Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕನ್ನಡಪರ ಹೋರಾಟಗಾರರ ಕೇಸ್ ವಾಪಸ್: ಸಿಎಂಗೆ ಕಿತ್ತೂರು ಕರ್ನಾಟಕ ಸೇನೆ ವತಿಯಿಂದ ಅಭಿನಂದನೆ

 

ಬೆಳಗಾವಿ : ಕರ್ನಾಟಕದ ಸ್ವಾಭಿಮಾನಿ ಕನ್ನಡಿಗರು ಸೇರಿ ಕನ್ನಡ ನಾಡು ನುಡಿ, ನೆಲ ಜಲ, ಸಂಸ್ಕೃತಿ, ಮಹಿಳೆಯರ ರಕ್ಷಣೆ, ರೈತ, ಕಾರ್ಮಿಕರ ಮತ್ತು ವಿದ್ಯಾರ್ಥಿಗಳ ಹಿತರಕ್ಷಣೆ ಉದ್ಯೋಗ ವ್ಯಾಪಾರ ಸೇರಿ ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ಧಿ ಸಲುವಾಗಿ ಸಾಕಷ್ಟು ಹೋರಾಟಗಳನ್ನು ಮಾಡಿರುತ್ತಾರೆ, ಕನ್ನಡಪರ ಹೋರಾಟಗಾರರ ಮೇಲೆ ವಿವಿಧಡೆ ದಾಖಲಾಗಿರುವ ಎಲ್ಲಾ ಪ್ರಕರಣಗಳನ್ನು ವಾಪಸ್ ಪಡೆಯಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ ಹಿನ್ನೆಲೆಯಲ್ಲಿ ಕಿತ್ತೂರು ಕರ್ನಾಟಕ ಸೇನೆ ರಾಜ್ಯಾಧ್ಯಕ್ಷ ಮಹಾದೇವ ತಳವಾರ ಹರ್ಷ ವ್ಯಕ್ತಪಡಿಸಿದ್ದಾರೆ.

ಕನ್ನಡಪರ ಸಂಘಟನೆಗಳಲ್ಲಿ ಅದರಲ್ಲೂ ಬೆಳಗಾವಿಯಂತಹ ಗಡಿಭಾಗದಲ್ಲಿ ಹಲವಾರು ಬಡ ಕೂಲಿ ಕಾರ್ಮಿಕರು, ಆಟೋ ಚಾಲಕರು, ರೈತರು, ಸಾಹಿತಿಗಳು ಯುವ ಬರಹಗಾರರಿದ್ದು, ತಮ್ಮ ಮನೆ-ಮಠ, ಕುಟುಂಬ ಮತ್ತು ಉದ್ಯೋಗ ಬಿಟ್ಟು ನಾಡು- ನುಡಿ, ನೆಲ-ಜಲ, ಭಾಷೆ ಸಂಸ್ಕೃತಿ ಹೋರಾಟಗಳಲ್ಲಿ ತೊಡಗಿಸಿಕೊಂಡು ಕನ್ನಡ ನಾಡಿಗೆ ಅನನ್ಯ ಕೊಡುಗೆ ನೀಡಿದ್ದಾರೆ, ಆದರೆ ಅಂಥವರ ಮೇಲೆ ದುರುದ್ದೇಶದಿಂದ ಕೂಡಿದ ಎಲ್ಲಾ ಕೇಸ್ ಗಳನ್ನು ಹಿಂತೆಗೆದುಕೊಂಡು ಅವರ ಹಿತ ಕಾಪಾಡಬೇಕು, ಕನ್ನಡಪರ ಹೋರಾಟಗಾರರ ಕೇಸ್ ವಾಪಸ್ ಈ ನಿರ್ಧಾರ ತೆಗೆದುಕೊಂಡ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕನ್ನಡಪರ ಹೋರಾಟಗಾರರ ಪರವಾಗಿ ಹಾಗೂ ಕಿತ್ತೂರು ಕರ್ನಾಟಕ ಸೇನೆ ಪರವಾಗಿ ಬೆಳಗಾವಿಗೆ ಬಂದಾಗ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ.ಆದರೆ ಈ ಹಿಂದೆ ಎಲ್ಲಾ ಮುಖ್ಯಮಂತ್ರಿಗಳು ಆಶ್ವಾಸನೆ ನೀಡಿದಂತೆ ಬರೀ ಆಶ್ವಾಸನೆಯಾಗಿ ಉಳಿಯದೇ ಅನುಷ್ಠಾನಕ್ಕೆ ಬಂದರೆ ಕನ್ನಡಿಗರೆಲ್ಲರ ಪರವಾಗಿ ಅದ್ಧೂರಿಯಾಗಿ ಸನ್ಮಾನಿಸಿ, ಸತ್ಕರಿಸಿ ಅವರ ಋಣ ತೀರಿಸಲಾಗವುದು ಎಂದು ಅವರು ತಿಳಿಸಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಸಂಸದ ಶೆಟ್ಟರ್ ಸಭೆವಿದ್ಯಾರ್ಥಿಗಳು ಗಣಕೀಕೃತ ಗ್ರಂಥಾಲಯ ಸದುಪಯೋಗ ಪಡಿಸಿಕೊಳ್ಳಬೇಕು: ಡಾ.ಪ್ರವೀಣ ಹುಲ್ಲೋಳಿಭಾರತ–ಬ್ರಿಟನ್ ಮುಕ್ತ ವ್ಯಾಪಾರ ಒಪ್ಪಂದ ಜಾರಿ : ಯಾವ ವಸ್ತುಗಳು ಅಗ್ಗವಾಗಲಿವೆ ? ಯಾವ್ಯಾವುದು ದುಬಾರಿಯೇ ಇರಲಿವೆ ?ಪ್ರಧಾನಿ ನಿವಾಸದಲ್ಲಿ ಬಿಜೆಪಿ ಉನ್ನತ ನಾಯಕರ ಸಭೆ: ಸಂಪುಟ ಪುನಾರಚನೆ ಕುತೂಹಲಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿ