Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಜನಾಕ್ರೋಶಕ್ಕೆ ಹೆದರಿ ಕರ್ನಾಟಕದಲ್ಲಿ ಸಿಎಂ ಬದಲಾವಣೆ: ಪ್ರಧಾನಿ ಮೋದಿ  ಗುಡುಗು

ಸೂರತ್/ನವದೆಹಲಿ: ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಯಾದ ಕೆಲವೇ ದಿನಗಳ ಬಳಿಕ, ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ದೇಶದಲ್ಲಿ ಗೊಂದಲದ ವಾತಾವರಣ ಸೃಷ್ಟಿಸುತ್ತಿದೆ ಎಂದು ಆರೋಪಿಸಿರುವ ಅವರು, ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳಲ್ಲಿ ಜನರು ತೀವ್ರ ಅಸಮಾಧಾನಗೊಂಡಿದ್ದಾರೆ ಎಂದು ಹೇಳಿದ್ದಾರೆ.

ಸೂರತ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಕರ್ನಾಟಕದ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಅಲ್ಲಿನ ಜನರಲ್ಲಿ ತೀವ್ರ ಅಸಮಾಧಾನವಿದೆ. ಇದೇ ಕಾರಣಕ್ಕೆ ಕಾಂಗ್ರೆಸ್ ಅಲ್ಲಿ ಮುಖ್ಯಮಂತ್ರಿಯನ್ನು ಬದಲಾಯಿಸಬೇಕಾಗಿ ಬಂದಿತು ಎಂದು ಅವರು ಹೇಳಿದ್ದಾರೆ.

ಕಳೆದ 12 ವರ್ಷಗಳಿಂದ ಕಾಂಗ್ರೆಸ್ ದೇಶದಲ್ಲಿ ಗೊಂದಲದ ವಾತಾವರಣ ಸೃಷ್ಟಿಸಲು ಯತ್ನಿಸುತ್ತಿದೆ. ಆದರೆ ದೇಶದ ಜನರು ಅದಕ್ಕೆ ತಕ್ಕ ಉತ್ತರ ನೀಡಿದ್ದಾರೆ ಎಂದಿದ್ದಾರೆ.

 'ಆತ್ಮನಿರ್ಭರ ಭಾರತ' ಯೋಜನೆಯನ್ನು ಲೇವಡಿ ಮಾಡುವವರ ವಿರುದ್ಧ ವಾಗ್ದಾಳಿ ನಡೆಸಿದ ಅವರು, ದೇಶದಲ್ಲಿ ಕೆಲವು ನಿರಾಶಾವಾದಿಗಳಿದ್ದಾರೆ, ಅವರು ಸದಾ 'ಆತ್ಮನಿರ್ಭರ ಭಾರತ' ಉಪಕ್ರಮವನ್ನು ಅಪಹಾಸ್ಯ ಮಾಡುತ್ತಾರೆ. ಈ ರಾಷ್ಟ್ರೀಯ ಸಂಕಲ್ಪವನ್ನು ಅವರು ನಿರಂತರವಾಗಿ ಕೀಳಾಗಿ ಕಾಣುತ್ತಿದ್ದಾರೆ. ಇವರೇ ಭಾರತವನ್ನು ಯಾವಾಗಲೂ ಇತರ ದೇಶಗಳ ಮೇಲೆ ಅವಲಂಬಿತವಾಗಿರುವಂತೆ ಮಾಡಿದವರು ಎಂದು ಕುಟುಕಿದ್ದಾರೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿಭೋಜಶಾಲಾ–ಕಮಾಲ್ ಮೌಲಾ ಪ್ರಕರಣ: ಶುಕ್ರವಾರದ ನಮಾಜ್‌ಗೆ ಮುಸ್ಲಿಮರಿಗೆ ಪ್ರತ್ಯೇಕ ಸ್ಥಳ ಕಲ್ಪಿಸಲು ಸುಪ್ರೀಂ ಕೋರ್ಟ್ ನಿರ್ದೇಶನ2022ರಲ್ಲಿ ಉಕ್ರೇನ್ ಮೇಲೆ ಅಣ್ವಸ್ತ್ರ ದಾಳಿ ನಡೆಸದಂತೆ ರಷ್ಯಾವನ್ನು ತಡೆದದ್ದು ಮೋದಿ : ಪೋಲೆಂಡ್ ಸಚಿವರ ಹೇಳಿಕೆಚೊಚ್ಚಲ ಬಾಹ್ಯಾಕಾಶ ಯಾನ ಕೈಗೊಂಡ ಭಾರತೀಯ ಮೂಲದ ಗಗನಯಾತ್ರಿ ಅನಿಲ ಮೆನನ್ಸಾವೂ ಬೇರ್ಪಡಿಸಲಿಲ್ಲ ಇವರಿಬ್ಬರ ಬಂಧವನ್ನು…; ಯಜಮಾನನ ಶವಯಾತ್ರೆಯಲ್ಲೇ ಪ್ರಾಣ ಬಿಟ್ಟ ನಿಷ್ಠಾವಂತ ನಾಯಿ ʼದುಗ್ಗುʼ