Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

80 ಸೈನಿಕರಿದ್ದ ಕೊಲಂಬಿಯಾ ಸೇನಾ ವಿಮಾನ ಪತನ

ಬೊಗೋಟಾ: ಎಕ್ವೆಡಾರ್ ಗಡಿಯ ಸಮೀಪವಿರುವ ಪೋರ್ಟೊ ಲೆಗುಯಿಜಾಮೊ ಎಂಬಲ್ಲಿ ಕೊಲಂಬಿಯಾ ಸೇನೆಗೆ ಸೇರಿದ ಸರಕು ಸಾಗಣೆ ವಿಮಾನವೊಂದು ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ಪತನಗೊಂಡಿದೆ. ಈವಿಮಾನದಲ್ಲಿ ಸುಮಾರು 80 ಸೈನಿಕರಿದ್ದರು ಎಂದು ಮಾಧ್ಯಮಗಳು ವರದಿ ಮಾಡಿವೆ.

ಕೊಲಂಬಿಯಾ ವಾಯುಪಡೆಗೆ ಸೇರಿದ ಹರ್ಕ್ಯುಲಿಸ್ C-130 (Hercules C-130) ಅಮೆಜಾನ್ ಪ್ರಾಂತ್ಯದ ಪುಟುಮಾಯೊದ ದುರ್ಗಮ ಪ್ರದೇಶವಾದ ಪೋರ್ಟೊ ಲೆಗುಯಿಜಾಮೊ ಎಂಬಲ್ಲಿ ಪತನಗೊಂಡಿದೆ ಎಂದು ಹೇಳಲಾಗಿದೆ. ಈ ವಿಮಾನವು ಸುಮಾರು 100 ಸೈನಿಕರನ್ನು ಹೊತ್ತೊಯ್ಯುವ ಸಾಮರ್ಥ್ಯ ಹೊಂದಿತ್ತು.
ರಕ್ಷಣಾ ಸಚಿವರ ಹೇಳಿಕೆ:
ಘಟನೆಯ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿರುವ ಕೊಲಂಬಿಯಾದ ರಕ್ಷಣಾ ಸಚಿವ ಪೆಡ್ರೊ ಸ್ಯಾಂಚೆಜ್, “ಸೇನಾ ತುಕಡಿಗಳು ಈಗಾಗಲೇ ಸ್ಥಳಕ್ಕೆ ತಲುಪಿವೆ. ಆದರೆ, ಸಾವು-ನೋವುಗಳ ನಿಖರ ಸಂಖ್ಯೆ ಮತ್ತು ಅಪಘಾತಕ್ಕೆ ಕಾರಣವೇನು ಎಂಬುದು ಇನ್ನೂ ಅಧಿಕೃತವಾಗಿ ತಿಳಿದುಬಂದಿಲ್ಲ ಎಂದು ತಿಳಿಸಿದ್ದಾರೆ. ಅಲ್ಲದೆ, ಅಧಿಕೃತ ಮಾಹಿತಿ ಬರುವವರೆಗೆ ವದಂತಿಗಳನ್ನು ಹಬ್ಬಿಸಬೇಡಿ ಎಂದು ಅವರು ಮನವಿ ಮಾಡಿದ್ದಾರೆ. ಪ್ರಸ್ತುತ ಸ್ಥಳೀಯ ಅಧಿಕಾರಿಗಳಿಂದ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.

ಅಧ್ಯಕ್ಷ ಗುಸ್ತಾವೊ ಪೆಟ್ರೊ ಆಕ್ರೋಶ
ಈ ದುರಂತಕ್ಕೆ ದೇಶದ ಆಡಳಿತಾತ್ಮಕ ವಿಳಂಬವೇ ಕಾರಣ ಎಂದು ಅಧ್ಯಕ್ಷ ಗುಸ್ತಾವೊ ಪೆಟ್ರೊ ಕಿಡಿಕಾರಿದ್ದಾರೆ. ಘಟನೆಯ ಬಗ್ಗೆ ‘X’ (ಟ್ವಿಟ್ಟರ್) ನಲ್ಲಿ ಪ್ರತಿಕ್ರಿಯಿಸಿರುವ ಅವರು ಕಳೆದ 15 ವರ್ಷಗಳಿಂದ ಸೇನೆಯ ಸಾಮರ್ಥ್ಯ ಕುಸಿಯುತ್ತಿದೆ. ಸೇನೆಯನ್ನು ಆಧುನೀಕರಿಸುವ ನನ್ನ ಪ್ರಯತ್ನಕ್ಕೆ ‘ಅಧಿಕಾರಶಾಹಿ ಅಡೆತಡೆಗಳು’ (Bureaucratic difficulties) ಅಡ್ಡಿಯಾಗಿವೆ.ಸೇನೆಯ ಆಧುನೀಕರಣದ ಹಣದಲ್ಲಿ ಒಂದು ಪೈಸೆ ಕಳ್ಳತನವಾಗಿದ್ದರೂ, ಅವರು ನಮ್ಮ ಸೈನಿಕರ ಕೊಲೆಗಾರರು ಎಂದು ಗುಡುಗಿದ್ದಾರೆ.
ಹಳೆಯ ಹೆಲಿಕಾಪ್ಟರ್‌ಗಳ ವೈಫಲ್ಯದಿಂದ ಉಂಟಾಗಿರುವ ಸಮಸ್ಯೆಯನ್ನು ನೀಗಿಸಲು ತಕ್ಷಣವೇ ಹೊಸ ಹೆಲಿಕಾಪ್ಟರ್ ಮತ್ತು ಸಾರಿಗೆ ವಿಮಾನಗಳನ್ನು ಖರೀದಿಸಲು ಆದೇಶಿಸಿರುವುದಾಗಿ ಅವರು ತಿಳಿಸಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಸಂಸದ ಶೆಟ್ಟರ್ ಸಭೆವಿದ್ಯಾರ್ಥಿಗಳು ಗಣಕೀಕೃತ ಗ್ರಂಥಾಲಯ ಸದುಪಯೋಗ ಪಡಿಸಿಕೊಳ್ಳಬೇಕು: ಡಾ.ಪ್ರವೀಣ ಹುಲ್ಲೋಳಿಭಾರತ–ಬ್ರಿಟನ್ ಮುಕ್ತ ವ್ಯಾಪಾರ ಒಪ್ಪಂದ ಜಾರಿ : ಯಾವ ವಸ್ತುಗಳು ಅಗ್ಗವಾಗಲಿವೆ ? ಯಾವ್ಯಾವುದು ದುಬಾರಿಯೇ ಇರಲಿವೆ ?ಪ್ರಧಾನಿ ನಿವಾಸದಲ್ಲಿ ಬಿಜೆಪಿ ಉನ್ನತ ನಾಯಕರ ಸಭೆ: ಸಂಪುಟ ಪುನಾರಚನೆ ಕುತೂಹಲಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿ