅಜ್ಜಿಯ ಬಂಧನಪುತ್ರಿಯರ ಶಿಕ್ಷಣಕ್ಕಾಗಿ ಸೀರೆಯುಟ್ಟು ಬರಿಗಾಲಿನಲ್ಲಿ ಓಡಿ ʼಮ್ಯಾರಥಾನ್‌ʼನಲ್ಲಿ ಮೊದಲ ಸ್ಥಾನ ಪಡೆದ 47 ವರ್ಷದ ತಾಯಿ !ರಷ್ಯಾ ಅತಿಹೆಚ್ಚು ತೈಲ ಉತ್ಪಾದನೆ ಮಾಡುತ್ತಿದ್ರೂ ಈಗ ಅದಕ್ಕೇ ದಾಖಲೆ ಪ್ರಮಾಣದಲ್ಲಿ ಪೆಟ್ರೋಲ್ ಪೂರೈಸುತ್ತಿರುವ ಭಾರತ ! ಕಾರಣ ?ವೈಶ್ಯ ಸಮಾಜದ ಏಕತೆ, ಪ್ರಗತಿಗೆ ಸೆ.6ರಂದು ಬೆಳಗಾವಿಯಲ್ಲಿ ವೈಶ್ಯ ಸಮ್ಮೇಳನ